ಕಾಂಗ್ರೆಸ್ ವಿರುದ್ಧ ಬಿಜೆಪಿ ಪ್ರತಿಭಟನೆ
Team Udayavani, Feb 25, 2017, 12:27 PM IST
ಬೆಂಗಳೂರು: ಹೈಕಮಾಂಡ್ಗೆ ಕಪ್ಪ ನೀಡಿರುವ ಕುರಿತ ಡೈರಿಯಲ್ಲಿನ ಮಾಹಿತಿ ಬಹಿರಂಗೊಂಡಿ ರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಯುವ ಹಾಗೂ ಎಸ್ಸಿ ಮೋರ್ಚಾ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ಮೈಸೂರು ಬ್ಯಾಂಕ್ ವೃತ್ತದಲ್ಲಿ ಯುವ ಮೋರ್ಚಾ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆ ಯಲ್ಲಿ ಹಣ ಇರುವ ಸೂಟ್ಕೇಸ್ ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿಗೆ ನೀಡುತ್ತಿರುವಂತೆ ಅಣಕು ಪ್ರದರ್ಶನ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಯುವ ಮೋರ್ಚಾದ ಸಪ್ತಗಿರಿ ಗೌಡ, ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಹೈಕಮಾಂಡ್ಗೆ ಲಂಚದ ರೂಪದಲ್ಲಿ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಪ್ಪ ನೀಡುವ ಸಚಿವರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಹೈಕಮಾಂಡ್ಗೆ ಕಪ್ಪ ಕೊಟ್ಟಿರುವ ಕುರಿತು ಡೈರಿಯಲ್ಲಿ ಪ್ರಸ್ತಾಪವಾಗಿರುವ ಎಲ್ಲ ಸಚಿವರೂ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು.
ಕ್ಷಮೆ ಯಾಚನೆಗೆ ಆಗ್ರಹ: ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಚಿ.ನಾ ರಾಮು , ಶಾಸಕ ಕೆ. ವೈ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಆರ್.ಟಿ ನಗರದ ನಿವಾಸದ ಮುಂದೆ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಹೈ ಕಮಾಂಡ್ಗೆ ಕಪ್ಪ ನೀಡಿರುವ ಬಗ್ಗೆ ಬಿಎಸ್ ಯಡಿಯೂರಪ್ಪ ಹೇಳಿದ ಹಾಗೆ ಡೈರಿ ಬಹಿರಂಗವಾಗಿದೆ.
ಆದರೆ ಡೈರಿ ಬಗ್ಗೆ ಮಾತನಾಡಿದ್ದ ಯಡಿಯೂರಪ್ಪ ಅವರನ್ನು ಹುಚ್ಚ ಎಂದು ಟೀಕಿಸಿದ ದಿನೇಶ್ಗುಂಡೂರಾವ್ ಈಗ ಏನು ಹೇಳುತ್ತಾರೆ? ಎಂದು ಕಿಡಿಕಾರಿದರು. ಈ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸರು ತಡೆದು, ಪರಿಸ್ಥಿತಿ ತಿಳಿಗೊಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.