ಪುರಸಭೆ ಬಿಜೆಪಿ ಸದಸ್ಯನ ಹತ್ಯೆಗೆ ಖಂಡನೆ
Team Udayavani, Mar 18, 2017, 3:06 PM IST
ಹುಬ್ಬಳ್ಳಿ: ಆನೆಕಲ್ಲ ತಾಲೂಕಿನ ಬಮ್ಮನಹಳ್ಳಿ ಪುರಸಭೆ ಸದಸ್ಯ ಹಾಗೂ ದಲಿತ ಮುಖಂಡ ಶ್ರೀನಿವಾಸ ಪ್ರಸಾದ(ವಾಸು) ಅವರ ಹತ್ಯೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸಿಗೆ-ದಿಂಬು ಖರೀದಿ ಅವ್ಯವಹಾರ ಖಂಡಿಸಿ ಬಿಜೆಪಿ ಮಹಾನಗರ ಜಿಲ್ಲಾ ಎಸ್‌ಟಿ, ಎಸ್‌ಸಿ ಮೋರ್ಚಾದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದ್ದು, ಹಾಡಹಗಲೇ ಕೊಲೆ-ಸುಲಿಗೆಗಳು ನಡೆಯುತ್ತಿದ್ದರು ರಾಜ್ಯ ಸರಕಾರ ಗಾಡನಿದ್ರೆ ಮಾಡುತ್ತಿದೆ. ರಾಜಕೀಯ ಪ್ರೇರಿತ ಹತ್ಯೆಗಳು ಹೆಚ್ಚುತ್ತಿರುವುದು ಆತಂಕ ಮೂಡಿಸುವಂತಾಗಿದೆ.
ತಕ್ಷಣ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಸಮಾಜ ಕಲ್ಯಾಣ ಇಲಾಖೆಯಲ್ಲಿಹಾಸಿಗೆ-ದಿಂಬು ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಇಲಾಖೆಯ ಸಚಿವರು ಶಾಮೀಲಾಗಿದ್ದಾರೆ.
ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು. ಬಿಜೆಪಿ ಮುಖಂಡರಾದ ನಾಗೇಶ ಕಲುರ್ಗಿ, ಮಹೇಶ ಟೆಂಗಿನಕಾಯಿ, ವೆಂಕಟೇಶ ಮೇಸಿ, ಅರುಣಕುಮಾರ ಹುದಲಿ, ಶಂಕ್ರಪ್ಪ ಬಿಜವಾಡ, ಶಿವು ಮೆಣಸಿನಕಾಯಿ, ಬಸವರಾಜ ಅಮ್ಮಿನಬಾವಿ, ಮಹೇಂದ್ರ ಕೌತಾಳ, ಶಂಕ್ರಪ್ಪ ಛಬ್ಬಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.