ಬಸವಣ್ಣನವರ ತತ್ವಾದರ್ಶ ಇಂದಿಗೂ ಪ್ರಸ್ತುತ: ಜೋಶಿ
Team Udayavani, May 8, 2019, 10:41 AM IST
ಹುಬ್ಬಳ್ಳಿ: ಬಸವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅತಿಥಿಗಳಿಗೆ ಸಾಹಿತ್ಯ ಕೃತಿ ವಿತರಿಸಲಾಯಿತು.
ಹುಬ್ಬಳ್ಳಿ: ಬಸವಣ್ಣವರು ಜಗತ್ತಿಗೆ ಕಾಯಕ, ದಾಸೋಹ ತತ್ವಗಳನ್ನು ನೀಡಿದ ಆದರ್ಶ ವ್ಯಕ್ತಿಯಾಗಿದ್ದು, ಈ ಎರಡನ್ನು ಜೀವನದಲ್ಲಿ ಅಳವಡಿಸಿಕೊಂಡು ಸ್ವರ್ಗ ಕಾಣಬೇಕು ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ಇಲ್ಲಿನ ಬನಶಂಕರಿ ಬಡಾವಣೆಯ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಬಸವ ಸೇವಾ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಮಾಜಿಕ ಕ್ರಾಂತಿ ಮಾಡಿದ ಬಸವಣ್ಣನವರು ಜಗತ್ತಿಗೆ ವಿಶ್ವಶಾಂತಿಯ ಸಂದೇಶ ನೀಡಿದರು. ಶರಣ ಹಾಗೂ ಶರಣೆಯರಿಗೆ ವಚನಗಳನ್ನು ರಚಿಸಲು ಪ್ರೇರಣೆಯಾಗಿದ್ದರು. ಇವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಬಾಳಬೇಕು ಎಂದರು.
ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಮಾತನಾಡಿ, ಬಸವಣ್ಣವರ ಸಮಾನತೆ ತತ್ವ ಸಮಾಜಕ್ಕೆ ದೊಡ್ಡ ಕೊಡುಗೆಯಾಗಿದೆ. ಲಿಂಗ, ವರ್ಣ, ವರ್ಗಭೇದ ಹೋಗಲಾಡಿಸಲು ಪ್ರಯತ್ನಪಟ್ಟರು. ಜನರಿಗೆ ಬೋಧಿಸಿದಂತೆ ತಾವು ಬದುಕಿ ತೋರಿಸಿದ ಆದರ್ಶ ವ್ಯಕ್ತಿಯಾಗಿದ್ದಾರೆ. ಮನುಷ್ಯರನ್ನು ಮನುಷ್ಯರನ್ನಾಗಿ ಕಾಣಬೇಕು ಎಂದು ಸಾರಿದರು. ಇವರ ವಚನಗಳು, ಚಿಂತನೆ ಕೇವಲ ಬೋಧನೆಗೆ ಸೀಮಿತವಾಗದೆ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಬಸವ ಜಯಂತಿ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣವರು ಸಮಾನತೆಗೆ ಹೋರಾಡಿದರು. ಅಂತರ್ಜಾತಿ ವಿವಾಹಕ್ಕೆ ನಾಂದಿ ಹಾಡಿದರು. ಆದರೆ ಇವು ಇಂದಿಗೂ ಸಮಸ್ಯೆಯಾಗಿ ಉಳಿದಿವೆ. 770 ವಚನಕಾರರು ಇವರ ಅನುಭವ ಮಂಟಪದಲ್ಲಿದ್ದರು. ಶರಣರ ವಚನಗಳನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಸಂಘ-ಸಂಸ್ಥೆಗಳಿಂದ ನಡೆಯಬೇಕು ಎಂದರು.
ಮಕ್ಕಳಿಗಾಗಿ ಆಯೋಜಿಸಿದ್ದ ವೇಷ ಭೂಷಣ ಸ್ಪರ್ಧೆಯಲ್ಲಿ ಪವಿತ್ರಾ ಪಿತಾಂಬರ ಪ್ರಥಮ, ಮಂದಾರ ಜಾಬಿನ್ ದ್ವಿತೀಯ, ದಾನೇಶ್ವರಿ ಜಾಬಿನ್ ತೃತೀಯ ಸ್ಥಾನ ಗಳಿಸಿದರು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಬಸವ ಸೇವಾ ಸಮಿತಿ ಅಧ್ಯಕ್ಷ ಡಾ| ಎಚ್.ವಿ. ಬೆಳಗಲಿ ಅಧ್ಯಕ್ಷತೆ ವಹಿಸಿದ್ದರು. ಕೆ. ಶಾಂತಾ ಬಸವರಾ, ರಾಘವೇಂದ್ರ ಕರೆಗಾರ, ಬಿ.ಎಸ್. ಮಾಳವಾಡ, ಸಿದ್ದರಾಮನಗೌಡ ಮಾಲೀಪಾಟೀಲ, ಮಹೇಶ ಬುರ್ಲಿ, ವಿ.ವಿ. ಕುರ್ತಕೋಟಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Dharwad: ವಾಗ್ವಾದ ನಡೆದು ಎರಡು ಸುತ್ತು ಫೈರಿಂಗ್: ನಾಲ್ವರು ವಶಕ್ಕೆ
Waqf Land Issue: ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಡಿಕೆ ಶಿವಕುಮಾರ್
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.