ರಾಜ್ಯದಲ್ಲಿ  ಬಿಜೆಪಿ ಸರ್ಕಾರ ಅಧಿಕಾರಕ್ಕೆ: ಸವದಿ


Team Udayavani, May 10, 2018, 5:14 PM IST

10-May-25.jpg

ಬನಹಟ್ಟಿ: ದೇಶದ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ದೇಶವಷ್ಟೇ ಅಲ್ಲದೆ ಇಡೀ ಜಗತ್ತೇ ಮೆಚ್ಚಿರುವುದು ವಿಶೇಷವಾಗಿದೆ. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ನಿಶ್ಚಿತವೆಂದು ಬಿಜೆಪಿ ಜಿಲ್ಲಾಧ್ಯಕ್ಷ, ತೇರದಾಳ ಕ್ಷೇತ್ರದ ಅಭ್ಯರ್ಥಿ ಸಿದ್ದು ಸವದಿ ಹೇಳಿದರು.

ಬುಧವಾರ ಸಂಜೆ ನಗರದ ಈಶ್ವರಲಿಂಗ ಮೈದಾನದಲ್ಲಿ ಮಹಿಳಾ ಕಾರ್ಯಕರ್ತರ ರ್ಯಾಲಿ ಸಂದರ್ಭ ಮಾತನಾಡಿದ ಅವರು, 4 ವರ್ಷಗಳಲ್ಲಿ ಇಡೀ ದೇಶವು ಅಭಿವೃದ್ಧಿಯತ್ತ ಸಾಗುತ್ತಿದ್ದು, ಎಲ್ಲ ರಾಜ್ಯಗಳಲ್ಲಿನ ಜನತೆ ಬಿಜೆಪಿಯನ್ನು ಮೆಚ್ಚಿದ್ದಾರೆ. ಈ ಬಾರಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಮಲ ಅರಳಲಿದೆ ಎಂದರು.

ಯಡಿಯೂರಪ್ಪ ನೇತೃತ್ವದ ಸರ್ಕಾರವಧಿಯಲ್ಲಿ ರೈತ ಹಾಗೂ ನೇಕಾರರಿಗೆ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರಾಜ್ಯದ ಜನತೆಗೆ ನಿಟ್ಟುಸಿರುವ ಬಿಡುವಲ್ಲಿ ಕಾರಣವಾಗಿತ್ತು. ಕಳೆದ 5 ವರ್ಷಗಳ ಕಾಂಗ್ರೆಸ್‌ನ ದುರಾಡಳಿತದಲ್ಲಿ ಸಾಮಾನ್ಯ ಜನತೆ ತೀವ್ರ ಸಂಕಷ್ಟ ಎದುರಿಸುವಲ್ಲಿ ಕಾರಣವಾಗಿದೆ ಎಂದು  ಸವದಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಇದೇ ಸಂದರ್ಭ ಸಾವಿರಾರು ಮಹಿಳಾ ಕಾರ್ಯಕರ್ತೆಯರೊಂದಿಗೆ ಬನಹಟ್ಟಿ ನಗರಾದ್ಯಂತ ಬೃಹತ್‌ ರ್ಯಾಲಿ ನಡೆಸಿದರು.

ರಾಜು ಅಂಬಲಿ, ಶ್ರೀಶೈಲ ಯಾದವಾಡ, ಕಣೆಪ್ಪ ಹಾರೂಗೇರಿ, ರಾಜು ಬಾಣಕಾರ, ಕುಮಾರ ಕದಮ, ಮೀನಾಕ್ಷಿ ಸವದಿ, ಸಂಗೀತಾ ಖಾನಾಪುರ, ಶಾಂತಾ ಸೊರಗಾಂವಿ, ಸುನಿತಾ ನಂದಗೋಂಡ, ಮಾಲಾ ಬಾವಲತ್ತಿ, ಶೈಲಜಾ ಹೊಸಕೋಟಿ, ಸಾವಿತ್ರಿ ಪಾಟೀಲ, ವೈಷ್ಣವಿ ಬಾಗೇವಾಡಿ, ರತ್ನಾ ಕೊಳಕಿ, ಸವಿತಾ ಹೊಸೂರ, ಸುರೇಶ ಚಿಂಡಕ, ಭೀಮಶಿಮಗದುಮ್ಮ, ಧರೆಪ್ಪ ಉಳ್ಳಾಗಡ್ಡಿ, ಪ್ರಭು ಮೊಳೇದ, ಗೋವಿಂದ ಡಾಗಾ, ದುಂಡಪ್ಪ ಮಾಚಕನೂರ, ಚಿದಾನಂದ ಹೊರಟ್ಟಿ, ರವಿ ಕರಲಟ್ಟಿ, ಮಲ್ಲಿಕಾರ್ಜುನ ಬಾಣಕಾರ, ಮಹಾಲಿಂಗಪ್ಪ ಕೋಳಿಗುಡ್ಡ, ಗುಂಡು ಹೂಲಿ, ಶ್ರೀಶೈಲ ಬೀಳಗಿ, ಪ್ರಕಾಶ ಬೇವಿನಗಿಡದ, ಸತೀಶ ಸುಟ್ಟಟ್ಟಿ, ಮಲ್ಲಪ್ಪ ಪಟಗುಂಡಿ, ಮುರಾಧ ಮೊಮೀನ್‌, ಬಸೀರ ಮೊಮೀನ್‌ ಸೇರಿದಂತೆ ಅನೇಕರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

KSD-

Kasaragodu: ಆದೂರು ಶ್ರೀಭಗವತಿ ದೈವಸ್ಥಾನ: 351 ವರ್ಷ ಬಳಿಕ ಪೆರುಂಕಳಿಯಾಟ ಸಂಭ್ರಮ

Police

Kodagu: ಬ್ಯಾಂಕ್‌ ಅಧಿಕಾರಿಗಳು, ಜುವೆಲರಿ ಮಾಲಕರ ಜೊತೆ ಎಸ್‌ಪಿ ಸಭೆ

cOurt

Mangaluru: ಪೋಕ್ಸೋ ಪ್ರಕರಣದ ಆರೋಪಿ ದೋಷಮುಕ್ತ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣMLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ

ಸಮಾಜಘಾತಕ ಶಕ್ತಿಗಳ ವಿರುದ್ಧ ಗಂಭೀರ ಕ್ರಮ: ಸಿದ್ದರಾಮಯ್ಯ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯತ್ನಾಳ್‌

Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್‌ ಆರೋಪ

Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ

Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ

BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ

BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ

BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್‌ ನಿರ್ಧಾರ: ಅರವಿಂದ ಬೆಲ್ಲದ

BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್‌ ನಿರ್ಧಾರ: ಅರವಿಂದ ಬೆಲ್ಲದ

Hubli: ಮೀಟರ್‌ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ

Hubli: ಮೀಟರ್‌ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ

MUST WATCH

udayavani youtube

ಕಡಿಮೆ ಜಾಗದಲ್ಲಿ ಉತ್ತಮ ಅನಾನಸ್ ಕೃಷಿ ಮಾಡಲು ಇಲ್ಲಿದೆ ಮಾಹಿತಿ

udayavani youtube

ಮಂಗಳೂರು | ಸ್ಥಳೀಯ ಮನೆಯಂಗಳಕ್ಕೆ ಹರಿಯುತ್ತಿರುವ ಡ್ರೈನೇಜ್ ಕೊಳಚೆ

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಹೊಸ ಸೇರ್ಪಡೆ

Suside-Boy

Manipal: ಪಶ್ಚಿಮ ಬಂಗಾಲದ ವ್ಯಕ್ತಿಯ ಶವ ಪತ್ತೆ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Udupi: ಗೀತಾರ್ಥ ಚಿಂತನೆ-163: ದ್ವಂದ್ವ ಇದ್ದಾಗ ಅನುಭವವೇ ಉತ್ತರ

Frud

Udupi: ಷೇರು ಮಾರುಕಟ್ಟೆಯಲ್ಲಿ 21ಲಕ್ಷ ರೂ. ಹೂಡಿಕೆ: ವಂಚನೆ

balaparadha

Kumbale: ಮೊಬೈಲ್‌ ಫೋನ್‌ ಕಳವು: ಆರೋಪಿ ಸೆರೆ

Suside-Boy

Vitla: ಅನಂತಾಡಿ: ಸೀರೆಗೆ ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.