ಅನಿಲ ಗೆಲುವಿಗಾಗಿ ಬಿಜೆಪಿ ಮ್ಯಾರಥಾನ್
Team Udayavani, May 4, 2018, 5:20 PM IST
ಗದಗ: ಬಿಜೆಪಿ ಅಭ್ಯರ್ಥಿ ಅನಿಲ ಮೆಣಸಿನಕಾಯಿ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ‘ರನ್ ಫಾರ್ ಡೆವಲಪ್ ಮೆಂಟ್-ರನ್ ಫಾರ್ ಗದಗ ಚೇಂಜ್ ಮ್ಯಾರಥಾನ್’ ಓಟದ ಮೂಲಕ ವಿನೂತನವಾಗಿ ಮತಯಾಚಿಸಲಾಯಿತು. ಕಳಸಾಪುರ ರಸ್ತೆಯಲ್ಲಿರುವ ಸಿದ್ದಲಿಂಗ ನಗರದ ಬಯಲು ಆಂಜನೇಯ ದೇವಸ್ಥಾನದಿಂದ ಆರಂಭಗೊಂಡ ಮ್ಯಾರಾಥಾನ್ ಓಟ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿತು. ಓಟದಲ್ಲಿ ಪಾಲ್ಗೊಂಡಿದ್ದ ನೂರಕ್ಕೂ ಹೆಚ್ಚು ಯುವಕರೊಂದಿಗೆ ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಓಟ ಮುಂದುವರಿಸಿದರು.
ಈ ನಡುವೆ ಜೋಡಮಾರುತಿ ದೇವಸ್ಥಾನದ ಬಳಿ ಸ್ಥಳೀಯ ಯುವಕರು ಹೂವಿನ ಮಳೆಗರೆದರೆ, ಮುತೈದೆಯರು ಬಿಜೆಪಿ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಅವರ ಹಣೆಗೆ ವಿಜಯ ತಿಲಕವಿಟ್ಟು ಆರತಿ ಬೆಳಗಿ ಶುಭ ಕೋರಿದರು.
ಅಲ್ಲಲ್ಲಿ ಅಂಗಡಿ, ಇಡ್ಲಿ ಬಂಡಿ ಮಾಲೀಕರ, ಪಂಚರ ಹೊಂಡ ಬಳಿ ಬೀದಿ ಬದಿ ವ್ಯಾಪಾರಿಗಳ ಕುಶಲೋಪರಿ ವಿಚಾರಿಸಿ, ಈ ಬಾರಿ ಗದಗ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡುವಂತೆ ಕೈಮುಗಿದು ಕೇಳಿಕೊಂಡರು.
ನಳದ ನೀರಿಗಾಗಿ ಸರದಿ ನಿಂತಿದ್ದ ಮಹಿಳೆಯರಿಂದ ಸ್ಥಳೀಯ ಸಮಸ್ಯೆಗಳನ್ನು ಆಲಿಸಿದ ಬಳಿಕ ಮಾತನಾಡಿದ ಅನಿಲ್ ಮೆಣಸಿನಕಾಯಿ, ಬಿ. ಶ್ರೀರಾಮುಲು ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ನಗರದಲ್ಲಿ ನೀರಿನ ಸಮಸ್ಯೆ ತಕ್ಕಮಟ್ಟಿಗೆ ನಿವಾರಣೆಯಾಗಿತ್ತು. ಶ್ರೀಶೈಲಪ್ಪ ಬಿದರೂರ ಅವರು ಶಾಸಕರಾಗಿದ್ದ ನಗರದ 2ನೇ ಹಂತದ ಕುಡಿಯುವ ನೀರಿನ ಯೋಜನೆಗೆ ಅಂದಿನ ಬಿಜೆಪಿ ಸರ್ಕಾರ ಅನುದಾನ ಒದಗಿಸಿತ್ತು. ಅದೇ ಹಣದಲ್ಲಿ ಗದಗ-ಬೆಟಗೇರಿ 24*7 ಕುಡಿಯುವ ನೀರಿನ ಯೋಜನೆ ಜಾರಿಗೆ ತಂದಿದ್ದಾರೆ. ಆದರೆ, ಐದು ವರ್ಷ ಅಧಿಕಾರವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಸ್ಥಳೀಯ ಶಾಸಕ ಎಚ್.ಕೆ. ಪಾಟೀಲ
ವಿಫಲರಾಗಿದ್ದಾರೆ. ಈ ಬಾರಿ ಗದುಗಿನಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದ್ದು, ಕೆಲವೇ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಇದಕ್ಕೂ ಮುನ್ನ ಮ್ಯಾರಾಥಾನ್‌ಗೆ ಚಾಲನೆ ನೀಡಿದ ಬಿಜೆಪಿ ಚುನಾವಣಾ ಉಸ್ತುವಾರಿ ಎಂ.ಎಸ್. ಕರಿಗೌಡ್ರ ಮಾತನಾಡಿ, ಭ್ರಷ್ಟಾಚಾರ ಮುಕ್ತ ದೇಶ ನಿರ್ಮಿಸಲು ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು. ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಕೈಗೊಂಡಿರುವ ಜನಪರ, ಅಭಿವೃದ್ಧಿ ಪರ ಕ್ರಮಗಳಿಂದಾಗಿ ವಿಶ್ವವೇ ಹಾಡಿ ಹೊಗಳುತ್ತಿದೆ ಎಂದರು.
ಕಳಸಾಪುರ ರಸ್ತೆಯಲ್ಲಿರುವ ಸಿದ್ದಲಿಂಗ ನಗರದ ಬಯಲು ಆಂಜನೇಯ ದೇವಸ್ಥಾನದಿಂದ ಆರಂಭಗೊಂಡ ಮ್ಯಾರಾಥಾನ್ ಓಟ ಸಿಂಹದ ಕೆರೆ, ತ್ರಿಕುಟೇಶ್ವರ ದೇವಸ್ಥಾನ, ಜೋಡ ಹನುಮಾನ ದೇವರ ಗುಡಿ, ಜುಮ್ಮಾ ಮಸೀದಿ, ಪಂಚರ ಹೊಂಡ, ಗ್ರೇನ್ ಮಾರ್ಕೆಟ್, ಕೆ.ಎಚ್. ಪಾಟೀಲ ಸರ್ಕಲ್, ಪುಟ್ಟರಾಜ ಕವಿಗವಾಯಿಗಳ ಸರ್ಕಲ್, ಸ್ಟೇಡಿಯಂ ಮಾರ್ಗವಾಗಿ ಜೆ.ಟಿ. ಕಾಲೇಜುವರೆಗೆ ಮ್ಯಾರಾಥಾನ್ ನಡೆಯಿತು.
ಮ್ಯಾರಾಥಾನ್ ಓಟದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಜಗತಾಪ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಜು ಕುರಡಗಿ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಕಾಂತಿಲಾಲ ಬನ್ಸಾಲಿ, ನಗರಸಭಾ ಸದಸ್ಯರಾದ ಸಂತೋಷ ಮೇಲಗಿರಿ, ಅನಿಲ ಅಬ್ಬಿಗೇರಿ, ವಿನಾಯಕ ಮಾನ್ವಿ, ಬಿಜೆಪಿ ಮುಖಂಡರಾದ ಸಿದ್ದಲಿಂಗೇಶ ಮೆಣಸಿನಕಾಯಿ, ಬಸವಣ್ಣಯ್ಯ ಹಿರೇಮಠ, ರಾಘವೇಂದ್ರ ಹಳ್ಳದ, ಎಂ.ಎಂ. ಹಿರೇಮಠ, ರಮೇಶ ಮುಳಗುಂದ, ಅರವಿಂದ ಹುಲ್ಲೂರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.