ಉದ್ಯಮ ಸ್ನೇಹಿ ಗಣಿ ನೀತಿ ಶೀಘ್ರ ಜಾರಿ: ನಿರಾಣಿ
Team Udayavani, Mar 13, 2021, 3:21 PM IST
ಧಾರವಾಡ: ರಾಜ್ಯದಲ್ಲಿ ಪರಿಸರ ಮತ್ತು ಉದ್ಯಮ ಸ್ನೇಹಿಯಾದ ನೂತನ ಗಣಿ ನೀತಿಯನ್ನು ರಾಜ್ಯ ಸರಕಾರದಿಂದ ರೂಪಿಸುತ್ತಿದ್ದು, ನೀತಿಯ ಕರಡು ಪ್ರತಿ ಪರಿಶೀಲನಾ ಹಂತದಲ್ಲಿದೆ. ಅಂತಿಮಗೊಳಿಸಿ ಶೀಘ್ರದಲ್ಲಿ ನೂತನ ಗಣಿ ನೀತಿ ಜಾರಿಗೊಳಿಸಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ ನಿರಾಣಿ ಹೇಳಿದರು.
ಡಿಸಿ ಸಭಾಂಗಣದಲ್ಲಿ ಅಧಿಕಾರಿಗಳ ಹಾಗೂಸ್ಟೋನ್‌ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ಸಂಘದ ಪದಾಧಿಕಾರಿಗಳ ಸಭೆ ಕೈಗೊಂಡು ಅವರು ಮಾತನಾಡಿದರು. ಹೊಸ ಮೈನಿಂಗ್ ನೀತಿಯಲ್ಲಿ ಲೈಸೆನ್ಸ್ ಸರಳೀಕರಣಕ್ಕೆ ಆದ್ಯತೆ ನೀಡಲಾಗಿದೆ ಮತ್ತು ಕ್ರಶರ್ ಮಾಲೀಕರ ಬೇಡಿಕೆಗಳಿಗೆ ಸ್ಪಂದಿಸಲಾಗಿದೆ. ಪಟ್ಟಾ ಭೂಮಿ ಹಾಗೂ ಸರಕಾರಿ ಭೂಮಿಗಳಲ್ಲಿ ನಡೆಯುವ ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದ ರಾಜಧನ ಮೊತ್ತವನ್ನು ಬೇರೆ ಬೇರೆ ನಿಗದಿಗೊಳಿಸಲಾಗುವುದು ಎಂದರು.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಏಕಗವಾಕ್ಷಿ ಯೋಜನೆ ಜಾರಿ ಮೂಲಕ ಉದ್ಯಮಿಗಳಿಗೆ ತ್ವರಿತವಾಗಿ ಸ್ಪಂದಿಸಲು ಕ್ರಮವಹಿಸಲಾಗುತ್ತಿದೆ. ಸದ್ಯದಲ್ಲಿ ರಾಜ್ಯದ ಎಲ್ಲ ಕಂದಾಯ ವಿಭಾಗ ಮತ್ತು ಎಲ್ಲ ಜಿಲ್ಲೆಗಳಲ್ಲಿ ಮೈನಿಂಗ್ ಅದಾಲತ್ ಆಯೋಜಿಸಲಾಗುತ್ತಿದೆ. ಅದಾಲತ್ ನಡೆಯುವ ಸ್ಥಳದಲ್ಲಿಯೇ ಗಣಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದರು.
ಡಿಸಿ ನಿತೇಶ ಪಾಟೀಲ ಮಾತನಾಡಿ, ಪ್ರತಿ ತಿಂಗಳು ಜಿಲ್ಲಾ ಟಾಸ್ಕ್ಫೋರ್ಸ್ ಸಭೆ ಜರುಗಿಸಿನಿಯಮಾನುಸಾರ ಲೈಸೆನ್ಸ್ ನೀಡಲಾಗುತ್ತಿದೆ. ಪ್ರತಿ ಗಣಿಗಾರಿಕೆ ಹಾಗೂ ಸ್ಟೋನ್‌ಕ್ರಷರ್ ಸ್ಥಳದಲ್ಲಿಸುರಕ್ಷತಾ ಕ್ರಮಗಳೊಂದಿಗೆ ಅನುಮತಿಗೆ ವಿ ಧಿಸಿದನಿಯಮಗಳ ಪಾಲನೆ ಕುರಿತು ಅ ಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ ಎಂದರು.
ಶಾಸಕ ಪ್ರಸಾದ ಅಬ್ಬಯ್ಯ, ಎಸ್‌ಪಿ ಪಿ. ಕೃಷ್ಣಕಾಂತ, ಡಿಸಿಪಿ ರಾಮರಾಜನ್, ಪರಿಸರ ಅಧಿಕಾರಿ ಶೋಭಾ ಪೋಳ ಹಾಗೂ ಧಾರವಾಡ ಜಿಲ್ಲಾ ಸ್ಟೋನ್‌ಕ್ರಷರ್ ಮತ್ತು ಕಲ್ಲು ಗಣಿಗಾರಿಕೆ ಸಂಘಗಳ ಅಧ್ಯಕ್ಷ ಕಲ್ಲಪ್ಪ ಹಟ್ಟಿಯವರ, ಉಪಾಧ್ಯಕ್ಷ ವಿ.ಎಸ್. ಪಾಟೀಲ ಮಾತನಾಡಿದರು. ಹಿರಿಯ ಭೂ ವಿಜ್ಞಾನಿ ಚಂದ್ರಶೇಖರ ಸ್ವಾಗತಿಸಿ,ನಿರೂಪಿಸಿದರು. ರೇಷ್ಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಡಿವೈಎಸ್‌ಪಿ ಎಂ.ಬಿ. ಸಂಕದ ಮೊದಲಾದವರಿದ್ದರು.
ಧಾರವಾಡ ಜಿಲ್ಲೆಯಲ್ಲಿ 62 ಸ್ಟೋನ್ ಕ್ರಷರ್ ಮತ್ತು 136 ಕಲ್ಲು ಗಣಿಗಾರಿಕೆಗಳಿವೆ. ನಿಯಮ ಉಲ್ಲಂಘಿಸಿಗಣಿಗಾರಿಕೆ ಹಾಗೂ ಸ್ಟೋನ್‌ಕ್ರಷರ್ ನಡೆಯುತ್ತಿದ್ದರೆ ಅ ಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಲಿದ್ದಾರೆ. ಗಣಿಮತ್ತು ಭೂ ವಿಜ್ಞಾನ ಇಲಾಖೆ ಅಧಿ ಕಾರಿಗಳಿಗೆ ಹಾಗೂ ಸ್ಟೋನ್‌ಕ್ರಷರ್, ಕಲ್ಲು
ಗಣಿಗಾರಿಕೆ ನಡೆಸುವ ಉದ್ಯಮಗಳಿಗೆ ಸೂಕ್ತತರಬೇತಿ ನೀಡಲು ಸ್ಕೂಲ್ ಆಫ್ ಮೈನಿಂಗ್‌ಆರಂಭಿಸಲು ಸರಕಾರ ಸಿದ್ಧತೆ ನಡೆಸಿದೆ. –ಮುರುಗೇಶ ನಿರಾಣಿ, ಗಣಿ ಮತ್ತು ಭೂ ವಿಜ್ಞಾನ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸರ್ಕಾರ ಮತ್ತು ವಿಜಯೇಂದ್ರ ನಡುವೆ ಉತ್ತಮ ಅಡ್ಜಸ್ಟ್‌ಮೆಂಟ್ ಇದೆ: ಯತ್ನಾಳ್ ಆರೋಪ
Hubli: ಕಸದ ವಾಹನಕ್ಕೆ ಸ್ಕೂಟಿ ಡಿಕ್ಕಿ: ಓರ್ವ ವಿದ್ಯಾರ್ಥಿ ಸಾವು, ಮತ್ತೋರ್ವ ಗಂಭೀರ
BJP ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಗೊತ್ತಿಲ್ಲ: ಸಚಿವ ಜೋಶಿ
BJP ರಾಜ್ಯಾಧ್ಯಕ್ಷರ ನೇಮಕ ಹೈಕಮಾಂಡ್ ನಿರ್ಧಾರ: ಅರವಿಂದ ಬೆಲ್ಲದ
Hubli: ಮೀಟರ್ ಬಡ್ಡಿಗೆ ಮನನೊಂದು ಲಾರಿ ಚಕ್ರದಡಿ ಬಿದ್ದು ವ್ಯಕ್ತಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.