ಕುಡಿಯುವ ನೀರಿನ ಅಭಾವ ಆಗದಂತೆ ಮುನ್ನೆಚ್ಚರಿಕೆ ವಹಿಸಿ

Team Udayavani, Feb 16, 2021, 3:39 PM IST

ಕುಡಿಯುವ ನೀರಿನ ಅಭಾವ ಆಗದಂತೆ ಮುನ್ನೆಚ್ಚರಿಕೆ ವಹಿಸಿ

ಧಾರವಾಡ: ಬೇಸಿಗೆ ಆರಂಭ ಆಗುತ್ತಿರುವುದರಿಂದ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಅಭಾವ ಆಗದಂತೆಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರವಿಕುಮಾರ ಸುರಪುರ ಹೇಳಿದರು.

ನಗರದ ಜಿಪಂ ಸಭಾಂಗಣದಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ನೀರಿನ ಅಭಾವ ಆಗಲಿರುವಸಂಭವನೀಯ ಗ್ರಾಮಗಳ ಪಟ್ಟಿ ಮಾಡಿ,ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ನಗರಾಭಿವೃದ್ಧಿ ಯೋಜನೆಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ರೈತರಿಗೆ ಇನ್‌ಪುಟ್‌ ಸಬ್ಸಿಡಿ, ಬೆಳೆವಿಮಾ ಸೌಲಭ್ಯ, ಮನೆ ಹಾನಿಯಾದವರಿಗೆ ಸಹಾಯಧನ ತಲುಪುವಂತೆ ಕ್ರಮ ಕೈಗೊಳ್ಳಬೇಕು. ವಿವಿಧ ಇಲಾಖೆಗಳಿಂದಜಿಲ್ಲೆಯ ರಸ್ತೆ, ಕುಡಿಯುವ ನೀರು, ಭೂತಸೌಕರ್ಯಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆಪ್ರಸಕ್ತ ಸಾಲಿಗೆ ಹಂಚಿಕೆ ಮತ್ತು ಬಿಡುಗಡೆಆಗಿರುವ ಅನುದಾನವನ್ನು ಸಮರ್ಪಕವಾಗಿಬಳಸಿಕೊಂಡು ನಿಗದಿತ ಅಭಿವೃದ್ಧಿ ಸಾಧಿ ಸಬೇಕೆಂದು ಸೂಚನೆ ನೀಡಿದರು.

ಡಿಸಿ ನಿತೇಶ ಪಾಟೀಲ ಮಾತನಾಡಿ, ಸರಕಾರದ ಎಲ್ಲ ಕಾರ್ಯಕ್ರಮಗಳನ್ನುಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆತರಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಕೋವಿಡ್‌ ನಿರ್ವಹಣೆ, ಆಯುಷ್ಮಾನಭಾರತ ಆರೋಗ್ಯ ಕರ್ನಾಟಕ ಯೋಜನೆಉತ್ತಮವಾಗಿದೆ. ಹಲವಾರು ಗ್ರಾಮಗಳಲ್ಲಿಸರಕಾರಿ ಜಮೀನು ಒತ್ತುವರಿ ತೆರವು ಕಾರ್ಯ ಕೈಗೊಳ್ಳಲಾಗಿದೆ. ಬೇಡಿಕೆ ಇರುವ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಉಳಿದಜನರಿಗೆ ಅಗತ್ಯವಿರುವ ಸ್ಮಶಾನ ಭೂಮಿ ಕಲ್ಪಿಸಲು ಕ್ರಮ ವಹಿಸಲಾಗಿದೆ ಎಂದರು.

ಸಂಸತ್‌ ಸದಸ್ಯರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗಳ ಪ್ರಗತಿಯಾಗಿದ್ದು, ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಡಿಸಿ ಪಿಡಿ ಖಾತೆಯಲ್ಲಿಅನುದಾನ ಲಭ್ಯವಿದ್ದು, ತುರ್ತು ಮತ್ತುಅಗತ್ಯ ಕಾಮಗಾರಿ ಕೈಗೊಳ್ಳುವ ಬೇಡಿಕೆ ಇದ್ದರೆತಾಲೂಕಾವಾರು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಪಂಉಪ ಕಾರ್ಯದರ್ಶಿ ಎಸ್‌.ಎಮ್‌. ಕುಂದೂರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ|ಯಶವಂತಮದೀನಕರ ಸೇರಿದಂತೆ ಜಿಲ್ಲೆಯ ಎಲ್ಲ ತಾಲೂಕಿನ ತಹಶೀಲ್ದಾರರು, ತಾಪಂ ಇಒಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.