ಬಂದ್ ಸಂಪೂರ್ಣ ವಿಫಲ; ಎಂದಿನಂತಿತ್ತು ಜನಜೀವನ
Team Udayavani, Feb 14, 2020, 11:55 AM IST
ಹುಬ್ಬಳ್ಳಿ/ಧಾರವಾಡ: ಡಾ| ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಅವಳಿನಗರ ಸೇರಿದಂತೆ ಜಿಲ್ಲೆಯಲ್ಲಿ ಯಾವುದೇ ಪರಿಣಾಮ ಬೀರಲಿಲ್ಲ. ಸಾರಿಗೆ, ಜನಜೀವನ ಎಂದಿನಂತೇ ಇತ್ತು.
ಕೆಲ ಸಂಘಟನೆಗಳನ್ನು ಹೊರತುಪಡಿಸಿ ಬಹುತೇಕ ಸಂಘಟನೆಗಳು ಬಂದ್‌ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯೆ ನೀಡದ್ದರಿಂದ ಬಂದ್ ಮೇಲೆ ಯಾವುದೇ ಪರಿಣಾಮವಾಗಲಿಲ್ಲ. ಎಂದಿನಂತೆ ರಾಜ್ಯ ನಗರ ಸಾರಿಗೆ ಬಸ್, ಆಟೋ ರಿಕ್ಷಾಗಳು, ಖಾಸಗಿ ವಾಹನಗಳ ಸಂಚಾರವಿತ್ತು. ಹೋಟೆಲ್ ಉದ್ಯಮ ಸೇರಿದಂತೆ ಎಲ್ಲ ವಹಿವಾಟು ಸುಗಮವಾಗಿ ನಡೆದವು. ಶಾಲಾ-ಕಾಲೇಜುಗಳು ತೆರೆದುಕೊಂಡಿದ್ದವು.
ಹುಬ್ಬಳ್ಳಿಯಲ್ಲಿ ಪ್ರತಿಭಟನೆ: ಡಾ|ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರ್ನಾಟಕ ನವನಿರ್ಮಾಣ ವೇದಿಕೆ, ಕರ್ನಾಟಕ ಸಂಗ್ರಾಮ ಸೇನೆ, ಕನ್ನಡ ಕ್ರಾಂತಿ ದೀಪ, ಭಗತಸಿಂಗ್ ಯುಥ್ ಪವರ್ ಸಂಘಟನೆ, ಸಮಗ್ರ ಕರ್ನಾಟಕ ರಕ್ಷಣಾ ಸೇನೆ, ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ, ಎಸ್‌ಎಸ್‌ಕೆ ಸಮಾಜದ ಯುವಕರ ಸಂಘದ ಬೆರಳೆಣಿಕೆಯ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮಿನಿ ವಿಧಾನಸೌಧ ವರೆಗೆ ತಳ್ಳುವ ಗಾಡಿ ಹಿಡಿದು ಪ್ರತಿಭಟನೆ ನಡೆಸಿದರು.
ಈರಪ್ಪ ಎಮ್ಮಿ, ಸಂಜೀವ ಧುಮ್ಮಕನಾಳ, ರವಿ ಕದಂ, ಬಸವರಾಜ ಮಣ್ಣೂರಮಠ, ಕುಬೇರ ಪವಾರ, ನಾಗರಾಜ ಬಡಿಗೇರ, ಆನಂದ ದಲಬಂಜನ, ರಾಮಚಂದ್ರ ಕುಲಕರ್ಣಿ, ನೀಲಕಂಠ ತಡಸದಮಠ, ಷಣ್ಮುಖಯ್ಯ ಪಂಚಾಂಗಮಠ, ರಾಹುಲಕುಮಾರ ಜಿ.ಎಸ್., ಬಸವರಾಜ ಬೆಲ್ಲದ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
ಜೋಶಿ ಅವರಿಗೆ ನನ್ನ ಸಾಮರ್ಥ್ಯ ಗೊತ್ತಿಲ್ಲ… ಅಸಮರ್ಥ ಹೇಳಿಕೆಗೆ ತಿರುಗೇಟು ನೀಡಿದ ಪರಮೇಶ್ವರ್
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.