ಭಕ್ತರ ದಿಂಡಿ ಪಾದಯಾತ್ರೆ
Team Udayavani, Nov 1, 2017, 12:50 PM IST
ಉಪ್ಪಿನಬೆಟಗೇರಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಶ್ರೀ ಕ್ಷೇತ್ರ ಇಂಚಗೇರಿ ಮಠದ ಭಕ್ತರು ನ. 2ರಂದು ಹುಬ್ಬಳ್ಳಿಯಲ್ಲಿ ಜರುಗುವ ಶ್ರೀ ಮಾಧವಾನಂದ ಪ್ರಭುಜಿಯವರ 102ನೇ ಜಯಂತಿಯಲ್ಲಿ ಪಾಲ್ಗೊಳ್ಳಲು ಪಾದಯಾತ್ರೆಯಲ್ಲಿ ಉಪ್ಪಿನಬೆಟಗೇರಿಗೆ ಸೋಮವಾರ ಆಗಮಿಸಿದಾಗ ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.
ಗ್ರಾಮದ ಭಕ್ತರಾದ ನಿಂಗಪ್ಪ ಮೇದಾರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀಮಠದ ಶಿಷ್ಯರಾದ ನಾಮದೇವ ಕುಡಚಿ ಮಾತನಾಡಿ, ಪ್ರತಿವರ್ಷದಂತೆ ಈ ವರ್ಷವೂ ಶ್ರೀ ಮಾಧವಾನಂದ ಪ್ರಭುಜಿಯವರ ಜಯಂತಿ ಅಂಗವಾಗಿ ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಶ್ರೀ ಮಾಧವಾನಂದರು ಹುಟ್ಟಿದ ಮನೆಯಲ್ಲಿ ನ. 2ರಂದು ಸಂಜೆ ತೊಟ್ಟಿಲೋತ್ಸವ ನಡೆಯಲಿದೆ.
ವಿದ್ಯಾನಗರದ ಶ್ರೀ ಗಿರೀಶ್ ಆಶ್ರಮದಿಂದ ನಡೆಯುವ ಮೆರವಣಿಗೆಗೆ ಶ್ರೀ ಕ್ಷೇತ್ರ ಇಂಚಗೇರಿ ಮಠದ ಪೀಠಾ ಧಿಪತಿ ಶ್ರೀ ರೇವಣಸಿದ್ಧೇಶ್ವರ ಮಹಾರಾಜರು ಚಾಲನೆ ನೀಡುವರು ಎಂದು ತಿಳಿಸಿದರು. ಶಂಕ್ರಪ್ಪ ಕೌಜಲಗಿ ಮಾತನಾಡಿ, ಸರ್ವಧರ್ಮ ಭಾವೈಕ್ಯತೆಯ ಸಂಕೇತವೇ ಶ್ರೀ ಕ್ಷೇತ್ರ ಇಂಚಗೇರಿ ಮಠದ ಗುರುಗಳ ಸಂದೇಶವಾಗಿದ್ದು, ಇದನ್ನು ಸಾರುವ ಉದ್ದೇಶದಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
ಸುಮಾರು 80ಕ್ಕೂ ಅ ಧಿಕ ಜನ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಆಗಮಿಸಿದ್ದ ಯಾತ್ರಿಕರಿಗೆ ಭಕ್ತರಾದ ನಿಂಗಪ್ಪ ಮೇದಾರ, ಹವಳಪ್ಪ ಮೇದಾರ ಸಹೋದರರು ಉಪಹಾರ ಸೇವೆ ಸಲ್ಲಿಸಿದರು. ನಂತರ ಗ್ರಾಮದ ವಿವಿಧ ಓಣಿಯಲ್ಲಿ ಮೆರವಣಿಗೆ ಮೂಲಕ ಪಾದಯಾತ್ರೆಯು ಯಾದವಾಡ ಮಾರ್ಗವಾಗಿ ಹುಬ್ಬಳ್ಳಿಗೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.