ನಾಲ್ಕು ಬಾಲ್ಯ ವಿವಾಹಗಳಿಗೆ ತಡೆ
Team Udayavani, Jun 13, 2020, 5:37 AM IST
ಧಾರವಾಡ: ಕೋವಿಡ್ ಲಾಕ್‌ಡೌನ್ ಅವಧಿಯೊಳಗಿನ ಮೇ ಹಾಗೂ ಜೂನ್ ತಿಂಗಳಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ನಾಲ್ಕು ಬಾಲ್ಯ ವಿವಾಹ ತಪ್ಪಿಸುವಲ್ಲಿ ಯಶಸ್ವಿಯಾಗಿದೆ.
ಮೇ 12ರಂದು ಲೋಕೂರು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಅದೇ ಗ್ರಾಮದ ಯುವಕನೊಂದಿಗೆ, ಜೂ.4 ರಂದು ಗರಗ ಗ್ರಾಮದ ಯುವತಿಯೊಂದಿಗೆ ತಡಕೋಡ ಗ್ರಾಮದ ಅಪ್ರಾಪ್ತ ಚಾಲಕನೊಂದಿಗೆ, ಜೂ.11ರಂದು ಗೌಟನ್ ನಾಗಲಾವಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಬೆಳಗಾವಿ ಜಿಲ್ಲೆಯ ವಡಗಾಂವ ಗ್ರಾಮದ ಯುವಕನೊಂದಿಗೆ ಮದುವೆ ಮಾಡಲು ನಿಶ್ಚಯಿಸಲಾಗಿತ್ತು. ಈ ಬಗ್ಗೆ ಮಾಹಿತಿ ಬಂದ ತಕ್ಷಣವೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪೋಷಕರಿಗೆ ಎಚ್ಚರಿಕೆ ನೀಡಿ ಮದುವೆ ನಿಲ್ಲಿಸಲಾಗಿದೆ.
ಜೂ.15ರಂದು ಬೆಳ್ಳಿಗಟ್ಟಿ ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಜಲ್ಲಾಪೂರ ಗ್ರಾಮದ ಯುವಕನೊಂದಿಗೆ ವಿವಾಹ ಮಾಡುತ್ತಿರುವ ಸುದ್ದಿ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕವು ಸ್ಥಳಕ್ಕೆ ಭೇಟಿ ನೀಡಿ ಆ ಮದುವೆಯನ್ನೂ ತಡೆಯುವಲ್ಲಿ ಯಶಸ್ವಿಯಾಗಿದೆ. ಪೋಷಕರಿಗೆ ನೋಟಿಸ್ ಜಾರಿ ಮಾಡಿ, ಘಟಕಕ್ಕೆ ಕರೆಸಿ ಪೋಷಕರಿಗೆ ಮುಚ್ಚಳಿಕೆ ಪತ್ರ ಸಹ ಬರೆಯಿಸಿಕೊಳ್ಳಲಾಗಿದೆ ಎಂದು ಘಟಕದ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.