ಆಸ್ತಿಯಾಗುವವರನ್ನು ಮಾತ್ರ ಸೇರ್ಪಡೆ, ಹೊರೆಯಾಗುವವರಲ್ಲ:ಎಂಬಿಪಿ, ಕುಲಕರ್ಣಿಗೆ CT ರವಿ ಟಾಂಗ್
Team Udayavani, Oct 20, 2020, 2:31 PM IST
ಹುಬ್ಬಳ್ಳಿ: ಮಾಜಿ ಸಚಿವರಾದ ಎಂ.ಬಿ.ಪಾಟೀಲ ಮತ್ತು ವಿನಯ ಕುಲಕರ್ಣಿ ಪಕ್ಷಕ್ಕೆ ಸೇರ್ಪಡೆ ಯಾವುದೇ ಚರ್ಚೆಯಾಗಿಲ್ಲ. ಪಕ್ಷಕ್ಕೆ ಆಸ್ತಿಯಾಗುವವರನ್ನು ಪಕ್ಷ ಬಯಸುತ್ತದೆ ವಿನಃ ಹೊರೆಯಾಗುವವರನ್ನಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಘಟಕದ ಅಭಿಪ್ರಾಯ ಪಡೆಯದೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಎಂ.ಬಿ.ಪಾಟೀಲ ಮತ್ತು ವಿನಯ ಕುಲಕರ್ಣಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕೇವಲ ಗಾಳಿ ಸುದ್ದಿ ಎಂದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರವಿ, ಹಲವು ಕಾರಣಕ್ಕೆ ಅವರು ಹೇಳಿಕೆ ನೀಡುತ್ತಿರುತ್ತಾರೆ. ಅವೆಲ್ಲದಕ್ಕೂ ಪ್ರತಿಕ್ರಿಯೆ ನೀಡಲು ಅಸಾಧ್ಯ. ನಾನು ಜವಬ್ದಾರಿ ಸ್ಥಾನದಲ್ಲಿದ್ದು, ಎಲ್ಲದಕ್ಕೂ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದರು.
ಯಡಿಯೂರಪ್ಪನವರು ನಮ್ಮ ಸರ್ವಾನುಮತದ ನಾಯಕರು. ಅವರ ಆಯ್ಕೆಯನ್ನು ಪಕ್ಷದ ಹೈಕಮಾಂಡ್ ಊರ್ಜಿತಗೊಳಿಸಿದೆ. ಯಾವುದೇ ಕಾರಣಕ್ಕೂ ಬದಲಾವಣೆ ಅಸಾಧ್ಯ ಎಂದು ಸಿ ಟಿ ರವಿ ಹೇಳಿದ್ದಾರೆ.
ಇದನ್ನೂ ಓದಿ:ನ್ಯಾಯಾಧೀಶರಿಗೆ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್: ತುಮಕೂರಿನಲ್ಲಿ ಇಬ್ಬರ ಬಂಧನ
ಯಡಿಯೂರಪ್ಪ ಅವರು ಹೈಕಮಾಂಡ್ ಗೂ ಸಾಕಾಗಿದ್ದಾರೆ. ಇನ್ನೇನು ಬಹಳ ದಿನ ಅವರು ಮುಖ್ಯಮಂತ್ರಿ ಆಗಿರುವುದಿಲ್ಲ. ಉತ್ತರ ಕರ್ನಾಟಕದವರನ್ನು ಮುಖ್ಯಮಂತ್ರಿ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ನೀಡಿದ್ದರು.
ಇದನ್ನೂ ಓದಿ:ಹೈಕಮಾಂಡ್‍ಗೂ ಬಿಎಸ್‍ವೈ ಸಾಕಾಗಿದ್ದಾರೆ, ಸಿಎಂ ಪಟ್ಟ ಬಹಳ ದಿನ ಇರಲ್ಲ : ಯತ್ನಾಳ ಗುಡುಗು
ಕೋವಿಡ್-19 ಹಾಗೂ ನೆರೆಯಿಂದ ಕೆಲ ಯೋಜನೆಗಳಿಗೆ ಅನುದಾನ ಕಷ್ಟವಾಗಿದೆ. ಆದ್ಯತೆಗೆ ಅನುಸಾರವಾಗಿ ಅನುದಾನ ನೀಡಲಿದ್ದಾರೆ. ಈ ಕುರಿತು ಹಣಕಾಸು ಇಲಾಖೆ ಅಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ಅಭಿವೃದ್ಧಿಗೆ ಯಾವುದೇ ಹಿನ್ನಡೆಯಾಗಿಲ್ಲ. ಯಡಿಯೂರಪ್ಪ ನೇತೃತ್ವದ ಸರಕಾರ ಒಂದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದೆ. ನೆರೆ, ಕೋವಿಡ್-19 ನಡುವೆಯೂ ಅಭಿವೃದ್ಧಿ ಮರೆತಿಲ್ಲ ಎಂದು ಸಿ ಟಿ ರವಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.