Congress ಸರಕಾರದಲ್ಲಿ ಕಳ್ಳಕಾಕರಿಗೆ ಭಯವಿಲ್ಲವಾಗಿದೆ: ಬಸವರಾಜ ಬೊಮ್ಮಾಯಿ
Team Udayavani, Dec 19, 2023, 12:28 PM IST
ಹುಬ್ಬಳ್ಳಿ: ಕಾಂಗ್ರೆಸ್ ಸರಕಾರದಲ್ಲಿ ಕಳ್ಳಕಾಕರಿಗೆ ಭಯ ಇಲ್ಲ ಅನಿಸುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಿದ್ದು ಹೋಗಿದೆ. ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಬೆಳಗಾವಿ ವಂಟಮುರಿ ಗ್ರಾಮದಲ್ಲಿ ನಡೆದಿರುವ ಅಮಾನುಷ ಘಟನೆ ಆಡಳಿತದ ವೈಫಲ್ಯ ತೋರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜನ ಸಾಮಾನ್ಯರಿಗೆ ಆರ್ಥಿಕ ಹೊರೆಯಾಗಿದೆ. ಜನರ ಬದುಕು ದುಸ್ಥರವಾಗಿದೆ. ಅಧಿಕಾರಿಗಳಿಗೆ ಭಯ ಇಲ್ಲದಂತಾಗಿದೆ. ಹಣ ತಿಂದು ಬೇಕಾಬಿಟ್ಟಿಯಾಗಿ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವುದು ಇದಕ್ಕೆ ಕಾರಣವಾಗಿದೆ. ಸರ್ಕಾರ ಟ್ರಾನ್ಸಫರ್ ಗೆ ಟಾರ್ಗೆಟ್ ಫಿಕ್ಸ್ ಮಾಡಿದೆ. ಅಧಿಕಾರಿಗಳು ಯೋಜನೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಧಿ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಭ್ರೂಣ ಹತ್ಯೆ ನಿರಂತರವಾಗಿದೆ. ಇಂದಿಗೂ ಭ್ರೂಣ ಹತ್ಯೆ ನಿರಂತರವಾಗಿದೆ. ಸಿಐಡಿ ಗೆ ಹಸ್ತಾಂತರ ಮಾಡಿದರೆ ಎಲ್ಲಾ ಭಾರ ಅದರ ಮೇಲೆ ಹಾಕಿದರೆ ಏನು ಉಪಯೋಗ? ಸಿಐಡಿಗೆ ಕೊಟ್ಟರೆ ಯಾರಿಗೆ ಭಯವಿದೆ, ಇವತ್ತಿಗೂ ಭ್ರೂಣ ಹತ್ಯೆ ನಡೆಯುತ್ತಿದೆ ಎಂದರು.
ಕೋಲಾರ ಜಿಲ್ಲೆಯ ಮಾಲೂರುನಲ್ಲಿ ನಡೆದ ಘಟನೆ ಅಮಾನುಷವಾದದ್ದು. ಈ ಭಾಗದಲ್ಲಿ ಪದೇ ಪದೇ ಘಟನೆ ಈ ರೀತಿ ಆಗತ್ತಿವೆ. ಘಟನೆಯಾದ ಮೇಲೆ ಅಮಾನತ್ತು ಮಾಡಿದರೆ ಏನ ಉಪಯೋಗ. ಘಟನೆ ನಡೆಯದಂತೆ ಎಚ್ವತ್ತುಕೊಳ್ಳುವುದು ಮುಖ್ಯ. ಎಲ್ಲಾ ಮುಗಿದ ಮೇಲೆ ಅಮಾನತ್ತು ಮಾಡುವುದರಲ್ಲಿ ಯಾವ ಶೂರತ್ವವಿಲ್ಲ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.