ಕಳಂಕಿತ ಸಚಿವ ವಿರುದ್ಧ ಬಿಜೆಪಿ ಪ್ರತಿಭಟನೆ


Team Udayavani, Aug 19, 2017, 12:09 PM IST

hub3.jpg

ಧಾರವಾಡ: ಭ್ರಷ್ಟ ಸಚಿವರು ನೈತಿಕತೆ ಹೊತ್ತು ರಾಜೀನಾಮೆ ನೀಡುವಂತೆ ಇಲ್ಲವೇ ಸಚಿವ ಸಂಪುಟದಿಂದ ಕೈ ಬಿಡುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಧಾರವಾಡ ಗ್ರಾಮಾಂತರ ಜಿಲ್ಲಾ ಘಟಕ ಹಾಗೂ ಹು-ಧಾ ಪಶ್ಚಿಮ ಮತಕ್ಷೇತ್ರದ ಘಟಕದಿಂದ ನಗರದ ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. 

ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಳಂಕಿತ ಸಚಿವರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಈರಣ್ಣ ಜಡಿ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ರಾಜ್ಯದ ಜನತೆಗೆ ಮೋಸ ಮಾಡುತ್ತಿದೆ.

ಹುಸಿ ಭರವಸೆಗಳ ಮೂಲಕವೇ ಕಾಲಹರಣ ಮಾಡುತ್ತಿದೆ. ಪ್ರತಿಯೊಂದು ಕಾರ್ಯಗಳು ಕೇವಲ ಗುದ್ದಲಿಪೂಜೆಗೆ ಸಿಮೀತಗೊಂಡಿವೆ. ಸಂಪುಟದ ಸಚಿವರ ಹಣ ಗಳಿಕೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಆಪಾದಿಸಿದರು. ಸಚಿವರಾದ ಡಿ.ಕೆ. ಶಿವಕುಮಾರ, ರಮೇಶ ಜಾರಕಿಹೊಳಿ ರಾಜ್ಯದ ಜನತೆಗೆ ಮೋಸ ಮಾಡಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ.

ಇಂತಹ ಸಚಿವರಿಂದ ರಾಜ್ಯದ ಅಭಿವೃದ್ಧಿ ಹಾಗೂ ಜನರ ಕಲ್ಯಾಣ ನಿರೀಕ್ಷಿಸುವುದು ಅಸಾಧ್ಯ. ಆದ್ದರಿಂದ ಉಭಯ ಸಚಿವರ ತಕ್ಷಣ ರಾಜೀನಾಮೆ ಪಡೆಯದಿದ್ದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ರೈತ ಮೋರ್ಚಾ ಮಹಾನಗರ ಜಿಲ್ಲಾಧ್ಯಕ್ಷ ಅರವಿಂದ ಏಗನಗೌಡರ ಮತ್ತು ಮಾಜಿ ಶಾಸಕಿ ಸೀಮಾ ಮಸೂತಿ ಮಾತನಾಡಿದರು.

ಯಲ್ಲಪ್ಪ ಅರವಾಳದ, ಪ್ರಧಾನ ಕಾರ್ಯದರ್ಶಿ ಮೋಹನ್‌ ರಾಮದುರ್ಗ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶರಣು ಅಂಗಡಿ, ಪಾಲಿಕೆ ಸದಸ್ಯರಾದ ಸಂಜಯ ಕಪಟಕರ, ವಿಜಯಾನಂದ ಶೆಟ್ಟಿ, ಶಂಕರ ಶೆಳಕೆ, ಪೂರ್ಣಾ ಪಾಟೀಲ, ಶ್ರೀನಿವಾಸ ಕೋಟ್ಯಾನ, ಎಂ.ಆರ್‌. ಪಾಟೀಲ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.