ಗಡಿಭಾಗದ ಮಾದರಿ ಇಂಜಿನಿಯರಿಂಗ್‌ ಕಾಲೇಜು


Team Udayavani, Jul 26, 2018, 4:30 PM IST

26-july-18.jpg

ಗುಣಾತ್ಮಕ ತಾಂತ್ರಿಕ ಶಿಕ್ಷಣ ನೀಡುವ ಮೂಲಕ ಗಡಿ ಭಾಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಜೀವನಾಡಿಯಾಗಿ; ವರದಾನದಂತೆ ಕಾರ್ಯನಿರ್ವಹಿಸುತ್ತಿದೆ. ಹಳ್ಳಿಯ ವಿದ್ಯಾರ್ಥಿಗಳಿಗೂ ಉನ್ನತ ತಾಂತ್ರಿಕ ಶಿಕ್ಷಣ ನೀಡಬೇಕು ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರು ಮತ್ತು ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆಯವರು ಕನಸು ಕಂಡಿದ್ದರು. ಅದರಂತೆ 2008ರಲ್ಲಿ ಚಿಕ್ಕೋಡಿಯಲ್ಲಿ ಇಂಜಿನಿಯರಿಂಗ್‌ ಕಾಲೇಜನ್ನು ಕೆಎಲ್‌ಇ ಸಂಸ್ಥೆ ಆರಂಭಿಸಿತು.

ಈ ಮಹಾವಿದ್ಯಾಲಯವು ನವದೆಹಲಿಯ ಅಖಿಲ ಭಾರತದ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಮಾನ್ಯತೆ ಪಡೆದಿದೆ. ಹಾಗೂ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಲಗ್ನತೆ ಹೊಂದಿದ್ದು, ಮಹಾವಿದ್ಯಾಲಯದಲ್ಲಿ ಸಿವ್ಹಿಲ್‌ ಇಂಜನಿಯರಿಂಗ್‌, ಮೆಕ್ಯಾನಿಕಲ್‌ ಇಂಜನಿಯರಿಂಗ್‌, ಇಲೆಕ್ಟ್ರಾನಿಕ್ಸ್‌ ಮತ್ತು ಕಮ್ಯೂನಿಕೇಶನ್‌ ಇಂಜಿನಿಯರಿಂಗ್‌ ಹಾಗೂ ಕಂಪ್ಯೂಟರ್‌ ಸೈನ್ಸ್‌ ಇಂಜಿನಿಯರಿಂಗ್‌ ಸೇರಿದಂತೆ ಒಟ್ಟು ನಾಲ್ಕು ವಿಭಾಗಗಳಿದ್ದು, ಮಹಾ ವಿದ್ಯಾಲಯದಲ್ಲಿ ಕರ್ನಾಟಕ, ಮಹಾರಾಷ್ಟ್ರ ÷, ಝಾರ್ಕಂಡ್‌, ಉತ್ತರಪ್ರದೇಶ, ಬಿಹಾರ, ಗೋವಾ ಮತ್ತು ಗುಜರಾತ ರಾಜ್ಯಗಳು ಸೇರಿದಂತೆ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

ಅತ್ಯಾಧುನಿಕ ಸೌಕರ್ಯ:
ಈ ಮಹಾವಿದ್ಯಾಲಯವು ಅತ್ಯಾಧುನಿಕ ಮೂಲ ಸೌಕರ್ಯಗಳನ್ನು ಹೊಂದಿದೆ. ಸುಸಜ್ಜಿತ ಕಟ್ಟಡಗಳು, ಅತ್ಯಾಧುನಿಕ ಪ್ರಯೋಗಾಲಯ, ಡಿಜಿಟಲ್‌ ಗ್ರಂಥಾಲಯ, ವೈಫೈ ಕ್ಯಾಂಪಸ್‌, ಕೆಫೆಟೆರಿಯಾ, ವಿಶಾಲ ಆಟದ ಮೈದಾನ ಶೈಕ್ಷಣಿಕ ವ್ಯವಸ್ಥೆಗೆ ಪೂರಕ ವಾತಾವರಣವನ್ನು ಇಲ್ಲಿ ನಿರ್ಮಿಸಲಾಗಿದೆ.

ಪ್ಲೇಸ್‌ಮೆಂಟ್‌ ಸೆಲ್‌: ದೇಶದ ವಿವಿಧ ಕಂಪನಿಗಳ ತಜ್ಞರಿಂದ ಕಾರ್ಯಾಗಾರ ಹಾಗೂ ತರಬೇತಿಯನ್ನು ಮಹಾ ವಿದ್ಯಾಲಯದಲ್ಲಿ ಏರ್ಪಡಿಸಲಾಗುತ್ತಿದೆ. ಜೊತೆಗೆ ವಿದ್ಯಾರ್ಥಿಗಳ ಸಂವಹನ ಮತ್ತು ಸಂದರ್ಶನ ಕಲೆಯನ್ನು ಕರಗತಗೊಳಿಸಲು ಲ್ಯಾಂಗ್ವೇಜ್‌ ಲ್ಯಾಬ್‌ ಹಾಗೂ ಆಕ್ಟಿವಿಟಿ ರೂಮ್‌ ಸ್ಥಾಪಿಸಲಾಗಿದೆ. ಬೆಂಗಳೂರಿನ ರ್ಯಾರೋ, ಡೇರ್‌ ಟು ಡ್ರೀಮ್‌, ಓರ್ಯಾಕಲ್‌ ಯುನಿವರ್ಸಿಟಿ, ಓಲೀವ್‌ ಬೋರ್ಡ್‌ ತರಬೇತಿ ಸಂಸ್ಥೆಗಳು ಹಾಗೂ ಹಲವಾರು ತಜ್ಞರು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ತರಬೇತಿ ನೀಡುತಿದ್ದಾರೆ. ಇದರ ಫಲವಾಗಿ ಕಳೆದ ಶೈಕ್ಷಣಿಕ ವರ್ಷದಲ್ಲಿ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್‌ ಸಂದರ್ಶನದಲ್ಲಿ ಆಯ್ಕೆಯಾಗಿದ್ದಾರೆ. ಪ್ರತಿ ವರ್ಷವೂ ಮಹಾವಿದ್ಯಾಲಯದಲ್ಲಿ 2 ದಿನಗಳ ರಾಷ್ಟ್ರಮಟ್ಟದ ತಾಂತ್ರಿಕ ಸಮ್ಮೇಳನ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳ ಹಾಗೂ ಪ್ರಾಧ್ಯಾಪಕರ ಜ್ಞಾನ ಹೆಚ್ಚಿಸುವ ನಿಟ್ಟಿನಲ್ಲಿ ದೇಶದ ತಾಂತ್ರಿಕ ಶಿಕ್ಷಣದಲ್ಲಿ ಮುಂಚೂಣಿಯಲ್ಲಿರುವ ಐಐಟಿ ಮುಂಬಯಿ ಹಾಗೂ ಐಐಟಿ ಖರಗಪುರ ಸಹಭಾಗಿತ್ವದೊಂದಿಗೆ ಹಾಗೂ ಕೇಂದ್ರ ಸರಕಾರದ ಮಾನವಸಂಪನ್ಮೂಲ ಇಲಾಖೆ ವತಿಯಿಂದ ಕಾಲೇಜಿನಲ್ಲಿ ವಿವಿಧ ಕಾರ್ಯಾಗಾರಗಳನ್ನು ಏರ್ಪಡಿಸಲಾಗುತ್ತಿದೆ.

ವಸತಿ ನಿಲಯ: ಮಹಾವಿದ್ಯಾಲಯವು 900 ಜನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಂಗುವ ಸಾಮರ್ಥ್ಯವುಳ್ಳ ಪ್ರತ್ಯೇಕ ಸುಸಜ್ಜಿತ ವಸತಿ ನಿಲಯಗಳನ್ನು ಹೊಂದಿದೆ. ಇಲ್ಲಿ ಅತ್ಯಾಧುನಿಕ ಜಿಮ್‌, ವೈಫೈ, ಸೂಪರ್‌ ಮಾರ್ಕೆಟ್‌, ಸ್ಟೇಷನರಿ ಮಳಿಗೆ ವ್ಯವಸ್ಥೆಗಳನ್ನು ಒಳಗೊಂಡಿದೆ. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಸಿದ್ರಾಮಪ್ಪ ಇಟ್ಟಿಯವರ ಸತತ ಪ್ರಯತ್ನದಿಂದ ಇಂದು ಚಿಕ್ಕೋಡಿ ಪಟ್ಟಣದಲ್ಲಿ ತಾಂತ್ರಿಕ ಮಹಾವಿದ್ಯಾಲಯವು ಹೆಮ್ಮರವಾಗಿ ಬೆಳೆದು ಗಡಿ ಭಾಗದ ವಿದ್ಯಾರ್ಥಿಗಳಿಗೆ ಗುಣಾತ್ಮಕ ತಾಂತ್ರಿಕ ಶಿಕ್ಷಣವನ್ನು ನೀಡುತ್ತಿರುವ ಕಾರ್ಯ ಅವಿಸ್ಮರಣಿಯ.

ಮಾದರಿ ಕಾಲೇಜು ಪ್ರಶಸ್ತಿ
ಗಡಿಭಾಗದಲ್ಲಿ ಶಿಸ್ತುಬದ್ಧ, ಗುಣಮಟ್ಟದ ತಾಂತ್ರಿಕ ಶಿಕ್ಷಣ ನೀಡುತ್ತಿರುವುದನ್ನು ಗಮನಿಸಿ ಇತ್ತೀಚೆಗೆ ನಡೆದ ವಿಟಿಯು 20ನೆಯ ಸಂಸ್ಥಾಪನಾ ದಿನಾಚರಣೆಯಂದು ಕಾಲೇಜಿಗೆ ಉತ್ತರ ಕರ್ನಾಟಕದ ಗ್ರಾಮೀಣ ಭಾಗದ ಮಾದರಿ ಇಂಜಿನಿಯರಿಂಗ್‌ ಕಾಲೇಜು ಪ್ರಶಸ್ತಿ ನೀಡಲಾಗಿದೆ. 

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.