ಬಿಜೆಪಿಯಿಂದ ಪ್ರತಿಭಟನೆ

Team Udayavani, Feb 18, 2017, 3:13 PM IST

hub6.jpg

ಧಾರವಾಡ: ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೀಶಗೌಡ ಗೌಡರ ಹತ್ಯೆ ಪ್ರಕರಣವನ್ನು ರಾಜ್ಯ ಪೊಲೀಸರಿಂದ ಮರು ತನಿಖೆ ಮತ್ತು ಸಿಬಿಐ ತನಿಖೆಗೂ ಒಳಪಡಿಸುವಂತೆ ಆಗ್ರಹಿಸಿ ಯೋಗೀಶಗೌಡ ಪತ್ನಿ ಮಲ್ಲಮ್ಮ ಹಾಗೂ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ನಾಗರಾಜ ಗಾಣಿಗೇರ ನೇತೃತ್ವದಲ್ಲಿ ನಗರದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ತಾಲೂಕು ಘಟಕದ ಪದಾಧಿಕಾರಿಗಳು ಹಾಗೂ ಜಿಪಂ ಮಾಜಿ ಸದಸ್ಯರಾದ ಅಮೃತ ದೇಸಾಯಿ, ತವನಪ್ಪ ಅಷ್ಟಗಿ ಅವರೊಂದಿಗೆ ಡಿಸಿ ಕಚೇರಿಗೆ ಆಗಮಿಸಿದ ಮಲ್ಲಮ್ಮ, ಪತಿ ಯೋಗೀಶಗೌಡರ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಳಪಡಿಸುವುದರ ಜೊತೆಗೆ ನಮ್ಮ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡುವಂತೆ ಮನವಿ ಮಾಡಿದರು. 

ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮಲ್ಲಮ್ಮ ಮನವಿ ಸಲ್ಲಿಸಿದರೆ,ಬಿಜೆಪಿ ಘಟಕದಿಂದ ಡಿಸಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.  ಪತಿಯ ಹತ್ಯೆಯ ಆರೋಪದಲ್ಲಿ ಈಗ ಬಂಧನಕ್ಕೆ ಒಳಗಾಗಿರುವ ಆರೋಪಿಗಳೆಲ್ಲ ಸಚಿವ ವಿನಯ ಕುಲಕರ್ಣಿ ಅವರ ಪರಮಾಪ್ತರು. ಇದಲ್ಲದೇ ಹತ್ಯೆಗೂ ಮುನ್ನ ನನ್ನ ಪತಿಗೆ ಸಚಿವರ ಸಹೋದರ ವಿಜಯ ಕುಲಕರ್ಣಿ ಹೆಸರಿನಲ್ಲಿ ಜೀವ ಬೆದರಿಕೆ ಪತ್ರ ಬಂದಿದ್ದವು.

ರಾಜಕೀಯ ವಿಷಯವಾಗಿ ಸಚಿವರೊಂದಿಗೆ ಸಾಕಷ್ಟು ಜಗಳಗಳಾಗಿವೆ. ಹೀಗಾಗಿ ಈ ಹತ್ಯೆಯ ಹಿಂದೆ ಇನ್ನೂ ಅನೇಕ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ. ಆದರೆ ಪೊಲೀಸರು ಕೋರ್ಟ್‌ಗೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಲೋಪ-ದೋಷಗಳಿದ್ದು, ಈಪ್ರಕರಣವನ್ನು ಮರು ತನಿಖೆಗೆ ಒಳಪಡಿಸಿ ಹತ್ಯೆಯ ಹಿಂದಿರುವ ಪ್ರಭಾವಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ. 

ಬಂಧನದಲ್ಲಿರುವ ಹತ್ಯೆಯ ಆರೋಪಿಗಳು ಸಚಿವ ವಿನಯ ಕುಲಕರ್ಣಿ ಆಪ್ತರು ಅಷ್ಟೇ ಅಲ್ಲ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರೂ ಹೌದು. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮರುತನಿಖೆಗೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಮಲ್ಲಮ್ಮ ಗೌಡರ ಮನವಿಯಲ್ಲಿ ಒತ್ತಾಯಿಸಿದ್ದಾರೆ. ಬಿಜೆಪಿ ಮುಖಂಡರಾದ ವೀರೇಶ ಅಂಚಟಗೇರಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಗೋವಿನಕೊಪ್ಪ ಗ್ರಾಮಸ್ಥರು ಇದ್ದರು. 

ಟಾಪ್ ನ್ಯೂಸ್

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

Frud

Police Nabs: 930 “ಡಿಜಿಟಲ್‌ ಅರೆಸ್ಟ್‌’ ಪ್ರಕರಣಗಳ ರೂವಾರಿ ಬೆಂಗಳೂರಿನಲ್ಲಿ ಬಂಧನ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-alnavar

Alnavar: ಬೈಕ್- ಓಮಿನಿ ಅಪಘಾತ; ಬೈಕ್ ಸವಾರ ಸಾವು

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.