ಸರ್ಕಾರ ಬಿದ್ದರೆ ಬಿಜೆಪಿ ಹೊಣೆಯಲ್ಲ: ರವಿಕುಮಾರ್‌


Team Udayavani, Sep 17, 2018, 6:00 AM IST

ravi-kumaraa.jpg

ಹುಬ್ಬಳ್ಳಿ: ಸಿಎಂ ಕುಮಾರಸ್ವಾಮಿ ಬಿಜೆಪಿ ಕುರಿತು ಆಧಾರ ರಹಿತ ಆರೋಪ ಮಾಡುತ್ತಿದ್ದಾರೆ. ಅವರು ಹಿಟ್‌ ಆ್ಯಂಡ್‌ ರನ್‌ನಲ್ಲಿ ನಿಸ್ಸೀಮರಾಗಿದ್ದಾರೆ. ಕಿಂಗ್‌ಪಿನ್‌ ಹಾಗೂ ಮಾಸ್ಟರ್‌ಪಿನ್‌ ಅವರಿಗೆ ಸಂಬಂಧಿಸಿದ್ದಾಗಿದ್ದು, ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಸರ್ಕಾರದೊಳಗಿನ ಆಂತರಿಕ ಸಮಸ್ಯೆ, ಒಳ ಬೇಗುದಿಯೇ ಕಾರಣ ವಿನಃ ಬಿಜೆಪಿ ಅದಕ್ಕೆ ಹೊಣೆಯಲ್ಲ ಎಂದು ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ ಹೇಳಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಭವಿಷ್ಯವೆಂಬುದಿಲ್ಲ. ಒಂದು ವೇಳೆ ಸಮ್ಮಿಶ್ರ ಸರ್ಕಾರ ಪತನಗೊಂಡರೆ ಬಿಜೆಪಿಗೆ ಅಧಿಕಾರ ಹಿಡಿಯಲು ಸಾಕಷ್ಟು ಅವಕಾಶಗಳಿವೆ. ಆದರೆ ಸಿಎಂ ಕುಮಾರಸ್ವಾಮಿ, ಬಿಜೆಪಿ ಸಮ್ಮಿಶ್ರ ಸರ್ಕಾರ ಬೀಳಿಸಲು ಪ್ರಯತ್ನಿಸುತ್ತಿದೆ ಎಂದು ಸುಳ್ಳು ಆಪಾದನೆ ಮಾಡುತ್ತಿದ್ದಾರೆ. ನಾವು ಯಾವುದೇ ಆಪರೇಷನ್‌ ಕಮಲ ಮಾಡುತ್ತಿಲ್ಲ ಎಂದರು.

ಸಮ್ಮಿಶ್ರ ಸರ್ಕಾರದಲ್ಲಿ ಗೊಂದಲ ಉಂಟಾಗಲು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಕಾರಣ. ಕಾಂಗ್ರೆಸ್‌ನ ಒಳಗಡೆ ಸಾಕಷ್ಟು ಸಮಸ್ಯೆಗಳಿವೆ. ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್‌ ಚುನಾವಣೆ ವಿಷಯವಾಗಿ ಲಕ್ಷಿ¾à ಹೆಬ್ಟಾಳಕರ ಹಾಗೂ ಜಾರಕಿಹೊಳಿ ಸಹೋದರರ ನಡುವೆ ದೊಡ್ಡ ಕಿತ್ತಾಟ ನಡೆಯಿತು. ಆ ಪಕ್ಷದಲ್ಲಿ ದೊಡ್ಡ ಸಮಸ್ಯೆಯಿದೆ ಎಂಬುದು ಬಹಿರಂಗಗೊಂಡಿದೆ. ಬೆಳಗಾವಿ, ಚಿಕ್ಕೋಡಿ ಭಾಗದ ಶಾಸಕರಿಗೆ ಸಚಿವ ಡಿ.ಕೆ. ಶಿವಕುಮಾರ ಕೆಲಸ ಮಾಡಲು ಬಿಡುತ್ತಿಲ್ಲ, ಅನವಶ್ಯಕವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಅಸಮಾಧಾನಗೊಂಡಿದ್ದಾರೆ ಎಂದರು.

ಸಚಿವ ಎಚ್‌.ಡಿ. ರೇವಣ್ಣ ಲೋಕೋಪಯೋಗಿ ಇಲಾಖೆ ಜೊತೆಗೆ ಎಲ್ಲ ಇಲಾಖೆಗಳಲ್ಲಿ ತಮ್ಮ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಗುತ್ತಿಗೆ ಪಡೆದಿದ್ದಾರೆ. ಇವರ ಕಾರ್ಯವೈಖರಿಯಿಂದಾಗಿ ಬಹಳಷ್ಟು ಅಧಿಕಾರಿಗಳು, ಶಾಸಕರು ಅಸಮಾಧಾನಗೊಂಡಿದ್ದಾರೆ. ಸರ್ಕಾರದ ಆರ್ಥಿಕ ಪರಿಸ್ಥಿತಿ ತುಂಬಾ ಹದಗೆಟ್ಟಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಹೀಗಾಗಿ ಶಾಸಕರಲ್ಲಿ ಅಸಮಾಧಾನವುಂಟಾಗಿದೆ ಎಂದರು.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.