ಸಾಹಸಿ ಮಕ್ಕಳ ವೇದಿಕೆಯಿಂದ ಶಿಬಿರ
Team Udayavani, May 14, 2019, 11:58 AM IST
ಧಾರವಾಡ: ಸಾಹಸಿ ಮಕ್ಕಳ ವೇದಿಕೆಯಿಂದ ನಗರದ ಟಿಸಿಡಬ್ಲ್ಯೂ ಆವರಣದಲ್ಲಿ ಎರಡು ದಿನಗಳ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ನಗರದ ವಿವಿಧ ಕೊಳಗೇರಿ ಹಾಗೂ ಬಡಾವಣೆ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ನಿವೃತ್ತ ಶಿಕ್ಷಕಿ ಹಾಗೂ ಮಕ್ಕಳ ಸಾಹಿತಿ ದಮಯಂತಿ ನರೇಗಲ್ ಶಿಬಿರ ಉದ್ಘಾಟಿಸಿ ಮಾತನಾಡಿ, ಮಕ್ಕಳಿಗೆ ಒಳ್ಳೆಯ ವಿಷಯಗಳನ್ನು ಕಲಿಸಿಕೊಡಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ. ಹಿಂದಿನ ದಿನಗಳಲ್ಲಿ ಇಂತಹ ಶಿಬಿರಗಳು ನಡೆಯುತ್ತಿರಲಿಲ್ಲ. ನಮಗೆ ಅವಕಾಶಗಳು ಸಿಗುತ್ತಿರಲಿಲ್ಲ. ಇಂದು ಹಲವಾರು ಅವಕಾಶಗಳು ದೊರೆಯುತ್ತಿದ್ದು, ಮಕ್ಕಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಬ್ರೆಕ್‌ಥ್ರೂ ಸೈನ್ಸ್ ಸೊಸೈಟಿ ಜಿಲ್ಲಾ ಸಂಚಾಲಕರಾದ ದೀಪಾ ವಿ. ಮಾತನಾಡಿ, ಮಕ್ಕಳು ಸಮಾಜದ ಭವಿಷ್ಯವೆನ್ನುತ್ತಾರೆ. ಅವರಲ್ಲಿ ಉನ್ನತ ವ್ಯಕ್ತಿತ್ವವನ್ನು ರೂಪುಗೊಳಿಸುವುದು ಇಂದಿನ ಅವಶ್ಯಕತೆಯಾಗಿದೆ. ಅದರಲ್ಲೂ ಕೊಳಗೇರಿಗಳ ಮಕ್ಕಳತ್ತ ಹೆಚ್ಚಿನ ಗಮನ ಕೊಡುವ ಅಗತ್ಯವಿದೆ. ಅವಳಿ ನಗರದ ಹಲವಾರು ಕೊಳಗೇರಿಗಳಲ್ಲಿ ನಮ್ಮ ಸಂಘಟನೆಗಳಿಂದ ಪ್ರತಿ ರವಿವಾರ ಮಕ್ಕಳಿಗೆ ಆಟ, ಹಾಡು, ಮೌಲ್ಯಗಳನ್ನು ಬೆಳೆಸುವ ನೀತಿ ಕಥೆಗಳನ್ನು ಹೇಳುತ್ತ ಬಂದಿದ್ದು, ಅದರ ಭಾಗವಾಗಿ ಈ ಶಿಬಿರ್ನ ನಡೆಸಲಾಗುತ್ತಿದೆ ಎಂದು ವಿವರಿಸಿದರು.
ಸಾಹಸಿ ಮಕ್ಕಳ ವೇದಿಕೆಯ ರಮೇಶ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯರಾದ ಗಂಗಾ ಕೋಕರೆ ಉಪಸ್ಥಿತರಿದ್ದರು. ಎರಡು ದಿನಗಳ ಶಿಬಿರದಲ್ಲಿ ಮಹಾನ್ ವ್ಯಕ್ತಿಗಳ ಪರಿಚಯ, ಪವಾಡ ರಹಸ್ಯ ಬಯಲು ಕಾರ್ಯಕ್ರಮ, ಕುಶಲ ಕಲೆಯ ಅನಾವರಣ, ಹಾಡು, ನಾಟಕ, ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ
Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್
Hubli: ಕ್ರಿಮಿನಲ್ ಜತೆಯೇ ಪೊಲೀಸ್ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.