ಮನೆ ಮನೆಗೆ ಹೋಗಿ ಕಾಯ್ದೆ ಮನವರಿಕೆ
Team Udayavani, Dec 29, 2019, 10:28 AM IST
ಹುಬ್ಬಳ್ಳಿ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರಿಗೆ ಸತ್ಯಾಸತ್ಯತೆತಿಳಿಸಿಕೊಡುವ ಗುರುತರ ಜವಾಬ್ದಾರಿ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ ತಿಳಿಸಿದರು.
ಮಂತ್ರಾ ರೆಸಿಡೆನ್ಸಿಯಲ್ಲಿ ಶನಿವಾರ ಬಿಜೆಪಿ ಆಯೋಜಿಸಿದ್ದ ಪೌರತ್ವ ತಿದ್ದುಪಡಿ ಕಾಯ್ದೆ-2019 ವಿಭಾಗ ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪೌರತ್ವ ಕಾಯ್ದೆ ತಿದ್ದುಪಡಿ ದೇಶದ 130 ಕೋಟಿ ಜನರಿಗೆ ಸಂಬಂಧವೇ ಇಲ್ಲ. ಆದರೂ ಕಾಂಗ್ರೆಸ್‌ನವರು ಮುಸಲ್ಮಾನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ನಮ್ಮ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ಹೋಗಿ ಜನರಿಗೆ ಕಾಯ್ದೆ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಅದಕ್ಕೂ ಮುನ್ನ ಕಾರ್ಯಕರ್ತರು ಕಾಯ್ದೆ ಬಗ್ಗೆ ಸಮರ್ಪಕವಾಗಿ ತಿಳಿದುಕೊಳ್ಳುವುದು ಸೂಕ್ತ ಎಂದರು.
ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದಲ್ಲಿ ದಯನೀಯ ಸ್ಥಿತಿಯಲ್ಲಿರುವ, ಭಾರತಕ್ಕೆ ಬರಲು ಇಚ್ಛಿಸುವ ಅಲ್ಲಿನ ಅಲ್ಪಸಂಖ್ಯಾತರಿಗೆ ಪೌರತ್ವ ಒದಗಿಸುವುದು ಕೇಂದ್ರ ಸರಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು. ದೇಶದ ಜನರ ಒಳಿತಿಗೆ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲು ರಾಷ್ಟ್ರೀಯ ಜನಸಂಖ್ಯೆ ನೋಂದಣಿ (ಎನ್‌ಆರ್‌ಪಿ) ಅವಶ್ಯಕವಾಗಿದೆ. ಜನಗಣತಿಗೂ ವಿರೋಧ ವ್ಯಕ್ತಪಡಿಸಲಾಗುತ್ತಿದೆ. ಜನರಿಗೆ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ತಿಳಿಸಿಕೊಡುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ನುಡಿದರು.
ಕಾಂಗ್ರೆಸ್ ಹಚ್ಚಿದ ಬೆಂಕಿ ಆರಿಸಬೇಕಿದೆ: ಶಾಸಕ ಬಿ.ಸಿ. ಪಾಟೀಲ ಮಾತನಾಡಿ, ಕಾಂಗ್ರೆಸ್‌ನ ಖೊಟ್ಟಿ ಜಾತ್ಯತೀತತೆ ಖಂಡಿಸಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದೇನೆ. ಜಾತ್ಯತೀತತೆ ಹೆಸರಿನಲ್ಲಿ ಕಾಂಗ್ರೆಸ್ ಢೋಂಗಿತನ ಮಾಡುತ್ತಿದೆ. ಕಾಂಗ್ರೆಸ್ ಹಿಂದೂ ಹಾಗೂ ಮುಸಲ್ಮಾನ ಧರ್ಮಗಳನ್ನು ಒಡೆಯುವುದಷ್ಟೇ ಅಲ್ಲ, ಹಿಂದೂ ಧರ್ಮದಲ್ಲಿನ ಜಾತಿಗಳನ್ನು ಒಡೆಯಲು ಯತ್ನಿಸಿತು. ಜಾತಿ, ಧರ್ಮ ಒಡೆಯವುದರಲ್ಲಿ ಸಿದ್ದರಾಮಯ್ಯ ನಿಷ್ಣಾತರು. ಅವರು ವೀರಶೈವ ಹಾಗೂ ಲಿಂಗಾಯತರನ್ನು ಒಡೆಯಲು ಯತ್ನಿಸಿದ್ದಕ್ಕೆ ಜನರು ಅವರಿಗೆ ತಕ್ಕ ಪಾಠ ಕಲಿಸಿದರು ಎಂದರು. ನುಸುಳುಕೋರರ ಮೇಲೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಲಾಗುತ್ತಿದೆ ಎಂಬುದನ್ನು ಎಲ್ಲ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.
ಅಭಿವೃದ್ಧಿ ಕಾರ್ಯಗಳ ಮೂಲಕ ಬಿಜೆಪಿ ದಾಪುಗಾಲಿಡುತ್ತಿದ್ದು, ಇದರಿಂದ ಆತಂಕಕ್ಕೊಳಗಾದ ಕಾಂಗ್ರೆಸ್ ಮುಸಲ್ಮಾನರಲ್ಲಿ ವಿಷದ ಬೀಜ ಬಿತ್ತುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಹಚ್ಚಿದ ಬೆಂಕಿಯನ್ನು ನಾವೆಲ್ಲರೂ ಸೇರಿ ಆರಿಸಬೇಕಿದೆ ಎಂದು ಅಭಿಪ್ರಾಯಪಟ್ಟರು. ಶಾಸಕರಾದ ರಾಮಣ್ಣ ಲಮಾಣಿ, ಅರುಣಕುಮಾರ ಪೂಜಾರಿ, ಮುಖಂಡರಾದ ಮಹೇಶ ಟೆಂಗಿನಕಾಯಿ, ಯು.ಬಿ. ಬಣಕಾರ, ನಾರಾಯಣ ಜರತಾರಘರ, ಜಯತೀರ್ಥ ಕಟ್ಟಿ, ನಾಗೇಶ ಕಲಬುರ್ಗಿ, ವೀರಣ್ಣ ಜಡಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.