ಚಿಕಿತ್ಸೆ ನೀಡದ ಖಾಸಗಿ ವೈದ್ಯರ ನೋಂದಣಿ ರದ್ದು

ಜಿಲ್ಲಾಡಳಿತದ ಮನವಿಗೆ ಸ್ಪಂದಿಸದ ವೈದ್ಯರ ವಿರುದ್ಧ ಜನರ ದೂರು

Team Udayavani, May 9, 2020, 9:35 AM IST

ಚಿಕಿತ್ಸೆ ನೀಡದ ಖಾಸಗಿ ವೈದ್ಯರ ನೋಂದಣಿ ರದ್ದು

ಧಾರವಾಡ: ಕೆಪಿಎಂಇ ಕಾಯ್ದೆಯಡಿ ನೋಂದಣಿಯಾಗಿರುವ ಖಾಸಗಿ ವೈದ್ಯರು ತಮ್ಮ ಆಸ್ಪತ್ರೆಗಳನ್ನು ತೆರೆದು ಕೋವಿಡ್‌ ಯೇತರವಾದ ಉಳಿದ ಖಾಯಿಲೆಗಳಿಗೆ ಚಿಕಿತ್ಸೆ ನೀಡಿ ಜನರ ನೆರವಿಗೆ ಬರಬೇಕು. ಇದಕ್ಕೆ ಸಹಕಾರ ನೀಡದಿದ್ದರೆ ಅವರ ವೈದ್ಯಕೀಯ ನೋಂದಣಿ ರದ್ದುಗೊಳಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ನಿಯಂತ್ರಣ ಚಟುವಟಿಕೆಗಳ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. ಖಾಸಗಿ ವೈದ್ಯರು ಮೊದಲಿನಂತೆ ತಮ್ಮ ಆಸ್ಪತ್ರೆಗಳನ್ನು ತೆರೆದು ಜನರ ಸಾಮಾನ್ಯ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಇದರಿಂದ ಸರಕಾರಿ ಆಸ್ಪತ್ರೆ ವೈದ್ಯರ ಮೇಲಿನ ಒತ್ತಡ ಕಡಿಮೆಯಾಗಿ, ಕೋವಿಡ್‌ ಪ್ರಕರಣಗಳಿಗೆ ಆದ್ಯತೆ ನೀಡಲು ಅನುಕೂಲವಾಗುತ್ತದೆ. ಈಗಾಗಲೇ ರಾಜ್ಯ ಸರ್ಕಾರ ಆರೋಗ್ಯ ಇಲಾಖೆ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಜಿಲ್ಲಾಡಳಿತ ಈ ಕುರಿತು ವೈದ್ಯರಿಗೆ ಸಭೆ ನಡೆಸಿ ಮನವಿ ಮಾಡಿದ್ದರೂ ಎಲ್ಲ ಖಾಸಗಿ ವೈದ್ಯರು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ಜನರಿಗೆ ಸೇವೆ ನೀಡುತ್ತಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಬರುತ್ತಿವೆ. ಶೀಘ್ರದಲ್ಲಿ ಸಭೆ ನಡೆಸಿ ಸೇವೆ ನೀಡದ ಖಾಸಗಿ ವೈದ್ಯರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಕೋವಿಡ್ 19 ವೈರಸ್‌ ಗ್ರಾಮೀಣ ಭಾಗಕ್ಕೆ ವ್ಯಾಪಿಸಿದರೆ ಅದು ಸಮುದಾಯದಲ್ಲಿ ಹರಡುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹಾಟ್‌ಸ್ಪಾಟ್‌ ಕಂಟೈನ್‌ಮೆಂಟ್‌ ವಲಯ, ಬಫರ್‌ ವಲಯಗಳಲ್ಲಿ ಸರ್ಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದ ಸಚಿವರು, ಆರೋಗ್ಯ ಇಲಾಖೆಯು ರಕ್ತ ಸಂಗ್ರಹಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು. ರಕ್ತ ಸಂಗ್ರಹದ ಶಿಬಿರಗಳನ್ನು ಆಯೋಜಿಸುವ ಮೂಲಕ ಹೆಚ್ಚು ರಕ್ತ ಸಂಗ್ರಹ ಮಾಡಿ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.

ಡಿಸಿ ದೀಪಾ ಚೋಳನ್‌ ಮಾತನಾಡಿ, ಜಿಲ್ಲೆಯಲ್ಲಿ 1.60 ಲಕ್ಷ ದುರ್ಬಲ ಗುಂಪಿನ ಜನಸಂಖ್ಯೆಯಿದೆ. ಆಶಾ ಕಾರ್ಯಕರ್ತೆಯರು ಸಮೀಕ್ಷೆ ಮಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಕೋವಿಡ್‌ ಆಸ್ಪತ್ರೆ ಸ್ಥಾಪಿಸಿದ್ದು, ಅಲ್ಲಿ 95 ವೆಂಟಿಲೆಟರ್‌ ಗಳಿವೆ. ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ 87 ವೆಂಟಿಲೆಟರ್‌ಗಳಿವೆ ಎಂದು ತಿಳಿಸಿದರು. ಮಹಾನಗರ ಪೊಲೀಸ್‌ ಆಯುಕ್ತ ಆರ್‌. ದೀಲಿಪ್‌ ಮಾತನಾಡಿ, ಲಾಕ್‌ ಡೌನ್‌ ಸಡಿಲಿಕೆಯಿಂದ ಜನರ ಓಡಾಟ ಹೆಚ್ಚಾಗಿದೆ. ಅವಳಿನಗರದಲ್ಲಿ ಸಂಜೆ 7:00ರಿಂದ ಬೆಳಿಗ್ಗೆ 7:00ರ ವರೆಗೆ ಅನಾವಶ್ಯಕ ಓಡಾಟಕ್ಕೆ ಕಡಿವಾಣ ಹಾಕಿದ್ದು, ಬೈಕ್‌ ವಶಪಡಿಸಿಕೊಂಡು ದಂಡ ವಸೂಲಿ ಮಾಡಲಾಗಿದೆ. ಸಾರ್ವಜನಿಕರ ಸಂಚಾರ ನಿಯಂತ್ರಣದಲ್ಲಿದೆ ಎಂದು ಹೇಳಿದರು.

ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಮಾತನಾಡಿ, ಹಾಟ್‌ ಸ್ಪಾಟ್‌, ಕಂಟೇನ್ಮೆಂಟ್‌ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮಾಸ್ಕ್ ಧರಿಸದ ವ್ಯಕ್ತಿಗಳಿಂದ ಈವರೆಗೆ 80 ಸಾವಿರ ರೂ.ಗಳಿಗೂ ಹೆಚ್ಚು ದಂಡ ವಸೂಲಿ ಮಾಡಲಾಗಿದೆ. ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಮಳಿಗೆಗಳಲ್ಲಿ ಸಾಮಾಜಿಕ ಅಂತರ ಕಾಪಾಡಲು, ಮಾಸ್ಕ್, ಸ್ಯಾನಿಟೈಸರ್‌ ಬಳಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಶಂಕರ ಪಾಟೀಲ್‌ ಮುನೇನಕೊಪ್ಪ, ಅಮೃತ ದೇಸಾಯಿ, ಎಸ್‌ಪಿ ವರ್ತಿಕಾ ಕಟಿಯಾರ, ಜಿಪಂ ಸಿಇಒ ಡಾ| ಬಿ.ಸಿ. ಸತೀಶ್‌, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕಿಮ್ಸ್‌ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರಠಾಣೆ, ಕಿಮ್ಸ್‌ ಮುಖ್ಯ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ| ಯಶವಂತ ಮದೀನಕರ, ಡಾ| ಶಿವಕುಮಾರ್‌ ಮಾನಕರ ಇದ್ದರು.

ಟಾಪ್ ನ್ಯೂಸ್

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ

8-utkhader

U. T. Khader: ಹೆಬ್ಟಾಳ್ಕರ್‌-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.