ಕ್ಷಯರೋಗ ನಿಯಂತ್ರಣಕ್ಕೆ ಜಾಗೃತಿ ಅಗತ್ಯ


Team Udayavani, Nov 26, 2019, 10:32 AM IST

huballi-tdy-3

ಧಾರವಾಡ: ಕ್ಷಯರೋಗ ನಿಯಂತ್ರಿಸಿ ನಿವಾರಿಸಲು, ರೋಗಿಗಳಲ್ಲಿ ಜಾಗೃತಿ ಮೂಡಿಸಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಪ್ರಯತ್ನಿಸಬೇಕು ಎಂದು ಡಿಸಿ ದೀಪಾ ಚೋಳನ್‌ ಹೇಳಿದರು.

ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಿಲ್ಲಾ ಆಸ್ಪತ್ರೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷಯರೋಗ ಬಗ್ಗೆ ಭಯ ಪಡುವ ಅಗತ್ಯವಿಲ್ಲ. ನಿರಂತರ ಔಷಧ ಸೇವಿಸುವುದರಿಂದ ರೋಗ ಪೂರ್ಣ ಗುಣಮುಖವಾಗುತ್ತದೆ ಎಂದರು.

ಮದ್ಯದಲ್ಲಿ ಔಷ ಧ ಸೇವಿಸುವುದನ್ನು ರೋಗಿಯು ಬಿಟ್ಟರೆ ರೋಗ ಮತ್ತಷ್ಟು ಉಲ್ಬನವಾಗುವ (ಡ್ರಗ್‌ ರಜಿಸ್ಟಂಟ್‌ ಟಿಬಿ) ಸಾಧ್ಯತೆ ಇರುತ್ತದೆ. ಆದ್ದರಿಂದ ನಿರಂತರ ಸೇವಿಸಬೇಕು. ಕ್ಷಯರೋಗ ಸಂಬಂಧಿಸಿದ ಚಿಕಿತ್ಸೆ ಮತ್ತು ಔಷ ಧಗಳನ್ನು ಎಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ನೀಡಲಾಗುತ್ತಿದೆ ಎಂದರು.

ಜಿಲ್ಲೆಯ ವಿವಿಧ ಪ್ರದೇಶಗಳ 3,21,221ಜನರನ್ನು ಪರೀಕ್ಷೆಗೊಳಪಡಿಸಿ ಮತ್ತು ಕೊಳಚೆ ಪ್ರದೇಶ, ಟ್ರಕ್‌ ಟರ್ಮಿನಲ್‌, ಶಾಲಾ ಕಾಲೇಜು ಸೇರಿದಂತೆ ವಿವಿಧ ಸ್ಥಳಗಳಲ್ಲಿ “ರೋಗ ದೂರವಿಡಿ; ರೋಗಿಯನ್ನಲ್ಲ’ ಸಂದೇಶದೊಂದಿಗೆ ಜನಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.ಕ್ಷಯರೋಗ ಪತ್ತೆ ಅಭಿಯಾನದಲ್ಲಿ ಕೈಗಾರಿಕಾ ಪ್ರದೇಶ, ಕೊಳಚೆ ಪ್ರದೇಶ, ಶಾಲಾ ಕಾಲೇಜು, ವಾಹನಗಳ ಚಾಲಕರು, ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಜಿಪಂ ಸಿಇಒ ಡಾ|ಬಿ.ಸಿ.ಸತೀಶ ಮಾತನಾಡಿ, 2025ರೊಳಗೆ ಭಾರತವನ್ನು ಕ್ಷಯರೋಗ ಮುಕ್ತ ರಾಷ್ಟ್ರವಾಗಿ ರೂಪಿಸಲು ಭಾರತ ಸರಕಾರ ಗುರಿ ಹೊಂದಿದ್ದು, ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಅಭಿಯಾನವನ್ನು ನವಂಬರ್‌ 25ರಿಂದ ಡಿಸೆಂಬರ್‌ 10ರವರೆಗೆ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಸದುಪಯೋಗ ಪಡೆಯಬೇಕು ಎಂದರು.

ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ|ತನುಜಾ.ಕೆ.ಎನ್‌ ಮಾತನಾಡಿ, ಜಿಲ್ಲೆಯಲ್ಲಿ ಕ್ಷಯರೋಗ ಪತ್ತೆಗಾಗಿ ಎಂಟು ಘಟಕಗಳಿವೆ. ಈಗಾಗಲೇ 1835 ಕ್ಷಯರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪ್ರತಿ ತಿಂಗಳು 1000-1500 ಸಂಶಯಾಸ್ಪದ ಕ್ಷಯರೋಗಿಗಳ ಪರೀಕ್ಷೆ ಮಾಡಲಾಗುತ್ತಿದೆ. ಪ್ರಸ್ತುತ ವಿಶೇಷ ಅಭಿಯಾನದಲ್ಲಿ ಹೆಚ್ಚು ಜನರನ್ನು ಪರೀಕ್ಷಿಸುವ ಗುರಿ ಹೊಂದಲಾಗಿದೆ. ಅಭಿಯಾನ ಯಶಸ್ವಿಗೊಳಿಸಲು 284 ತಂಡ ರಚಿಸಲಾಗಿದೆ. ಇದರಲ್ಲಿ ಆಶಾ, ಆರೋಗ್ಯ ಕಾರ್ಯಕರ್ತರು, ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಸೇರಿದಂತೆ ಒಟ್ಟು 568 ಜನ ಪಾಲ್ಗೊಳ್ಳಲಿದ್ದಾರೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ|ಯಶವಂತ ಮದೀನಕರ ಮಾತನಾಡಿ, ಕ್ಷಯರೋಗ ನಿಯಂತ್ರಣಕ್ಕಾಗಿ ಇಲಾಖೆಯಿಂದ ಹಲವಾರು ಯೋಜನೆ ಜಾರಿಗೊಳಿಸಲಾಗಿದೆ. ಕ್ಷಯರೋಗಿಗಳಿಗೆ ಚಿಕಿತ್ಸೆ ಅವಧಿ ಪೂರ್ಣಗೊಳ್ಳುವರೆಗೆ ಪ್ರತಿ ತಿಂಗಳು ನಿಕ್ಷಯ ಪೋಷಣೆ ಯೋಜನೆಯಡಿ 500 ರೂ.ಗಳ ಸಹಾಯಧನ ನೀಡಲಾಗುತ್ತಿದೆ. ಕ್ಷಯರೋಗಿಯನ್ನು ಗುರುತಿಸುವ ಖಾಸಗಿ ವೈದ್ಯರಿಗೆ 500 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ಶಿವಕುಮಾರ ಮಾನಕರ, ಆರ್‌.ಸಿ.ಎಚ್‌ ಅಧಿಕಾರಿ ಡಾ|ಎಸ್‌.ಎಂ.ಹೊನಕೇರಿ, ನಿವೃತ್ತ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ವಿ.ಡಿ. ಕಪೂರಮಠ, ಜಿಲ್ಲಾ ಸಮೀಕ್ಷಣಾಧಿ ಕಾರಿ ಡಾ|ಸುಜಾತಾ ಹಸವಿಮಠ, ಜಿಲ್ಲಾ ಕುಷ್ಠರೋಗ ನಿಯಂತ್ರಣಾ ಧಿಕಾರಿ ಡಾ|ಶಶಿ ಪಾಟೀಲ, ಜಿಲ್ಲಾಸ್ಪತ್ರೆಯ ವೈದ್ಯರು ಮತ್ತು ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳು, ಸರ್ಕಾರೇತರ ಸಂಸ್ಥೆಗಳ ಪ್ರತಿನಿ ಧಿಗಳು ಭಾಗವಹಿಸಿದ್ದರು. ಕಾರ್ಯಕ್ರಮ ನಂತರ ಡಿಸಿ ದೀಪಾ ಚೋಳನ್‌ ಅವರು ಕ್ಷಯರೋಗ ಕುರಿತ ಜಾಗೃತಿ ಮಾಹಿತಿಯುಳ್ಳ ಸ್ಟಿಕರ್‌ ಅನ್ನು ತಮ್ಮ ಕಾರಿಗೆ ಅಂಟಿಸುವ ಮೂಲಕ ಐಇಸಿಸಾಮಗ್ರಿಗಳ ವಿತರಣೆಗೆ ಜಿಪಂ ಸಿಇಒ ಡಾ|ಬಿ.ಸಿ.ಸತೀಶ ಅವರೊಂದಿಗೆ ಚಾಲನೆ ನೀಡಿದರು.

ಟಾಪ್ ನ್ಯೂಸ್

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

BSY POCSO case: Dharwad High Court adjourns hearing to January 10

BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.