ಬಸವ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ


Team Udayavani, Apr 25, 2017, 3:13 PM IST

hub5.jpg

ಧಾರವಾಡ: ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಬೇಕೆಂಬುದು ಸರ್ವ ಸಮಾಜದವರ ನಿರ್ಧಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ಬಸವ ಜಯಂತಿ ಆಚರಣೆ ಕುರಿತಂತೆ ನಗರದ ಮುರುಘಾಮಠದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 

ಮಹಾತ್ಮಾ ಬಸವೇಶ್ವರರ ಜಯಂತಿಯನ್ನು ಸರ್ವ ಜನಾಂಗದವರು ಸೇರಿ ಆಚರಿಸಬೇಕು. ಮಕ್ಕಳು, ಯುವಜನರು ಅತೀ ಹೆಚ್ಚು ಪಾಲ್ಗೊಳ್ಳಬೇಕಿದೆ. ಯುವ ಪೀಳಿಗೆಗೆ ಶರಣರ, ಮಹಾತ್ಮರ ಸಂದೇಶವನ್ನು ತಿಳಿಸುವುದು ಅವಶ್ಯವಾಗಿದೆ. ಜಯಂತಿ ಕಾಟಾಚಾರಕ್ಕೆಂಬಂತೆ ಆಗಬಾರದು ಎಂದರು. 

ಬಸವಣ್ಣನವರು ಕಾಯಕಕ್ಕೆ ಹೆಚ್ಚು ಮಹತ್ವ ನೀಡಿದ್ದರು. ಈ ಹಿನ್ನೆಲೆಯಲ್ಲಿ ಬಸವ ಜಯಂತಿಯಂದು ರಜೆಯ ಅವಶ್ಯಕತೆಯಿಲ್ಲ. ಅಂದು ಎಲ್ಲರೂ ಕಾಯಕ ಮಾಡುವ ಮೂಲಕ ಬಸವಣ್ಣನವರಿಗೆ ಗೌರವಾರ್ಪಣೆ ಸಲ್ಲಿಸಬೇಕು. ಈ ನಿಟ್ಟಿನಲ್ಲಿ ಸರಕಾರಿ ರಜೆಯನ್ನು ರದ್ದು ಮಾಡುವಂತೆ ಸರಕಾರದ ಗಮನ ಸೆಳೆಯುವುದಾಗಿ ಸಚಿವರು ತಿಳಿಸಿದರು. 

ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, 1913ನೇ ಇಸ್ವಿಯಲ್ಲಿ ಲಿಂ|ಮೃತ್ಯುಂಜಯಪ್ಪಗಳು ಹಾಗೂ ಕರ್ನಾಟಕ ಗಾಂಧಿಧಿ ಹಡೇìಕರ ಮಂಜಪ್ಪನವರ ನೇತೃತ್ವದಲ್ಲಿ ಮೊದಲ ಬಾರಿಗೆ ಮುರುಘಾಮಠದ ವತಿಯಿಂದ ಬಸವ ಜಯಂತಿ ಆರಂಭವಾಯಿತು. ಅವರ ಆಶಯದಂತೆ ಈ ವರ್ಷವೂ ಸುಂದರ-ಸರಳ ಕಾರ್ಯಕ್ರಮ ಜರುಗಲಿದೆ ಎಂದರು. 

ಏ.29ರಂದು ಬೆಳಗ್ಗೆ ಕಲಾಭವನದ ಆವರಣದಲ್ಲಿರುವ ಮಹಾತ್ಮಾ ಬಸವೇಶ್ವರರ  ಪುತ್ಥಳಿಗೆ ಪುಷ್ಪ ಸಮರ್ಪಿಸಿ, ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನದಿಂದ ಬಸವೇಶ್ವರ ಭಾವಚಿತ್ರದೊಂದಿಗೆ ಪಲ್ಲಕ್ಕಿ ಸಮೇತವಾಗಿ ಭವ್ಯ ಮೆರವಣಿಗೆ ಹೊರಟು ವಿವಿಧ ಮುಖ್ಯ ರಸ್ತೆ ಮೂಲಕ ಸಂಚರಿಸಿ ನಂತರ ಮರಳಿ ದೇವಸ್ಥಾನಕ್ಕೆ ಆಗಮಿಸಲಿದೆ.

ಅಂದು ಸಂಜೆ 4 ಗಂಟೆಗೆ ಕಲಾಭವನ ಆವರಣದಿಂದ ಬೈಕ್‌ ರ್ಯಾಲಿ ಹಾಗೂ ಪಥ ಸಂಚಲನ ಮೂಲಕ ಭಕ್ತಾಧಿ ದಿಗಳು ಶ್ರೀ ಮುರುಘಾಮಠಕ್ಕೆ ಆಗಮಿಸಿ ಸಮಾವೇಶಗೊಳ್ಳುವರು ಎಂದರು. ಅಂದು ಸಂಜೆ 6 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅಧ್ಯಕ್ಷತೆ ಹಾಗೂ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಸಾನಿಧ್ಯದಲ್ಲಿ ಜ್ಯೋತಿ ಬದಾಮಿ ಅವರಿಂದ ಉಪನ್ಯಾಸ ಜರುಗಲಿದೆ.

ಕಲಾವಿದೆ ಸೀತಾ ಚಪ್ಪರ ತಂಡದವರಿಂದ ವಚನ ನೃತ್ಯ, ಶ್ರೀಧರ ಕುಲಕರ್ಣಿ ತಂಡದಿಂದ ವಚನ ಸಂಗೀತ ನಡೆಯಲಿದೆ. ಭಕ್ತರಿಗೆ ಪ್ರಸಾದ ವ್ಯವಸ್ಥೆ ಇದೆ ಎಂದರು. ಸಿದ್ದರಾಮಣ್ಣ ನಡಕಟ್ಟಿ, ರಾಜು ಮರಳಪ್ಪನವರ, ನಾಗರಾಜ ಪಟ್ಟಣಶೆಟ್ಟಿ, ಡಿ.ಬಿ.ಲಕಮನಹಳ್ಳಿ, ಜಿಪಂ ಸದಸ್ಯ ಕೆ.ಸಿ.ಪುಡಕಲಕಟ್ಟಿ, ಸತೀಶ ತುರಮರಿ ಸೇರಿದಂತೆ ಹಲವರು ಇದ್ದರು.  

ಟಾಪ್ ನ್ಯೂಸ್

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಬೈರಪ್ಪ

Dharwad: ತತ್ವಶಾಸ್ತ್ರವೇ ನನ್ನ ಕಾದಂಬರಿಗಳ ಮೂಲಸೆಲೆ: ಎಸ್.ಎಲ್.ಭೈರಪ್ಪ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

mutalik (2)

B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.