ಬಸವ ಜಯಂತಿ ಅರ್ಥಪೂರ್ಣವಾಗಿ ಆಚರಿಸಿ
Team Udayavani, Apr 19, 2018, 5:11 PM IST
ಕೂಡಲಸಂಗಮ: ಸರ್ಕಾರ ಬಸವ ಜಯಂತಿಯನ್ನು ಬೆಂಗಳೂರಿನಲ್ಲಿ ಮಾಡಿದರೆ ಅರ್ಥಪೂರ್ಣವಾಗುವುದಿಲ್ಲ. ಜನ್ಮ ಸ್ಥಳ ಬಸವನಬಾಗೇವಾಡಿ, ವಿದ್ಯಾಭೂಮಿ ಐಕ್ಯಸ್ಥಳ ಕೂಡಲಸಂಗಮ, ಕಾರ್ಯಕ್ಷೇತ್ರ ಬಸವ ಕಲ್ಯಾಣದಲ್ಲಿ ಮಾಡಿದರೆ ಅರ್ಥಪೂರ್ಣವಾಗುವುದು ಎಂದು ಕೂಡಲಸಂಗಮ ಬಸವ ಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ಹೇಳಿದರು.
ಕೂಡಲಸಂಗಮ ಬಸವ ಧರ್ಮ ಪೀಠವತಿಯಿಂದ ನಡೆದ ಬಸವಣ್ಣನವರ 885ನೇ ಬಸವ ಜಯಂತಿ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿ, ಮಹಾರಾಷ್ಟ್ರ, ಕರ್ನಾಟಕ, ತೆಲಗಾಂಣ ಸರ್ಕಾರ ಬಸವ ಜಯಂತಿಯನ್ನು ಎಲ್ಲ ಸರ್ಕಾರ ಕಚೇರಿಯಲ್ಲಿ ಆಚರಣೆ ಮಾಡುವುದು, ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸುವ ಮೂಲಕ ಬಸವ ತತ್ವ ಪ್ರಸಾರ ಕಾರ್ಯಕ್ಕೆ ಒತ್ತುಕೊಟ್ಟಿರುವುದು ಮಹತ್ವಪೂರ್ಣವಾಗಿದೆ. ಕೇಂದ್ರ ಸರ್ಕಾರವು ಇಂತಹ ಕಾರ್ಯ ಮಾಡಬೇಕು. ಬಸವಣ್ಣನವರು ಕೊಟ್ಟ ಸಂದೇಶ ಸರ್ವಕಾಲಿಕ ಇಂತಹ ಶರಣರ ಸಂದೇಶದ ಮೇಲೆ ಜೀವನ ಸಾಗಿಸಿದರೆ ಬದುಕು ಸುಂದರವಾಗುವುದರ ಜೊತೆಗೆ ಬಸವಣ್ಣನವರು ಕಂಡ ಕಲ್ಯಾಣ ರಾಜ್ಯದ ನಿರ್ಮಾಣವಾಗುವುದು.
ಇಂದಿನ ಯುವ ಜನಾಂಗ ಶರಣರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜ್ಞಾನ ವೃದ್ಧಿಸಿಕೊಳ್ಳಬೇಕು. ಬಸವಣ್ಣನವರ ಸಂದೇಶ ಬಹುಬೇಗನೆ ಜನರಿಗೆ ತಲುಪಬೇಕು ಎಂಬ ಉದ್ದೇಶದಿಂದ ಬೆಂಗಳೂರಿನ ಬಸವ ಗಂಗೋತ್ರಿಯಲ್ಲಿ 111 ಅಡಿ ಎತ್ತರದ ಬಸವ ಪುತ್ಥಳಿ ನಿರ್ಮಾಣ ಕಾರ್ಯ ಆರಂಭವಾಗಿದೆ ಎಂದರು.
ಬಸವ ಭಾರತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶಂಭುಲಿಂಗ ಭದ್ರಶೆಟ್ಟಿ, ಬಸವ ಭಾರತಿ ಪ್ರಾಥಮಿಕ ಶಾಲೆಯ ಮುಖ್ಯಗುರು ಮಹಾಂತೇಶ ಎಮ್ಮಿ. ಪ್ರೌಢಶಾಲೆಯ ಮುಖ್ಯಗುರು ಸಂಗಮೇಶ ಎಮ್ಮಿ ಇದ್ದರು.ಬೆಳಗ್ಗೆ 7 ರಿಂದ 8 ಗಂಟೆಯವರೆಗೆ ಪೂಜಾ ವ್ರತ ಕಾರ್ಯಕ್ರಮ ನಡೆಯಿತು. 8:30ಕ್ಕೆ ಕೂಡಲಸಂಗಮ ಬಸವ ಧರ್ಮ ಪೀಠದ ಧ್ಯಾನಮಂಟಪದಲ್ಲಿ ಬಸವಣ್ಣನವರ 885 ಜಯಂತಿಯ ನಿಮಿತ್ತ ತೊಟ್ಟಿಲು ಕಾರ್ಯಕ್ರಮ ನಡೆಯಿತು. ನಂತರ ಬಸವಣ್ಣನವರ ಐಕ್ಯ ಸ್ಥಳದಲ್ಲಿ ಪೂಜೆ ಸಲ್ಲಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.