Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

Team Udayavani, Dec 4, 2024, 7:31 PM IST

Dharwad: ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಬಸವರಾಜ್ ಗುರಿಕಾರ ಆಯ್ಕೆ

ಧಾರವಾಡ: ನವದೆಹಲಿಯ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ (ಎಐಪಿಟಿಎಫ್) ರಾಷ್ಟ್ರೀಯ ಅಧ್ಯಕ್ಷರಾಗಿ ಧಾರವಾಡದ ಬಸವರಾಜ ಗುರಿಕಾರ ಆಯ್ಕೆಯಾಗಿದ್ದಾರೆ.

ಕಳೆದ ಎರಡು ದಿನಗಳಿಂದ ಕೇರಳದ ಎರ್ನಾಕುಲಂನಲ್ಲಿ ನಡೆದ ಚುನಾವಣೆಯ ಪ್ರಕ್ರಿಯೆಯ ಅಂತಿಮದಲ್ಲಿ ಅಧ್ಯಕ್ಷರಾಗಿ ಬಸವರಾಜ ಗುರಿಕಾರ ಆಯ್ಕೆಗೊಂಡಿದ್ದಾರೆ.

ಎಐಪಿಟಿಎಫ್‌ನ 75 ವರ್ಷಗಳ ಸಂಘಟನೆಯ ಇತಿಹಾಸದಲ್ಲಿ ಧಾರವಾಡದ ಬಸವರಾಜ ಗುರಿಕಾರ ಆಯ್ಕೆಯಾಗಿದ್ದು, ಕರ್ನಾಟಕದ ಮೊದಲ ವ್ಯಕ್ತಿಎಂಬುವುದು ವಿಶೇಷ. ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ, ಮೂರು ಬಾರಿ ರಾಜ್ಯ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಗುರಿಕಾರ ಶಿಕ್ಷಕ ಸಂಘಟನೆಯಲ್ಲಿ ಸುಮಾರು 40 ವರ್ಷಗಳ ದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ.

ಎಐಪಿಟಿಎಫ್‌ನ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿಯಾಗಿ ಒಡಿಶಾದ ಕಮಲಾಕಾಂತ ತ್ರಿಪಾಠಿ, ಖಜಾಂಚಿಯಾಗಿ ಉತ್ತರಪ್ರದೇಶದ ಉಮಾಶಂಕರ, ಹಿರಿಯ ಉಪಾಧ್ಯಕ್ಷರಾಗಿ ಹರಿಗೋವಿಂದನ್ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ-1 ಆಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿರುವ ಚಂದ್ರಶೇಖರ ನುಗ್ಗಲಿ ಆಯ್ಕೆಯಾಗಿದ್ದು ವಿಶೇಷ. ಚಿಕ್ಕ ವಯಸ್ಸಿನಲ್ಲಿಯೇ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು ಇವರ ಸಾಧನೆಯಾಗಿದೆ.

ದೇಶದ 23 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರ ಸದಸ್ಯತ್ವ ಹೊಂದಿರುವ ಈ ಸಂಘಟನೆ ರಾಷ್ಟ್ರದಲ್ಲಿಯೇ ಅತಿ ದೊಡ್ಡ ಸಂಘಟನೆಯಾಗಿದಲ್ಲದೇ ದೇಶದ 25 ರಾಜ್ಯಗಳ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಟನೆಗಳು ಈ ಸಂಘದ ಮಾನ್ಯತೆ ಪಡೆದಿವೆ. 187 ದೇಶಗಳ ಶಿಕ್ಷಕರ ಅಂತಾರಾಷ್ಟ್ರೀಯ ಶಿಕ್ಷಕರ ಸಂಘಟನೆಯಾಗಿರುವ ಎಜುಕೇಶನ್ ಇಂಟರ್ ನ್ಯಾನಲ್ ಜತೆ ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಸಂಯೋಜನೆ ಹೊಂದಿದೆ. ಇಂತಹ ಮಹತ್ವದ ಸಂಘಟನೆಯ ಚುನಾವಣೆಯ ಮೂಲಕ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಇದೇ ಮೊದಲ ಬಾರಿಯಾಗಿದೆ. ಎರಡು ದಿನಗಳ ಕಾಲ ನಡೆದ ಚುನಾವಣೆಯಲ್ಲಿ 25 ರಾಜ್ಯಗಳ ಆಯಾ ಸಂಘಟನೆಗಳ 247 ಪ್ರತಿನಿಧಿಗಳು ಚುನಾವಣೆಯಲ್ಲಿ ಭಾಗಿಯಾಗಿದ್ದರು. ಹಿಮಾಚಲ ಪ್ರದೇಶದ ಪ್ರೇಮಸಿಂಗ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ಇದನ್ನೂ ಓದಿ: Belagavi: ಜೀವ ವಿಮಾ ಪಾಲಿಸಿಯ ಹಣಕ್ಕಾಗಿ ಸಹೋದರನನ್ನೇ ಕೊ*ಲೆ ಮಾಡಿದ ತಮ್ಮ

ಟಾಪ್ ನ್ಯೂಸ್

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

BY-Vijayendara

Local Body Election: ಪರಾಭವಗೊಂಡ ಅಭ್ಯರ್ಥಿಗಳ ಜತೆ ಜ.10ಕ್ಕೆ ಬಿ.ವೈ.ವಿಜಯೇಂದ್ರ ಸಭೆ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Karnataka: ವಿದ್ಯುತ್‌ ದರದಂತೆ ವರ್ಷವೂ ಬಸ್‌ ಯಾನ ದರ ಹೆಚ್ಚಳ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.