ನೈರುತ್ಯ ರೈಲ್ವೆಯಿಂದ ಜಾಗೃತಿ ಅಭಿಯಾನ
Team Udayavani, Jun 12, 2020, 6:08 AM IST
ಹುಬ್ಬಳ್ಳಿ: ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಸುರಕ್ಷತಾ ಶಾಖೆ ಅಂತಾರಾಷ್ಟ್ರೀಯ ಲೆವೆಲ್ ಕ್ರಾಸಿಂಗ್ ಜಾಗೃತಿ ದಿನವನ್ನು ಗುರುವಾರ ಆಚರಿಸಿತು.
ನೈರುತ್ಯ ರೈಲ್ವೆಯ ಪ್ರಧಾನ ಮುಖ್ಯ ಸುರಕ್ಷತಾ ಅಧಿಕಾರಿ ಎಂ.ಎ.ವಿ. ರಾಮಾನುಜನ್, ಹುಬ್ಬಳ್ಳಿ ವಿಭಾಗದ ಹಿರಿಯ ವಿಭಾಗೀಯ ಸುರಕ್ಷತಾ ಅಧಿಕಾರಿ ಜಗದೀಶ್ ಎಸ್. ರುದ್ರಸ್ವಾಮಿ ಮತ್ತು ಸಿಬ್ಬಂದಿಯೊಂದಿಗೆ ಲೆವೆಲ್ ಕ್ರಾಸಿಂಗ್ ಗೇಟ್‌ಗಳಲ್ಲಿ ರೈಲ್ವೆ ಅಪಘಾತ ತಪ್ಪಿಸಲು ಎಲ್‌ಸಿ ಗೇಟ್ ಸಂಖ್ಯೆ 297ರಲ್ಲಿ ಜಾಗೃತಿ ಅಭಿಯಾನ ನಡೆಸಿದರು.
ಕೋವಿಡ್-19ರ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸ್ಯಾನಿಟೈಸರ್ ಬಳಸಿ ಎಂದು ತಿಳಿ ಹೇಳಿ, ಜಾಗೃತಿ ಕರಪತ್ರಗಳನ್ನು ವಿತರಿಸಿದರು. ಲೆವೆಲ್ ಕ್ರಾಸಿಂಗ್ ಗೇಟ್‌ಗಳನ್ನು ಸಮೀಪಿಸುವಾಗ ರಸ್ತೆ ಬಳಕೆದಾರರು ಜಾಗರೂಕರಾಗಿರಲು ಹಾಗೂ ಲೆವೆಲ್ ಕ್ರಾಸಿಂಗ್ ಗೇಟ್‌ಗಳನ್ನು ಮುಚ್ಚಿರುವಾಗ ಅದನ್ನು ದಾಟಲು ಪ್ರಯತ್ನಿಸಬೇಡಿ ಎಂದು ಸೂಚಿಸಿದರು.
ಕೋವಿಡ್-19ರ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಆರ್‌ಟಿಒ ಕಚೇರಿ, ಲೆವೆಲ್ ಕ್ರಾಸಿಂಗ್ ಗೇಟ್‌ಗಳು, ಬಸ್ ಸ್ಟ್ಯಾಂಡ್, ಆಟೋ ರಿಕ್ಷಾ ಸ್ಟ್ಯಾಂಡ್, ದೇವಾಲಯಗಳು, ಪೆಟ್ರೋಲ್ ಪಂಪ್‌ಗಳು, ಹುಬ್ಬಳ್ಳಿಯ ಮುಖ್ಯ ರಸ್ತೆಗಳು ಮತ್ತು ಬೀದಿಗಳಲ್ಲಿ ಜಾಗೃತಿ ಅಭಿಯಾನ ನಡೆಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
Hubli: ಜನರ ದಿಕ್ಕು ತಪ್ಪಿಸಲು ಬಿಜೆಪಿಯಿಂದ ವಕ್ಫ್ ಹೋರಾಟ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.