Hubli: ವಿಜಯೇಂದ್ರ ಎಳಸು, ನನ್ನ ಬಗ್ಗೆ ಏನು ಮಾತನಾಡುತ್ತಾರೆ..: ಕೆ.ಎಸ್.ಈಶ್ವರಪ್ಪ ವಾಗ್ದಾಳಿ
Team Udayavani, Oct 7, 2024, 2:29 PM IST
ಹುಬ್ಬಳ್ಳಿ: ಬಿಜೆಪಿ ಪಕ್ಷ ಕಟ್ಟುತ್ತಿದ್ದ ಸಂದರ್ಭದಲ್ಲಿ ಬಿ.ವೈ. ವಿಜಯೇಂದ್ರ ಇನ್ನೂ ಕಣ್ಣು ಬಿಟ್ಟಿರಲಿಲ್ಲ. ಇವರು ಪಕ್ಷವನ್ನು ಕಂಡಿದ್ದು ಈಗ. ಇನ್ನೂ ಎಳಸು ನನ್ನ ಬಗ್ಗೆ ಏನು ಮಾತನಾಡುತ್ತಾರೆ. ಪಕ್ಷಕ್ಕಾಗಿ ದುಡಿದವರ ಬಗ್ಗೆ ಹಗುರುವಾಗಿ ಮಾತನಾಡುವುದೇ ಇವರ ಕೊಡುಗೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ (KS Eshwarappa) ವಾಗ್ದಾಳಿ ನಡೆಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೈಕಲ್, ಸ್ಕೂಟರ್ ಮೇಲೆ ತಿರುಗಾಡಿ ಸಾಮೂಹಿಕ ನೇತೃತ್ವದಲ್ಲಿ ಪಕ್ಷ ಕಟ್ಟಿದ್ದೇವೆ. ಮೋದಿ, ಅಮಿತ್ ಶಾ, ಜೆ.ಪಿ ನಡ್ಡಾ ಅವರ ಆಶೀರ್ವಾದದಿಂದ ರಾಜ್ಯಾಧ್ಯಕ್ಷ ಆಗಿದ್ದೇನೆ. ನನ್ನನ್ನು ಯಾರು ಏನೂ ಮಾಡಲು ಸಾಧ್ಯವಿಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಇವರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಪಕ್ಷಕ್ಕೆ ದುಡಿದ ಹಿರಿಯರು ವಿರೋಧ ಮಾಡಿದ್ದರು, 40 ಜನ ಆರ್ಎಸ್ಎಸ್ ಸೇರಿದಂತೆ ಹಿರಿಯರಲ್ಲಿ 37 ಜನ ವಿರೋಧ ಮಾಡಿದ್ದರು. ಆದರೆ ಲಿಂಗಾಯತ ಸೇರಿದಂತೆ ಇನ್ನಿತರೆ ಮಂಕು ಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದು, ಪಕ್ಷಕ್ಕೆ ಇವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ವಿಜಯೇಂದ್ರ ಕೈಯಲ್ಲಿ ಪಕ್ಷ ಹಾಳಾಗುತ್ತಿದ್ದೆದೆ ಪಕ್ಷ ಶುದ್ಧೀಕರಣ ಮಾಡಬೇಕು ಎನ್ನುವ ಕಾರಣಕ್ಕಾಗಿಯೇ ನಾನು ಚುನಾವಣೆ ನಿಂತಿದ್ದೆ ವಿನಃ ಗೆಲ್ಲುವುದಕ್ಕಲ್ಲ. ಹಗಲು ರಾತ್ರಿ ಕಷ್ಟಪಟ್ಟು ಪಕ್ಷ ಕಟ್ಟಿದವರು ಇವರಿಂದಾಗಿಯೇ ಮೂಲೆಗುಂಪು ಆಗುತ್ತಿದ್ದಾರೆ. ವಿಜಯೇಂದ್ರನ ಕೈಯಲ್ಲಿ ಪಕ್ಷ ಹಾಳಾಗುತ್ತಿದೆಯಲ್ಲಾ ಎನ್ನುವ ನೋವು ನನ್ನಂತೆ ಹಲವು ಹಿರಿಯರಿಗಿದೆ. ತನಗೆ ಬೇಕಾದವರಿಗೆ ಟಿಕೆಟ್ ಕೊಡುವುದು, ಪದಾಧಿಕಾರಿ ಮಾಡುವ ಸ್ವಜನಪಕ್ಷ ಪಾತ ತುಂಬಿದೆ ಎಂದು ತಿರುಗೇಟು ನೀಡಿದರು.
ಅನ್ಯಾಯದ ವಿರುದ್ದ ಸಂಘಟನೆ
ರಾಜ್ಯದಲ್ಲಿ ಹಿಂದುಳಿದ, ದಲಿತರು ಹಾಗೂ ಇನ್ನುಳಿದ ಸಮಾಜಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ದ ಸಂಘಟನೆ ಕಟ್ಟಲಾಗುತ್ತಿದೆ. ಅ.20 ರಂದು ಬಾಗಲಕೋಟೆಯಲ್ಲಿ ಹಲವು ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುವ ಸಮಾವೇಶದಲ್ಲಿ ಸಂಘಟನೆಯು ಸ್ಪಷ್ಟ ರೂಪ ಪಡೆಯಲಿದೆ. ಹಿಂದಿನ ಸಂಘಟನೆ ನಿಲ್ಲಿಸಬಾರದಿತ್ತು ಎಂದು ಈಗ ಅನ್ನಿಸುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಮಾವೇಶ ಹಾಗೂ ಸಂಘಟನೆಗೆ ಹಲವು ಸ್ವಾಮೀಜಿಗಳ ಸಲಹೆ ಹಾಗೂ ಮಾರ್ಗದರ್ಶನವಿದೆ. ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಸಮಾವೇಶ ನಡೆಯಲಿದೆ. ಸ್ವಾಮೀಜಿಗಳ ನೇತೃತ್ವದಲ್ಲಿ ರಾಜ್ಯದಿಂದ ಸುಮಾರು 2000 ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಆರ್.ಸಿ.ಬಿ (ರಾಯಣ್ಣ ಚನ್ನಮ್ಮ ಬ್ರಿಗೇಡ್) ಎನ್ನುವುದು ಸ್ವಾಮೀಜಿಯೊಬ್ಬರು ನೀಡಿದ ಸಲಹೆ. ನಾಳಿನ ಸಮಾವೇಶದಲ್ಲಿ ಈ ಕುರಿತು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದರು.
ನಿಲ್ಲಿಸಿ ತಪ್ಪು ಮಾಡಿದೆ: ಹಿಂದೆ ಆರಂಭಿಸಿದ ರಾಯಣ್ಣ ಬ್ರಿಗೇಡ್ ನಿಲ್ಲಿಸಿ ದೊಡ್ಡ ತಪ್ಪು ಮಾಡಿದೆ. ಸಂಘಟನೆಗೆ ಅಭೂತಪೂರ್ವ ಬೆಂಬಲ ಹಾಗೂ ಸಹಕಾರ ವ್ಯಕ್ತವಾಗಿತ್ತು. ಆದರೆ ಯಡಿಯೂರಪ್ಪ ಅವರಿಗೆ ಈ ಸಂಘಟನೆ ನೋಡಿ ತಡೆದುಕೊಳ್ಳಲು ಆಗಲಿಲ್ಲ. ಅಮಿತ್ ಶಾ ಅವರಿಗೆ ಇಲ್ಲದ್ದನ್ನು ಹೇಳಿ ನಿಲ್ಲಿಸುವಂತೆ ಮಾಡಿದರು. ಆ ಸಂಘಟನೆಯನ್ನು ನಿಲ್ಲಿಸಬಾರದಿತ್ತು ಎಂದು ಈಗ ಅನ್ನಿಸುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.