ಬರ ಮುಕ್ತ ಜಿಲ್ಲೆ ಮಾಡಲು ಬದ್ಧತೆ ತೋರಿ
Team Udayavani, Mar 18, 2019, 10:46 AM IST
ಧಾರವಾಡ: ಜಿಲ್ಲೆಯನ್ನು ಬರಗಾಲ ಮುಕ್ತಗೊಳಿಸಲು ಗ್ರಾಮ ಮಟ್ಟದಲ್ಲಿರುವ ಎಲ್ಲ ಅಧಿ ಕಾರಿಗಳು ಬದ್ಧತೆ ಮತ್ತು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಡಾ| ಬಿ.ಸಿ. ಸತೀಶ ಹೇಳಿದರು.
ತಾಪಂ ಕಾರ್ಯಾಲಯದಲ್ಲಿ ಮತದಾನ ಜಾಗೃತಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರ, ಬರ ನಿರ್ವಹಣೆ ಕುರಿತು ಜರುಗಿದ ತಾಲೂಕಿನ ಪಿಡಿಒಗಳು, ಕಂದಾಯ ನಿರೀಕ್ಷಕರು, ಗ್ರಾಪಂ ಕಾರ್ಯದರ್ಶಿಗಳು ಮತ್ತು ಗ್ರಾಮಲೇಖಾ
ಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನ-ಜಾನುವಾರುಗಳಿಗೆ ಕುಡಿಯುವ ನೀರು, ಜನರಿಗೆ ಸ್ಥಳೀಯವಾಗಿ ಉದ್ಯೋಗ ಮಾಡಲು ಉದ್ಯೋಗ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಆದ್ಯತೆ ನೀಡಿ ಕರ್ತವ್ಯ ನಿರ್ವಹಿಸಬೇಕು. ಧಾರವಾಡ ತಾಲೂಕಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಪ್ರತಿ ಗ್ರಾಮಮಟ್ಟದ ಪಿಡಿಒ, ಗ್ರಾಮಲೆಕ್ಕಾಧಿಕಾರಿಗಳು ತಮ್ಮ ಗ್ರಾಮದಲ್ಲಿರುವ ಸರಕಾರಿ ಹಾಗೂ ಖಾಸಗಿ ಬೋರ್‌ವೆಲ್‌ಗಳ ಸಂಖ್ಯೆ, ನೀರು ಸಂಗ್ರಹಾಗಾರ, ನೀರು ಶುದ್ಧೀಕರಣ ಘಟಕ ಹಾಗೂ ಎಷ್ಟು ದಿನಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ ಎಂಬ ವರದಿಯನ್ನು 2-3 ದಿನಗಳಲ್ಲಿ ಸಲ್ಲಿಸಬೇಕು ಎಂದು ಸೂಚಿಸಿದರು. ಏ. 23ರಂದು ನಡೆಯಲಿರುವ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಪತ್ರಿ ಗ್ರಾಮದ ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿ ಕನಿಷ್ಠ ಮೂರರಿಂದ ನಾಲ್ಕು ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಪಂಚಾಯತ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಆಯೋಜಿಸಬೇಕು. ಗ್ರಾಮದ ಯಾವೊಬ್ಬ ಅರ್ಹ ಮತದಾರನೂ ಮತದಾನದಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು ಎಂದರು.
ಉಪವಿಭಾಗಾಧಿಕಾರಿ ಮಹ್ಮದ ಜುಬೇರ, ತಹಶೀಲ್ದಾರ್ ಪ್ರಕಾಶ ಕುದರಿ, ಇಒ ಎಸ್. ಎಸ್. ಕಾದ್ರೋಳ್ಳಿ ಮತ್ತು ಸಹಾಯಕ ಕಾರ್ಯಪಾಲಕ ಅಭಿಯಂತ ಬಿ.ಕೆ. ಓಲಿಕಾರ ಮಾತನಾಡಿ, ಬರನಿರ್ವಹಣೆ, ಕುಡಿಯುವ ನೀರು ಮತ್ತು ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಅನುಷ್ಠಾನ ಕುರಿತು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.