ಬಿಜೆಪಿ ಕೋರ್‌ ಕಮಿಟಿ ಸಭೆ; ಪಕ್ಷ ಸಂಘಟನೆ ಕುರಿತು ಚರ್ಚೆ

ಗ್ರಾಮೀಣ ಕ್ಷೇತ್ರದಲ್ಲಿ ಕೆಲವರು ಈಗಾಗಲೇ ತಾವೇ ಮುಂದಿನ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದಾರೆ

Team Udayavani, Oct 26, 2022, 1:02 PM IST

ಬಿಜೆಪಿ ಕೋರ್‌ ಕಮಿಟಿ ಸಭೆ;ಪಕ್ಷ ಸಂಘಟನೆ ಕುರಿತು ಚರ್ಚೆ

ಹುಬ್ಬಳ್ಳಿ: ಪಕ್ಷ ಸಂಘಟನೆ, ನ. 13ರಂದು ನಗರಲ್ಲಿ ನಡೆಸಲು ಉದ್ದೇಶಿಸಿರುವ ಪಕ್ಷದ ರೈತಮೋರ್ಚಾ ಸಮಾವೇಶ ಇನ್ನಿತರ ವಿಷಯಗಳ ಕುರಿತಾಗಿ ಮಂಗಳವಾರ ಬಿಜೆಪಿ ಜಿಲ್ಲಾ ಕೋರ್‌ ಕಮಿಟಿ ಸಭೆಯಲ್ಲಿ ಚರ್ಚಿಸಲಾಯಿತು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಕ್ಷ ಸಂಘಟನೆಯನ್ನು ಗಟ್ಟಿಗೊಳಿಸುವ ಕುರಿತಾಗಿ ಹೆಚ್ಚಿನ ರೀತಿಯಲ್ಲಿ ಚರ್ಚಿಸಲಾಗಿದೆ. ಬೂತ್‌ಮಟ್ಟದಲ್ಲಿ ಶಕ್ತಿ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸುವ, ಮುಂಬರುವ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಪಕ್ಷ ಹೆಚ್ಚಿನ ಸ್ಥಾನಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಯಿತು.

ಜತೆಗೆ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಿ ಆ ಕ್ಷೇತ್ರದಲ್ಲಿಯೂ ಪಕ್ಷ ಗೆಲುವು ಕಾಣುವಂತೆ ಮಾಡುವ ನಿಟ್ಟಿನಲ್ಲಿ ಸಮಾಲೋಚಿಸಲಾಯಿತು.

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಕೆಲವರು ಈಗಾಗಲೇ ತಾವೇ ಮುಂದಿನ ಅಭ್ಯರ್ಥಿ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಗಳು ಬಂದಿದ್ದು, ಇಂತಹ ಕಾರ್ಯ ಮಾಡುವುದು ಬೇಡ. ಪಕ್ಷದ ಶಿಸ್ತಿನ ಕಾರ್ಯಕರ್ತರಾಗಿರಿ, ಪಕ್ಷ ಯಾರಿಗೆ ಅವಕಾಶ ಕೊಡುತ್ತದೆಯೋ ಉಳಿದವರು ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವ ಕಾರ್ಯ ಮಾಡಬೇಕೆಂದು ನಾಯಕರು ಸಲಹೆ ನೀಡಿದರು. ಹುಡಾ ಅಧ್ಯಕ್ಷರ ನೇಮಕ ವಿಚಾರವೂ ಚರ್ಚೆಗೆ ಬಂದಿತು.

ಅ.30ರಂದು ಕಲಬುರಗಿಯಲ್ಲಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾ ಸಮಾವೇಶ ನಡೆಯಲಿದ್ದು, ನ.13ರಂದು ಹುಬ್ಬಳ್ಳಿಯಲ್ಲಿ ರೈತಮೋರ್ಚಾ ಸಮಾವೇಶ ನಡೆಸಲು ಉದ್ದೇಶಿಸಲಾಗಿದೆ. ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಲ್ಲವೆ ಇತರೆ ಕೇಂದ್ರ ನಾಯಕರು ಆಗಮಿಸುವ ಸಾಧ್ಯತೆ ಇದ್ದು, ಸುಮಾರು 3 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಸಮಾವೇಶ ಯಶಸ್ವಿಗೆ ಶ್ರಮಿಸುವ, ಸಮಿತಿಗಳನ್ನು ರಚಿಸುವ ಬಗ್ಗೆ ಚರ್ಚಿಸಲಾಯಿತು ಎನ್ನಲಾಗಿದೆ.

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮುಖಂಡರಾದ ಪ್ರದೀಪ ಶೆಟ್ಟರ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಲಿಂಗರಾಜ ಪಾಟೀಲ, ಸಂಜಯ ಕಪಟಕರ, ಸೀಮಾ ಮಸೂತಿ, ವೀರಭದ್ರಪ್ಪ ಹಾಲಹರವಿ, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ ಇನ್ನಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

BJP: ಹೈಕಮಾಂಡ್‌ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

13

PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ

ಸತೀಶ ಜಾರಕಿಹೊಳಿ

Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.