ಜೆಡಿಎಸ್‌ನಿಂದ ಬೈಕ್ ರ್ಯಾಲಿ
Team Udayavani, Aug 23, 2017, 12:46 PM IST
ಹುಬ್ಬಳ್ಳಿ: ಮಹದಾಯಿ, ಕಳಸಾ-ಬಂಡೂರಿ ಸಮಸ್ಯೆ, ರೈತರ ಸಂಪೂರ್ಣ ಸಾಲಮನ್ನಾ, ಫಸಲ್ ಬೀಮಾ ಯೋಜನೆಯ ಪರಿಹಾರ ರೈತರ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಬೇಕು ಹಾಗೂ ಕೇಂದ್ರ ಸರಕಾರವು ಸ್ಥಗಿತಗೊಳಿಸಿರುವ ಹಲವು ಯೋಜನೆಗಳನ್ನು ಪುನಃ ಆರಂಭಿಸಬೇಕೆಂದು ಒತ್ತಾಯಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಬೈಕ್ ರ್ಯಾಲಿಯನ್ನು ಆ.23ರಂದು ಬೆಳಿಗ್ಗೆ 9:30 ಗಂಟೆಗೆ ನವಲಗುಂದದ ಲಿಂಗರಾಜ ವೃತ್ತದಿಂದ ಹುಬ್ಬಳ್ಳಿ ವರೆಗೆ ಆಯೋಜಿಸಿದ್ದಾರೆ.
ಶಾಸಕ ಎನ್.ಎಚ್. ಕೋನರಡ್ಡಿ ನೇತೃತ್ವ ಹಾಗೂ ಯುವ ಜನತಾದಳದ ಅಧ್ಯಕ್ಷ ಶ್ರೀಶೈಲ ಮೂಲಿಮನಿ ಮುಖಂಡತ್ವದಲ್ಲಿ ರ್ಯಾಲಿ ನಡೆಯಲಿದೆ. ರ್ಯಾಲಿ ಕುಮಾರಗೊಪ್ಪ, ಯಮನೂರ, ಅರೇಕುರಹಟ್ಟಿ, ಕರ್ಲವಾಡ, ಕಾಲವಾಡ, ಹೆಬಸೂರ, ಕಿರೇಸೂರ, ಕುಸುಗಲ್ಲ ಮಾರ್ಗವಾಗಿ ನಗರದ ಕೇಶ್ವಾಪುರ ಪ್ರವೇಶಿಸಲಿದೆ.
ನಂತರ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ ಮೂಲಕ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಲಾಗುವುದು. ಅನಂತರ ಗೋಕುಲ ರಸ್ತೆಯ ಚವ್ಹಾಣ ಗಾರ್ಡನ್‌ದಲ್ಲಿ ಮುಕ್ತಾಯಗೊಳ್ಳಲಿದೆ.
ರ್ಯಾಲಿಯಲ್ಲಿ ಹಾಗೂ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಶಾಸಕ ಎನ್.ಎಚ್. ಕೋನರಡ್ಡಿ ಸೇರಿದಂತೆ ಜೆಡಿಎಸ್‌ನ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ನವಲಗುಂದ ತಾಲೂಕ ಜೆಡಿಎಸ್ ಅಧ್ಯಕ್ಷ ವೀರಣ್ಣ ನೀರಲಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.