ಬೆಳಗಾವಿಗೆ ಆಯುರ್ವೇದ ಔಷಧಾಲಯ?

Team Udayavani, Sep 24, 2018, 5:23 PM IST

24-sepctember-24.jpg

ಹುಬ್ಬಳ್ಳಿ: ಬೆಂಗಳೂರಿಗೆ ಸ್ಥಳಾಂತರಗೊಳ್ಳುವ ಆತಂಕದಲ್ಲಿದ್ದ ಬೆಳಗಾವಿಯ ಆಯುರ್ವೇದ ಔಷಧಾಲಯ ಘಟಕ ಬೆಳಗಾವಿಯಲ್ಲೇ ನೆಲೆಗೊಳ್ಳಲು ಆಯುಷ್‌ ನಿರ್ದೇಶನಾಲಯದ ನಿರ್ದೇಶಕರ ನೇತೃತ್ವದ ತಂಡ ಸ್ಥಳ ಪರಿಶೀಲಿಸಿ ಹಲವು ಸಲಹೆ ನೀಡಿದೆ. ಬೆಳಗಾವಿಯ ವಿಧಾನಮಂಡಲ ಅಧಿವೇಶನ ವೇಳೆ ಮುಖ್ಯಮಂತ್ರಿಗಳಿಂದ ಶಿಲಾನ್ಯಾಸ ನೆರವೇರೀತೆ ಎಂಬ ನಿರೀಕ್ಷೆ ಗರಿಗೆದರುವಂತೆ ಮಾಡಿದೆ.

ಬೆಳಗಾವಿಯ ವ್ಯಾಕ್ಸಿನ್‌ ಡಿಪೋದಲ್ಲಿ ಉದ್ದೇಶಿತ ಆಯುರ್ವೇದ ಔಷಧಾಲಯ ಘಟಕವನ್ನು ಬೆಂಗಳೂರಿಗೆ ಸ್ಥಳಾಂತರಿಸುವ ಯತ್ನ ನಡೆದಿತ್ತು. ಇದಕ್ಕೆ ಬೆಳಗಾವಿಯ ಕನ್ನಡಪರ ಸಂಘಟನೆಗಳು ಸೇರಿದಂತೆ ಅನೇಕರ ವಿರೋಧ ಹಾಗೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿಯವರ ಖಡಕ್‌ ಆದೇಶ ಹಿನ್ನೆಲೆಯಲ್ಲಿ ಆಯುಷ್‌ ನಿರ್ದೇಶನಾಲಯ ಅಧಿಕಾರಿಗಳ ತಂಡ ಸೆ. 18-19ರಂದು ಬೆಳಗಾವಿಗೆ ಆಗಮಿಸಿ ಪರಿಶೀಲಿಸಿರುವುದು ಘಟಕ ಸ್ಥಾಪನೆ ಆಸೆ ಗರಿಗೆದರುವಂತೆ ಮಾಡಿದೆ.

ಒಂದೂವರೆ ತಾಸು ಪರಿಶೀಲನೆ: ಆಯುಷ್‌ ನಿರ್ದೇಶನಾಲಯ ನಿರ್ದೇಶಕಿ ಮೀನಾಕ್ಷಿ ನೇಗಿ ನೇತೃತ್ವದಲ್ಲಿ ಆಯುಷ್‌ ಇಲಾಖೆ ಪ್ರೊಜೆಕ್ಟ್ ನಿರ್ದೇಶಕರು, ಬಜೆಟ್‌ನ ಆಡಳಿತಾಧಿಕಾರಿ, ಬೆಂಗಳೂರಿನಲ್ಲಿರುವ ಆಯುರ್ವೇದ ಔಷಧಾಲಯ ಉಪ ನಿರ್ದೇಶಕರನ್ನೊಳಗೊಂಡ ಅಧಿಕಾರಿಗಳ ತಂಡ ವ್ಯಾಕ್ಸಿನ್‌ ಡಿಪೋಗೆ ತೆರಳಿ ಸುಮಾರು ಒಂದೂವರೆ ತಾಸಿನವರೆಗೆ ಪರಿಶೀಲನೆ ನಡೆಸಿದೆ ಎನ್ನಲಾಗಿದೆ.

ಸುಮಾರು 150 ಎಕರೆಯಷ್ಟು ವಿಸ್ತೀರ್ಣ ಹೊಂದಿರುವ ವ್ಯಾಕ್ಸಿನ್‌ ಡಿಪೋದಲ್ಲಿ ಈಗಾಗಲೇ ಹಲವು ಆಯುರ್ವೇದ ಔಷಧಿ ಸಸ್ಯಗಳು ಇದ್ದು, ಅವುಗಳ ಸಂರಕ್ಷಣೆ ಜತೆಗೆ ಇತರೆ ಔಷಧಿಯ ಸಸ್ಯಗಳನ್ನು ಬೆಳೆಸಿ ದೇಶಕ್ಕೆ ಮಾದರಿ ಘಟಕವಾಗಿಸುವ ಚಿಂತನೆ ಹೊಂದಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸ್ಪಷ್ಟ ಆದೇಶ ಹಿನ್ನೆಲೆಯಲ್ಲಿ ಎಚ್ಚೆತ್ತ ಅಧಿಕಾರಿಗಳು ಬೆಳಗಾವಿಯಲ್ಲಿ ಘಟಕ ಸ್ಥಾಪನೆ ನಿಟ್ಟಿನಲ್ಲಿ ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಘಟಕ ಸ್ಥಳಾಂತರಗೊಳ್ಳಲಿದೆ ಎಂಬ ಆಂತಕದ ಕಾರ್ಮೋಡ ಸರಿದಂತಾಗಿದೆ.

ಕೆಲ ಬದಲಾವಣೆಗೆ ಸೂಚನೆ: ಬೆಳಗಾವಿಯ ವ್ಯಾಕ್ಸಿನ್‌ ಘಟಕದಲ್ಲಿ ಸ್ಥಾಪನೆಗೊಳ್ಳಲಿರುವ ಆಯುರ್ವೇದ ಔಷಧಾಲಯ ಘಟಕ ಸ್ಥಾಪನೆಗೆ ಮೂಲಸೌಕರ್ಯ ಹಾಗೂ ವಿವಿಧ ಸಲಕರಣೆಗಳಿಗೆ 12.40 ಕೋಟಿ ಅಂದಾಜು ವೆಚ್ಚದೊಂದಿಗೆ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಂಜಿನಿಯರಿಂಗ್‌ ವಿಭಾಗ ಸಿದ್ಧಪಡಿಸಿದೆ. ಮೀನಾಕ್ಷಿ ನೇಗಿ ನೇತೃತ್ವದ ಅಧಿಕಾರಿಗಳ ತಂಡ ಯೋಜನೆ ಪರಿಶೀಲಿಸಿದ್ದು, ಕೆಲವೊಂದು ಬದಲಾವಣೆಗೆ ಸೂಚಿಸಿದೆ ಎಂದು ತಿಳಿದು ಬಂದಿದೆ. 

ಆಯುರ್ವೇದ ವೈದ್ಯಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಸುಮಾರು 100-120 ವೈದ್ಯರು ಇದ್ದು, ಅವರ ಸಂಶೋಧನೆ, ಇನ್ನಿತರ ಕಾರ್ಯಗಳಿಗೆ ಸಮರ್ಪಕ ಸೌಲಭ್ಯ ಇಲ್ಲವಾಗಿದೆ. ಬೆಳಗಾವಿಯಲ್ಲಿ ಆಯುರ್ವೇದ ಔಷಧಾಲಯ ಘಟಕ ಸ್ಥಾಪನೆ ಮಾಡಿದರೆ ಸ್ನಾತಕೋತ್ತರ ಪದವೀಧರ ವೈದ್ಯರ ಸಂಶೋಧನೆಗೆ ಇನ್ನಷ್ಟು ಉತ್ತೇಜನ ಜತೆಗೆ, ಈ ಭಾಗದ ಜನರಿಗೆ ಆಯುರ್ವೇದ ಔಷಧಿಗಳನ್ನು ನೀಡಲು ಸಹಕಾರಿ ಆಗಲಿದೆ.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ಬೆಳಗಾವಿಯ ಆಯುರ್ವೇದ ಔಷಧಾಲಯ ಘಟಕಕ್ಕೆ 20 ಕೋಟಿ ಅಂದಾಜು ವೆಚ್ಚದೊಂದಿಗೆ ಅನುಮೋದನೆ ನೀಡಿದ್ದು, ಬಜೆಟ್‌ನಲ್ಲಿ 6 ಕೋಟಿ ಅನುದಾನ ನಿಗದಿ ಪಡಿಸಿದ್ದನ್ನು ಸ್ಮರಿಸಬಹುದಾಗಿದೆ.

ಸಿಎಂರಿಂದ ಶಂಕು ಸ್ಥಾಪನೆ?: ಬೆಳಗಾವಿಯಲ್ಲಿನ ಉದ್ದೇಶಿತ ಆಯುರ್ವೇದ ಔಷಧಾಲಯ ಘಟಕವನ್ನು ಬೆಂಗಳೂಗಿಗೆ ಸ್ಥಳಾಂತರಿಸುವ ಕೆಲ ಅಧಿಕಾರಿಗಳ ಯತ್ನಕ್ಕೆ ಮಹತ್ವದ ಬ್ರೇಕ್‌ ಹಾಕಿದ್ದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಬೆಳಗಾವಿಯಲ್ಲಿಯೇ ಘಟಕ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಲಿಖೀತ ಆದೇಶ ನೀಡಿದ್ದರು.

ಮುಖ್ಯಮಂತ್ರಿಗಳ ಖಡಕ್‌ ಸೂಚನೆಯಿಂದ ಎಚ್ಚೆತ್ತ ಅಧಿಕಾರಿಗಳು ಬೆಳಗಾವಿಗೆ ದೌಡಾಯಿಸಿ ಸ್ಥಳ ಪರಿಶೀಲನೆಯೊಂದಿಗೆ ಮುಂದಿನ ಪ್ರಕ್ರಿಯೆಯ ಆಶಾಭಾವನೆ ಮೂಡಿಸಿದ್ದು, ಘಟಕ ಬೆಳಗಾವಿಯಲ್ಲಿ ಸ್ಥಾಪನೆಗೊಳ್ಳುವುದು ಬಹುತೇಕ ಖಚಿತಗೊಂಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನ ವೇಳೆ ಕುಮಾರಸ್ವಾಮಿಯವರು ಆಯುರ್ವೇದ ಔಷಧಾಲಯ ಘಟಕಕ್ಕೆ ಶಂಕು ಸ್ಥಾಪನೆ ನೆರವೇರಿಸುವರೇ ಎಂಬುದನ್ನು  ಉತ್ತರ ಕರ್ನಾಟಕದ ಜನತೆ ಆಸೆಕಂಗಳಿಂದ ಕಾಯುತ್ತಿದ್ದಾರೆ.

ಅಮರೇಗೌಡ ಗೋನವಾರ 

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Basavaraj-horatti

CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

Alnavar: ಟಿಟಿ- ಕ್ಯಾಂಟರ್‌ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು

ಪ್ರಹ್ಲಾದ ಜೋಶಿ

Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.