ಸಚಿವರಿಂದ ಆಯುರ್ವೇದ ಕಾಲೇಜು ಪರಿಶೀಲನೆ
Team Udayavani, Jun 29, 2020, 11:02 AM IST
ಹುಬ್ಬಳ್ಳಿ: ಜಿಲ್ಲಾ ಉಸ್ತುವಾರಿ ಜಗದೀಶ ಶೆಟ್ಟರ ಅವರು ರವಿವಾರ ಗೋಕುಲ ರಸ್ತೆ ಬಸವೇಶ್ವರ ನಗರ ಬಳಿಯ ಸಂಜೀವಿನಿ ಹಾಗೂ ಹಳೇಹುಬ್ಬಳ್ಳಿ ಹೆಗ್ಗೇರಿಯ ಆಯುರ್ವೇದ ಕಾಲೇಜಿನಲ್ಲಿ ವ್ಯವಸ್ಥೆಗೊಳಿಸಿರುವ ಕೋವಿಡ್-19 ಆಸ್ಪತ್ರೆಗಳಿಗೆ ಭೇಟಿಕೊಟ್ಟು ಪರಿಶೀಲಿಸಿದರು.
ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಿಮ್ಸ್ ನ ಕೋವಿಡ್-19 ಆಸ್ಪತ್ರೆ ಜೊತೆಗೆ ಕಡಿಮೆ ಲಕ್ಷಣಗಳುಳ್ಳ ರೋಗಿಗಳ ಚಿಕಿತ್ಸೆಗೆ ಆಯುರ್ವೇದ ಕಾಲೇಜುಗಳಲ್ಲಿ ಕೋವಿಡ್ ಆಸ್ಪತ್ರೆಗಳನ್ನು ವ್ಯವಸ್ಥೆಗೊಳಿಸಲಾಗಿದೆ. ಕಿಮ್ಸ್ ನಲ್ಲಿ 35 ವೆಂಟಿಲೇಟರ್ ಹಾಗೂ 250 ಬೆಡ್‌ಗಳಿವೆ. ಕೊವೀಡ್‌ನಿಂದ ತೀವ್ರವಾಗಿ ಬಳಲುತ್ತಿರುವ ರೋಗಿಗಳಿಗೆ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸಚಿವರಿಗೆ ತಿಳಿಸಿದರು.
ಮುಖ್ಯಮಂತ್ರಿ ಕಾನೂನು ಸಲಹೆಗಾರ ಮೋಹನ ಲಿಂಬಿಕಾಯಿ, ಶಾಸಕ ಅರವಿಂದ ಬೆಲ್ಲದ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಯಶವಂತ ಮದೀನಕರ್, ಹುಬ್ಬಳ್ಳಿ ತಹಶೀಲ್ದಾರ್ ಶಶಿಧರ ಮಾಡ್ಯಾಳ, ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ| ಎ.ಎಸ್. ಪ್ರಶಾಂತ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
KLE Technological University: ಮುರುಗೇಶ್ ನಿರಾಣಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.