![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 18, 2019, 9:24 AM IST
ಧಾರವಾಡ: ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆಯಲ್ಲಿ ಧಾರವಾಡ ಜಿಲ್ಲೆ ರಾಜ್ಯಕ್ಕೆ ಎಂಟನೇ ಹಾಗೂ ಬೆಳಗಾವಿ ವಿಭಾಗ ಪ್ರಥಮ ಸ್ಥಾನದಲ್ಲಿದೆ ಎಂದು ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಡಾ| ಗಿರಿಧರ ಆರ್. ಕುಕನೂರ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿ, ಎಬಿಎಆರ್‌ಕೆ ಯೋಜನೆಯಡಿ ಬೆಳಗಾವಿ ವಿಭಾಗದ ಬೆಳಗಾವಿ ಜಿಲ್ಲೆಯಲ್ಲಿ 1,86,436 ಕಾರ್ಡ್ ವಿತರಣೆಯಾಗಿದ್ದು, 11,981 ಜನ ಲಾಭ ಪಡೆದಿದ್ದಾರೆ. ಬಾಗಲಕೋಟೆ 95,731 ಕಾರ್ಡ್ ವಿತರಣೆ-7,233 ಜನ ಸೌಲಭ್ಯ; ವಿಜಯಪುರ 91,789 ಕಾರ್ಡ್ ವಿತರಣೆ-4,739 ಜನ ಸೌಲಭ್ಯ; ಹಾವೇರಿ 2,11,920 ಕಾರ್ಡ್ ವಿತರಣೆ-4,198 ಜನ ಸೌಲಭ್ಯ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ 1,57,339 ಕಾರ್ಡ್ ವಿತರಣೆಯಾಗಿದ್ದು 3,979 ಜನ ಸೌಲಭ್ಯ ಪಡೆದಿದ್ದಾರೆ. ಬೆಳಗಾವಿ ವಿಭಾಗದಲ್ಲಿ ಈ ಯೋಜನೆಯಡಿ 10,43,570 ಎಬಿಎಆರ್‌ಕೆ ಕಾರ್ಡ್ ವಿತರಿಸಲಾಗಿದ್ದು, 46,218 ಜನ ಫಲಾನುಭವಿಗಳು ಯೋಜನೆ ಸೌಲಭ್ಯ ಪಡೆದಿದ್ದಾರೆ ಎಂದರು.
ಆಯುಷ್ಮಾನ್ ಯೋಜನೆಯನ್ನು ಹೆಚ್ಚು ಜನರಿಗೆ ತಲುಪಿಸಲು ರಾಜ್ಯಾದ್ಯಂತ ಸೆ.15ರಿಂದ 30ರವರೆಗೆ ವಿಶೇಷ ಪಾಕ್ಷಿಕ ಅಭಿಯಾನ ಆಯೋಜಿಸಲಾಗಿದೆ. ಜಿಲ್ಲಾಸ್ಪತ್ರೆಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಆರೋಗ್ಯ-ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ ವಿಭಾಗದ ಉಪ ನಿರ್ದೇಶಕ ಡಾ| ಅಪ್ಪಾಸಾಹೇಬ್ ನರಹಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ಯಶವಂತ ಮದಿನಕರ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಎಸ್.ಎಂ. ಹೊನಕೇರಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ| ಶಶಿ ಪಾಟೀಲ, ಡಿಇಐಸಿಯ ತಜ್ಞ ವೈದ್ಯ ಡಾ| ಎನ್.ಎಂ. ಅಂಗಡಿ ಇದ್ದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.