ಭ್ರಷ್ಟಾಚಾರದಲ್ಲಿತೊಡಗಿರುವವರನ್ನು ಮೊದಲು ಉಚ್ಛಾಟಿಸಲಿ: ಅರುಣಸಿಂಗ್‍ಗೆ ಯತ್ನಾಳ ತಿರುಗೇಟು
Team Udayavani, Apr 10, 2021, 9:04 PM IST
ಹುಬ್ಬಳ್ಳಿ: ತನ್ನನ್ನು ವಜಾ ಮಾಡುವುದಾಗಿ ಹೇಳಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಅವರ ಹೇಳಿಕೆಗೆ ಬಸನಗೌಡ ಪಾಟೀಲ ಯತ್ನಾಳ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿ ಕುಟುಂಬದ ಭ್ರಷ್ಟಾಚಾರ, ಕುಟುಂಬ ರಾಜಕಾರಣ ವಿರುದ್ಧ ಮಾತನಾಡಿದ್ದೇನೆ. ಭ್ರಷ್ಟಾಚಾರದಲ್ಲಿ ತೊಡಗಿರುವವರನ್ನು ಮೊದಲು ಉಚ್ಛಾಟಿಸಲಿ ನಂತರ ನನ್ನ ಬಗ್ಗೆ ಚಿಂತನೆ ಮಾಡಲಿ ಎಂದು ಪ್ರತ್ಯುತ್ತರ ನೀಡಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಬೇಡಿ ಅಂತ ಎಂದೂ ಯಾರಿಗೂ ಹೇಳಿಲ್ಲ. ನೀವೆ ತಂದೆ ನೀವೆ ತಾಯಿ ಎಂದು ದಯನೀಯವಾಗಿ ಕೇಳುವ ಮನುಷ್ಯ ನಾನಲ್ಲ. ಯತ್ನಾಳ ಅವರನ್ನು ಪಕ್ಷದಿಂದ ಹೊರ ಹಾಕುತ್ತೇವೆ ಎಂದು ಹೆದರಿಸಿದರೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದನ್ನು ನಿಲ್ಲಿಸುತ್ತಾರೆ ಎನ್ನುವ ಭ್ರಮೆಯಲ್ಲಿದ್ದಾರೆ ಎಂದು ತಿರುಗೇಟು ನೀಡಿದರು.
ಭ್ರಷ್ಟಾಚರದಲ್ಲಿ ತೊಡಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಕುಟುಂಬವನ್ನು ಮೊದಲು ಉಚ್ಛಾಟನೆ ಮಾಡಲಿ. ಆ ಮೇಲೆ ಯತ್ನಾಳ ಉಚ್ಛಾಟನೆ ಮಾಡುವ ಬಗ್ಗೆ ಚಿಂತನೆ ಮಾಡಲಿ. ಅರುಣ ಸಿಂಗ್ ದೆಹಲಿಯಿಂದ ಬರುತ್ತಲೇ ಯಡಿಯೂರಪ್ಪ ಅವರನ್ನು ಖುಷ್ ಮಾಡಲು ಯತ್ನಾಳಗೆ ಬೈದು, ವಿಮಾನದಲ್ಲಿ ನಗುಮುಖದಿಂದ ಹೋಗುತ್ತಾರೆ. ಇದಕ್ಕೆ ಕಾರಣವೇನು ಎಂಬುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಕಾಲ ಬಂದಾಗ ಅದನ್ನು ಹೇಳುತ್ತೇನೆ. ಅವರು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೊರತು ಯಡಿಯೂರಪ್ಪ, ವಿಜಯೇಂದ್ರ ಕಾರ್ಯದರ್ಶಿ ಅಲ್ಲ. ಯಡಿಯೂರಪ್ಪ ಅವರ ಮರಿಮೊಮ್ಮಕ್ಕಳು ಬಂದು ವರ್ಗಾವಣೆಗೆ ಅರ್ಜಿ ಹಿಡಿದು ನಿಲ್ಲುವ ಕಾಲ ದೂರವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.