ಲಾಕ್‌ಡೌನ್ ಸಡಿಲಿಕೆ ದುರುಪಯೋಗವಾಗದಂತೆ ನೋಡಿಕೊಳ್ಳಿ
Team Udayavani, May 2, 2020, 3:36 PM IST
ಅಳ್ನಾವರ: ಕಳೆದ ಒಂದು ತಿಂಗಳಿನಿಂದ ಲಾಕ್ ಡೌನ್ ಘೋಷಣೆಯಾಗಿ ಸ್ಥಗಿತಗೊಂಡಿದ್ದ ಅಗತ್ಯ ಕೆಲಸಗಳಿಗೆ ಸರ್ಕಾರ ಅನುಮತಿ ನೀಡಿದೆ. ದುಡಿಮೆಗಾರರು, ವ್ಯವಹಾರಸ್ಥರು ಹಾಗೂ ರೈತರಿಗೆ ಅನುಕೂಲವಾಗಲಿದೆ. ಆದರೂ ಸರ್ಕಾರದ ನಿರ್ದೇಶನಗಳನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು
ಪಪಂದಲ್ಲಿ ಅಧಿಕಾರಿಗಳು, ಉದ್ಯಮಿಗಳು ಹಾಗೂ ವರ್ತಕರ ಸಭೆ ನಡೆಸಿ ಅವರು ಮಾತನಾಡಿದರು. ನಿಯಮಾವಳಿಗಳಲ್ಲಿ ಸ್ವಲ್ಪ ಮಟ್ಟಿಗೆ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆ ಕೈಕೊಳ್ಳಲು ಅನುಕೂಲ ಮಾಡಿಕೊಡಲಾಗಿದೆ. ಈ ಸಡಿಲಿಕೆಯು ಜನದಟ್ಟಣೆಗೆ ಕಾರಣವಾಗದಂತೆ ನೋಡಿಕೊಳ್ಳಬೇಕೆಂದರು.
ಹೆಚ್ಚಿನ ದರಕ್ಕೆ ವಸ್ತುಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಅಂತಹವರ ಮೇಲೆ ಕ್ರಮ ಕೈಕೊಳ್ಳಬೇಕು. ಅವಶ್ಯ ವಸ್ತುಗಳು ಜನರಿಗೆ ಸರಾಗವಾಗಿ ಸಿಗುವಂತೆ ನೋಡಿಕೊಳ್ಳಬೇಕು. ಕೆಲಸಕ್ಕೆ ಹೊರಗಿನಿಂದ ಕಾರ್ಮಿಕರನ್ನು ಕರೆತರಬಾರದು. ರೈತರು ಕೃಷಿ ಚಟುವಟಿಕೆಗಳಿಗೆ ಹೊಲಗಳಿಗೆ ಓಡಾಡಲು ಅಡಚಣೆ ಮಾಡಬಾರದೆಂದು ಹೇಳಿದರು.
ತಹಶೀಲ್ದಾರ್ ಅಮರೇಶ ಪಮ್ಮಾರ, ಪಪಂ ಮುಖ್ಯಾಧಿಕಾರಿ ವೈ.ಜಿ. ಗದ್ದಿಗೌಡರ, ಪಿಎಸ್‌ಐ ಎಸ್.ಆರ್. ಕಣವಿ, ಎಂಎಸ್ ಐಎಲ್ ನಿರ್ದೇಶಕ ಶಿವಾಜಿ ಡೊಳ್ಳಿನ, ಸರ್ಕಾರಿ ಆಸ್ಪತ್ರೆ ವೈದ್ಯ ಡಾ| ಎನ್.ಎಸ್. ಪಾಟೀಲ, ಲಿಂಗರಾಜ ಮೂಲಿಮನಿ, ನಾರಾಯಣ ಮೋರೆ, ಉದ್ದಿಮೆದಾರ ಎಂ.ಸಿ.ಹಿರೇಮಠ, ಬಸವೇಶ ಹಟ್ಟಿಹೋಳಿ, ಯಲ್ಲಾರಿ ಹುಬ್ಬಳಿಕರ, ಸುನಂದಾ ಕಲ್ಲು, ರಾಜೇಶ ಬೈಕೇರಿಕರ,ಪ್ರತಾಪ ಕಲಾಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
ಭುಗಿಲೆದ್ದ ಮೀಸಲು ರೊಚ್ಚು; ಸದನದ ಒಳ-ಹೊರಗೆ ಪ್ರತಿಭಟನೆ; ಉತ್ತರ ಕರ್ನಾಟಕದಲ್ಲಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.