ಸ್ಫೋಟ ಪ್ರಕರಣ: ಸ್ಟೇಷನ್ ಮಾಸ್ಟರ್, ಆರ್ಪಿಎಫ್ ನ ಎಎಸ್ಐ ಅಮಾನತು
Team Udayavani, Oct 26, 2019, 9:00 PM IST
ಹುಬ್ಬಳ್ಳಿ: ಇಲ್ಲಿನ ರೈಲು ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಸ್ಟೇಷನ್ ಮಾಸ್ಟರ್ ಮತ್ತು ಆರ್ಪಿಎಫ್ ಎಎಸ್ಐ ಅವರನ್ನು ಅಮಾನತು ಮಾಡಲಾಗಿದೆ ಎಂದು ರೈಲ್ವೇ ಖಾತೆ ಸಹಾಯಕ ಸಚಿವ ಸುರೇಶ್ ಅಂಗಡಿ ಹೇಳಿದರು.
ಶನಿವಾರ ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿ ಘಟನಾ ಸ್ಥಳ ಪರಿಶೀಲಿಸಿದ ಅನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಘಟನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಸ್ಟೇಷನ್ ವ್ಯವಸ್ಥಾಪಕ ವರುಣಕುಮಾರ್ ದಾಸ್ ಮತ್ತು ಆರ್ಪಿಎಫ್ ಎಎಸ್ಐ ಮಂಜುನಾಥ ಕಾಮತ್ ಅವರನ್ನು ಅಮಾನತು ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಮೂರು ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಸೂಚಿಸಿದ್ದೇನೆ ಎಂದರು.
ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ರೈಲು ನಿಲ್ದಾಣಗಳಲ್ಲಿ ಹೆಚ್ಚು ಭದ್ರತೆ ಒದಗಿಸಲಾಗುವುದು. ಹೆಚ್ಚು ಸಿಸಿ ಕೆಮರಾ ಅಳವಡಿಸಲಾಗುವುದು. ವಿಮಾನ ನಿಲ್ದಾಣದ ಮಾದರಿಯಂತೆ ಹುಬ್ಬಳ್ಳಿ ಸಹಿತ ಅವಶ್ಯವಿರುವ ರೈಲು ನಿಲ್ದಾಣಗಳಲ್ಲಿಯೂ ವಸ್ತುಗಳ ತಪಾಸಣೆಯ ಸ್ಕಾÂನಿಂಗ್ ಯಂತ್ರಗಳನ್ನು ಅಳವಡಿಸಲಾಗುವುದು. ರೈಲು ನಿಲ್ದಾಣದಲ್ಲಿ ಅನಧಿಕೃತ ವೆಂಡರ್ ಮತ್ತು ಅನುಮಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಅಂಥವರ ಮೇಲೆ ಕ್ರಮ ಕೈಗೊಳ್ಳಲು ಅ ಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ರೈಲ್ವೇ ಇಲಾಖೆಯನ್ನು ಖಾಸಗೀಕರಣಗೊಳಿಸುವುದಿಲ್ಲ. ಆದರೆ ಸಾರ್ವಜನಿಕರಿಗೆ ಉತ್ತಮ ಸೌಲಭ್ಯ ನೀಡುವ ನಿಟ್ಟಿನಲ್ಲಿ ಕಾರ್ಪೊರೈಸೇಶನ್ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.