![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 31, 2024, 12:19 PM IST
ಹುಬ್ಬಳ್ಳಿ: ಇಲ್ಲಿನ ಕಾರವಾರ ರಸ್ತೆ ಎಂಟಿಎಸ್ ಕಾಲೋನಿಯ ಖಾಲಿ ಜಾಗದಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ಮೃತರನ್ನು ಹಳೇಹುಬ್ಬಳ್ಳಿ ಹೆಗ್ಗೇರಿ ಮಾರುತಿ ನಗರದ ವಿಜಯ ಸುರೇಶ ಬಸವಾ (26) ಎಂದು ಗುರುತಿಸಲಾಗಿದೆ.
ಖಾಸಗಿ ಕಂಪನಿಯಲ್ಲಿ ಟೀಮ್ ಲೀಡರ್ ಆಗಿ ಕೆಲಸ ಮಾಡುತ್ತಿದ್ದ ವಿಜಯ ಮಂಗಳವಾರ ಕೆಲಸ ಮುಗಿಸಿಕೊಂಡು ಸಂಜೆ ಮನೆಗೆ ಬಂದಿದ್ದ. ನಂತರ ಹೊರಗೆ ಹೋಗಿದ್ದ. ತಡರಾತ್ರಿಯಾದರೂ ವಾಪಸ್ಸು ಬಂದಿರಲಿಲ್ಲ. ಬುಧವಾರ ಬೆಳಗ್ಗೆ ಆತನ ಶವ ಅರೆಬೆಂದ ಸ್ಥಿತಿಯಲ್ಲಿ ಎಂಟಿಎಸ್ ಕಾಲೋನಿ ಪಾಳುಬಿದ್ದ ಜಾಗದಲ್ಲಿ ದೊರೆತಿದೆ. ಯಾರೋ ಆತನನ್ನು ಉದ್ದೇಶಪೂರ್ವಕವಾಗಿ ಕೊಲೆ ಮಾಡಿರಬಹುದೆಂದು ಆತನ ಸಹೋದರ ವಿಶಾಲ ಬಸವಾ ಹೇಳಿದರು.
ಪ್ರಾಥಮಿಕ ತನಿಖೆಯಿಂದ ಇದು ಕೊಲೆಯೋ – ಆತ್ಮಹತ್ಯೆಯೋ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ಮತ್ತು ತನಿಖೆ ನಂತರವೇ ನಿಜಾಂಶ ತಿಳಿಯಲಿದೆ ಎಂದು ಎಸಿಪಿ ವಿಜಯಕುಮಾರ ತಳವಾರ ತಿಳಿಸಿದರು.
ಘಟನಾ ಸ್ಥಳಕ್ಕೆ ಡಿಸಿಪಿ ಸಂಜೀವ ಎಂ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪೊಲೀಸರು ಮೃತನ ಕುಟುಂಬಸ್ಥರು, ಸ್ನೇಹಿತರು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.