ಕಡಲೆ ಖರೀದಿ ಆರಂಭ: 8300 ರೈತರ ನೋಂದಣಿ

ಕಳೆದ ವರ್ಷಕ್ಕೆ ಹೋಲಿಸಿದರೆ ಕಮ್ಮಿಯೇ |ಖರೀದಿ ಕೇಂದ್ರಗಳತ್ತ ಬಾರದ ‌ತ್ತ-ಜೋಳ ಬೆಳೆದ ರೈತರು |ಮಾರುಕಟ್ಟೆಯಲ್ಲೇ ಅಧಿಕ ದರ

Team Udayavani, Mar 28, 2021, 6:53 PM IST

dsfhg

ಧಾರವಾಡ: ಜಿಲ್ಲೆಯಲ್ಲಿ ಬರೋಬ್ಬರಿ ಒಂದು ತಿಂಗಳು ವಿಳಂಬವಾದರೂ ಕಡಲೆ ಖರೀದಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಹೆಸರು ನೋಂದಣಿಗೂ ಉತ್ತಮ ಸ್ಪಂದನೆ ರೈತರಿಂದ ಲಭಿಸಿದೆ. ಆದರೆ ಭತ್ತ-ಬೀಳ ಜೋಳ ಖರೀದಿ ಕೇಂದ್ರಗಳಿಗೆ ರೈತರಿಂದ ಸ್ಪಂದನೆ ಸಿಗದಂತಾಗಿದೆ.

ಕಡಲೆ ಖರೀದಿ ಕೇಂದ್ರಗಳಿಗೆ ಒಂದು ತಿಂಗಳಲ್ಲಿ 8300 ರೈತರು ನೋಂದಣಿ ಮಾಡಿಕೊಳ್ಳುವ ಮೂಲಕ ಉತ್ತಮ ಸ್ಪಂದನೆ ಸಿಕ್ಕಿದ್ದರೂ ಕಳೆದ ಬಾರಿಗಿಂತ ಕಡಿಮೆಯೇ. ಕಳೆದ ವರ್ಷ 24 ಸಾವಿರಕ್ಕೂ ಹೆಚ್ಚು ರೈತರು ನೋಂದಣಿ ಮಾಡಿಕೊಂಡಿದ್ದರು. ಆದರೆ ಈ ವರ್ಷ ಇದರ ಪ್ರಮಾಣ ಕಡಿಮೆ ಆಗುವ ಲಕ್ಷಣಗಳೇ ಇವೆ. ಇದಲ್ಲದೇ ಭತ್ತ-ಬೀಳಿ ಜೋಳ ಖರೀದಿ ಕೇಂದ್ರಗಳಿಗೆ ರೈತರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖರೀದಿ ಕೇಂದ್ರಗಳಲ್ಲಿ ನಿಗದಿ ಮಾಡಿರುವ ಬೆಂಬೆಲೆ ಮಾರುಕಟ್ಟೆಗಿಂತ ಕಡಿಮೆ ಇರುವ ಕಾರಣ ರೈತರು ಹಿಂದೇಟು ಹಾಕುವಂತಾಗಿದೆ.

ನೋಂದಣಿ ಅಷ್ಟಕಷ್ಟೆ: 2020-21ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಎಫ್‌ಎಕ್ಯೂ ಗುಣಮಟ್ಟದ ಕಡಲೆ ಕಾಳನ್ನು ಪ್ರತಿ ಕ್ವಿಂಟಲ್‌ಗೆ 5,100 ರೂ.ಗಳಂತೆ ಖರೀದಿಸಲು ಜಿಲ್ಲೆಯಲ್ಲಿ ಆರಂಭಿಸಿರುವ 15 ಖರೀದಿ ಕೇಂದ್ರಗಳಲ್ಲಿ ಫೆ.15ರಿಂದ ಏ.30 ರವರೆಗೆ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆದರೆ ಹೆಸರು ನೋಂದಣಿ ಮಾಡಲು ರೂಪಿಸಿದ್ದ ತಂತ್ರಾಂಶವನ್ನು ಕೇಂದ್ರಗಳಿಗೆ ತಲುಪಲು ವಿಳಂಬ ಆಗಿದ್ದರಿಂದ ಫೆ.24ರಿಂದ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದ್ದು, ಏ.30ರ ವರೆಗೆ ಹೆಸರು ನೋಂದಣಿ ಮಾಡಲು ಅವಕಾಶ ಇದೆ. ಈ ಪೈಕಿ ಈವರೆಗೆ (ಮಾ.26) ಜಿಲ್ಲೆಯ 15 ಖರೀದಿ ಕೇಂದ್ರಗಳಲ್ಲಿ 8300 ಜನ ರೈತರು ತಮ್ಮ ಬೆಳೆ ಮಾರಾಟಕ್ಕೆ ಹೆಸರು ನೋಂದಣಿ ಮಾಡಿದ್ದಾರೆ.

ಇನ್ನೂ ಫೆ.22ರಿಂದ ಮೇ 14ರವರೆಗೆ ರೈತರಿಂದ ಕಡಲೆ ಕಾಳುಗಳನ್ನು ಈ ಕೇಂದ್ರಗಳಲ್ಲಿ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆ ಆಗಬೇಕಿತ್ತು. ಆದರೆ ನೋಂದಣಿ ಪ್ರಕ್ರಿಯೆ ತಡವಾಗಿದ್ದರಿಂದ ಹಾಗೂ ಖರೀದಿ ಆರಂಭಿಸಲು ಅಗತ್ಯ ಸಿದ್ಧತೆ ಕೊರತೆಯಿಂದ ಖರೀದಿ ಪ್ರಕ್ರಿಯೆ ಆರಂಭ ಆಗಿರಲಿಲ್ಲ. ಈಗ ಅಗತ್ಯ ಸಿದ್ಧತೆ ಪೂರ್ಣಗೊಂಡಿದ್ದು, ಒಂದು ತಿಂಗಳ ವಿಳಂಬದ ಬಳಿಕ ಕಳೆದ ಒಂದು ವಾರದಿಂದ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದೆ. ಈ ಒಂದು ವಾರದ ಅವಧಿಯಲ್ಲಿ 15 ಸಾವಿರ ಕ್ವಿಂಟಲ್‌ ನಷ್ಟು ಖರೀದಿ ಆಗಿದ್ದು, ಮೇ 14ರವರೆಗೆ ಖರೀದಿ ಪ್ರಕ್ರಿಯೆ ಇರಲಿದೆ.

ಶಶಿಧರ್‌ ಬುದ್ನಿ

ಟಾಪ್ ನ್ಯೂಸ್

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.