ಬಸ್‌ ಟರ್ಮಿನಲ್‌ ಸೆಪ್ಟೆಂಬರ್‌ನಲ್ಲಿ ಸೇವೆಗೆ

Team Udayavani, Jun 9, 2017, 3:52 PM IST

hub3.jpg

ಹುಬ್ಬಳ್ಳಿ: ಇಲ್ಲಿನ ಹೊಸೂರನಲ್ಲಿ ನಿರ್ಮಾಣವಾಗುತ್ತಿರುವ ಬಸ್‌ ಟರ್ಮಿನಲ್‌ ಅನ್ನು ಸೆಪ್ಟಂಬರ್‌ ಮೊದಲ ವಾರದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ನೀಡಲಾಗುವುದು ಎಂದು ವಾಕರಸಾ ಸಂಸ್ಥೆ ಅಧ್ಯಕ್ಷ ಸದಾನಂದ ಡಂಗನವರ ತಿಳಿಸಿದರು. ಗುರುವಾರ ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ನಂತರ ಮಾತನಾಡಿದರು.

ಈಗಾಗಲೇ ಬಸ್‌ ನಿಲ್ದಾಣದ ಕಾಮಗಾರಿ ಶೇ.84ರಷ್ಟು ಮುಗಿದಿದೆ. ನಿಲ್ದಾಣದ ಸಂಪೂರ್ಣ ಕಾಮಗಾರಿ ನವೆಂಬರ್‌ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದರು. ಸುಮಾರು 52 ಕೋಟಿ ರೂ. ವೆಚ್ಚದಲ್ಲಿ 15 ಎಕರೆ 16 ಗುಂಟೆ ವಿಸ್ತಿರ್ಣದಲ್ಲಿ ನಿರ್ಮಿಸುತ್ತಿರುವ ಅತ್ಯಾಧುನಿಕ ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಅತ್ಯುತ್ತಮ ಸೌಲಭ್ಯ ಕಲ್ಪಿಸಲಾಗುತ್ತದೆ.

ನಿಲ್ದಾಣದಲ್ಲಿ 22 ಪ್ಲಾಟ್‌ಫಾರಂ ಹಾಗೂ ನಗರ ಸಾರಿಗೆ ಬಸ್‌ ಗಳಿಗಾಗಿ 6 ಪ್ಲಾಟ್‌ಫಾರಂ ನಿರ್ಮಿಸಲಾಗುತ್ತಿದ್ದು,4 ಹವಾ ನಿಯಂತ್ರಿತ ಪ್ರಯಾಣಿಕರ ವಿಶ್ರಾಂತಿ ಕೋಣೆ, ದ್ವಿಚಕ್ರ ವಾಹನ ಹಾಗೂ ಕಾರುಗಳ ನಿಲುಗಡೆಗೆ ವ್ಯವಸ್ಥೆ, 2 ಎಕ್ಸಲೇಟರ್‌, 6ಲಿಫ್ಟ್, ಸಬ್‌ವೇ, ಪಕ್ಕದಲ್ಲಿ ಡಿಪೋ, ಐದು ಮಹಡಿಯ ಕಟ್ಟಡ ಹಾಗೂ ಅತ್ಯಾಧುನಿಕ ಶೌಚಾಲಯ ನಿರ್ಮಿಸಲಾಗುತ್ತಿದೆ ಎಂದರು. 

ನ್ಯಾಯಾಲಯದ ಮುಂಭಾಗದಲ್ಲಿ ಬಸ್‌ ನಿಲ್ದಾಣದ ಮುಖ್ಯದ್ವಾರ ನಿರ್ಮಿಸಲಾಗುತ್ತಿದ್ದು ಮಹಿಳಾ ವಿದ್ಯಾಪೀಠದ ಮುಂಭಾಗದಿಂದ ಪ್ರಯಾಣಿಕರು ಆಗಮಿಸುವ ವ್ಯವಸ್ಥೆ ಹಾಗೂ ಬಿಆರ್‌ಟಿಎಸ್‌ ಬಸ್‌ ಪ್ರಯಾಣಿಕರು ಆಗಮಿಸುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು. ಈಗಾಗಲೇ ಅವಳಿನಗರದಲ್ಲಿರುವ ನೂತನ ಬಸ್‌ ನಿಲ್ದಾಣ, ಹಳೇ ಬಸ್‌ ನಿಲ್ದಾಣ, ಧಾರವಾಡ ಬಸ್‌ ನಿಲ್ದಾಣಗಳಲ್ಲಿ ಮೂಲ ಸೌಕರ್ಯ ನೀಡುವಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದೆ.

ಸಾರ್ವಜನಿಕರ ಅನುಕೂಲ ಹಾಗೂ ಉತ್ತಮ ಪ್ರಯಾಣಕ್ಕಾಗಿ ಬೇಕಾದ ಎಲ್ಲ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಬಿಆರ್‌ಟಿಎಸ್‌ ಆಯುಕ್ತ ಜಿ.ಎಂ.ಹಿರೇಮಠ ಮಾತನಾಡಿ, ಹುಬ್ಬಳ್ಳಿ ಹಾಗೂ ಧಾರವಾಡ ಬಸ್‌ ನಿಲ್ದಾಣದ ಕಾಮಗಾರಿ ಆಗಸ್ಟ್‌ ಅಂತ್ಯಕ್ಕೆ ಮುಕ್ತಾಯಗೊಳಿಸುತ್ತೇವೆ.

ಹುಬ್ಬಳ್ಳಿ-ಧಾರವಾಡ ಮಧ್ಯೆ ನಡೆಯುತ್ತಿರುವ ಬಿಆರ್‌ಟಿಎಸ್‌ ಕಾಮಗಾರಿ ಈಗಾಗಲೇ 22 ಕಿಮೀ ಕಾಮಗಾರಿ ಮುಕ್ತಾಯಗೊಂಡಿದ್ದು ಇನ್ನು ಸ್ವಲ್ಪ ಕಾಮಗಾರಿ ಬಾಕಿ ಇದೆ. ಇನ್ನು ರಸ್ತೆಯಲ್ಲಿ ಬರುವ ದೇವಸ್ಥಾನ ಹಾಗೂ ಮಸೀದಿ, ಮಂದಿರಗಳ ಮುಖ್ಯಸ್ಥರೊಂದಿಗೆ ಚರ್ಚಿಸಲಾಗಿದ್ದು ಕಾಮಗಾರಿ ಮುಕ್ತಾಯಗೊಳಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು.

ಬಿಆರ್‌ಟಿಎಸ್‌ ಕಾಮಗಾರಿಯಲ್ಲಿ ಬರುವ 31 ಬಸ್‌ ನಿಲ್ದಾಣಗಳಲ್ಲಿ 5 ಬಸ್‌ ನಿಲ್ದಾಣ ಬಿಟ್ಟರೆ ಇನ್ನುಳಿದ ನಿಲ್ದಾಣದ ಕಾಮಗಾರಿ ಮುಕ್ತಾಯಗೊಂಡಿದೆ. ಈ ತಿಂಗಳ ಕೊನೆಯಲ್ಲಿ ಪ್ರಾಯೋಗಿಕವಾಗಿ ಸಂಚರಿಸಲು 3 ವೋಲ್‌Ì ಬಸ್‌ಗಳು ನಗರಕ್ಕೆ ಆಗಮಿಸಲಿವೆ ಎಂದರು. ಬಸವರಾಜ, ವಿವೇಕಾನಂದ ವಿಶ್ವಜ್ಞ, ಶಿವಲಿಂಗಯ್ಯ, ಸಂತೋಷ, ಸುನೀಲ ಅಭ್ಯಂಕರ  ಮತ್ತಿತರರಿದ್ದರು.

ಟಾಪ್ ನ್ಯೂಸ್

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

1-reeee

BJP ಸ್ನೇಹಿತರಿಗೆ ಕೈ ಜೋಡಿಸಿ ಮನವಿ ಮಾಡಿಕೊಳ್ಳುವೆ, ದಾರಿ ತಪ್ಪಿಸಬೇಡಿ: ಜಮೀರ್‌

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

1st ODI: ಇಂಗ್ಲೆಂಡ್‌ ವಿರುದ್ಧ ವಿಂಡೀಸ್‌ಗೆ 8 ವಿಕೆಟ್‌ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf issue: ಕಾಂಗ್ರೆಸ್ ಸರ್ಕಾರದಿಂದ ಯಾರಿಗೂ ವಕ್ಫ್ ನೋಟಿಸ್ ಕೊಟ್ಟಿಲ್ಲ: ಸಚಿವ ಸಂತೋಷ ಲಾಡ್

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಕುರಿ ಕಾಯುತ್ತಲೇ ಹಾಡು ಕಲಿತ ಇಮಾಮಸಾಬಗೆ ರಾಜ್ಯೋತ್ಸವ ಪ್ರಶಸ್ತಿ ಗರಿ; ಡೊಳ್ಳಿನ ಭಾವೈಕ್ಯತೆ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

ಹುಬ್ಬಳ್ಳಿ ಟೆಕ್ಕಿ 24 ತಾಸು ಡಿಜಿಟಲ್‌ ಅರೆಸ್ಟ್!‌ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ನಿರ್ಬಂಧ

jameer-ak

B.Z. Zameer Ahmed Khan;ನಾನು ಶುದ್ದ ಹಿಂದೂಸ್ಥಾನಿ ಭಾರತೀಯ, 24 ಕ್ಯಾರೆಟ್ ಗೋಲ್ಡ್..

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ

Online Trading: ಉಡುಪಿ ಮೂಲದ ವ್ಯಕ್ತಿಗೆ 27 ಲಕ್ಷ ರೂ. ವಂಚನೆ

Online Trading: ಆನ್‌ಲೈನ್‌ ಲಿಂಕ್‌ ಅಪ್ಲಿಕೇಶನ್‌ ಬಳಸಿ 27 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

Panambur: ಬೀಚ್‌ ಬಳಿ ನಿಲ್ಲಿಸಿದ್ದ ಕಾರಿನಿಂದ ಚಿನ್ನಾಭರಣ, ನಗದು ಕಳವು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

India A vs Australia A: ಸುದರ್ಶನ್‌ 96, ಪಡಿಕ್ಕಲ್‌ 80, ಆಸೀಸ್‌ಗೆ ಭಾರತ ತಿರುಗೇಟು

Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

Jammu – Kashmir: ಮುಂದುವರೆದ ಉಗ್ರರ ದಾಳಿ… ಇಬ್ಬರು ವಲಸೆ ಕಾರ್ಮಿಕರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.