ಮತ್ತೂಮ್ಮೆ ಬಯೋಮೆಟ್ರಿಕ್-ಪ್ರತಿಭಟನೆ
Team Udayavani, Jun 7, 2019, 8:44 AM IST
ಧಾರವಾಡ: ಡಿಸಿ ಕಚೇರಿ ಎದುರು ಬಿಜೆಪಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಧಾರವಾಡ: ಬಿಪಿಎಲ್ ಕಾರ್ಡ್ ಹೊಂದಿರುವ ಜನರು ಮತ್ತೂಮ್ಮೆ ಬಯೋಮೆಟ್ರಿಕ್ ನೀಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಖಂಡಿಸಿ ಬಿಜೆಪಿ ವತಿಯಿಂದ ಡಿಸಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ಪಡಿತರ ಚೀಟಿ ಹೊಂದಿದ ಸದಸ್ಯರು ಈಗಾಗಲೇ ಬಯೋಮೆಟ್ರಿಕ್ ನೀಡಿ, ಆಧಾರ್ ಜೋಡಣೆ ಸಹ ಮಾಡಿದ್ದಾರೆ. ಆದರೆ, ಇದೀಗ ರಾಜ್ಯ ಸರ್ಕಾರ ಹೊರಡಿಸಿದ ಆದೇಶದಿಂದ ಬಡವರು ತಮ್ಮ ಕೂಲಿ ಕೆಲಸ ಬಿಟ್ಟು ಪಡಿತರ ಅಂಗಡಿಗಳಿಗೆ ಓಡಾಡುವ ಸ್ಥಿತಿ ಉಂಟಾಗಲಿದೆ. ಬಡವರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಒತ್ತಾಯಿಸಲಾಯಿತು.
ಬಿಪಿಎಲ್ ಕಾರ್ಡ್‌ದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿ ವಿತರಣೆ ಬಂದ್ ಮಾಡುವ ನಿಟ್ಟಿನಲ್ಲಿ ಸರ್ಕಾರ ಈ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಇದಲ್ಲದೆ ಬಯೋಮೆಟ್ರಿಕ್ ಹೆಸರಿನಲ್ಲಿ ಜನರ ಜಾತಿ ತಿಳಿಯುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಈ ರೀತಿ ದಿನಕ್ಕೊಂದು ಆದೇಶ ಹೊರಡಿಸುವುದನ್ನು ಬಿಟ್ಟು ಬಡ ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೊಳಿಸಲಿ ಎಂದು ಆಗ್ರಹಿಸಲಾಯಿತು.
ಪ್ರತಿ ಸದಸ್ಯರ ಬಯೋಮೆಟ್ರಿಕ್ ಪಡೆಯಬೇಕು ಎಂದು ಹೊರಡಿಸಿದ ಆದೇಶ ರದ್ದು ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಪಕ್ಷದಿಂದ ಹೋರಾಟ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. ಹು-ಧಾ ಪಶ್ಷಿಮ ವಿಧಾನಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮೋಹನ ರಾಮದುರ್ಗ, ಬಿಜೆಪಿ ಸ್ಲಂ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಶ ಬೇದರೆ, ಬಲರಾಮ ಕುಸುಗಲ್, ಆನಂದ ಯಾವಗಲ್ಲ, ಭೀಮು ಸವಣೂರ, ರಾಕೇಶ ನಾಝರೆ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.