ಕ್ಯಾನ್ಸರ್‌ ರೋಗಿಗಳಿಗೆ ಆತ್ಮಸ್ಥೈರ್ಯ ಅವಶ್ಯ

Team Udayavani, Dec 22, 2019, 11:02 AM IST

huballi-tdy-3

ಹುಬ್ಬಳ್ಳಿ: ಕ್ಯಾನ್ಸರ್‌ ಕುರಿತು ರೋಗಿಗಳಲ್ಲಿರುವ ಭಯ ಹೋಗಲಾಡಿಸುವ ನಿಟ್ಟಿನಲ್ಲಿ ವೈದ್ಯರು ಅವರಿಗೆ ಮನೋಸ್ಥೈರ್ಯ ತುಂಬುವ ಕಾರ್ಯ ಮಾಡಬೇಕೆಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಕ್ಲಬ್‌ ರಸ್ತೆಯ ವಿವೇಕಾನಂದ ಸಂಕೀರ್ಣ ಹಿಂಬದಿಯ ಎಚ್‌ಸಿಜಿ ಎನ್‌ಎಂಆರ್‌ ಕ್ಯಾನ್ಸರ್‌ ಸಂಸ್ಥೆಯಲ್ಲಿ ಎಚ್‌ಸಿಜಿ ಎನ್‌ಎಂಆರ್‌ ಕ್ಯಾನ್ಸರ್‌ ಕೇಂದ್ರವು ಲಯನ್ಸ್‌ ಕ್ಲಬ್‌ ಹುಬ್ಬಳ್ಳಿ ಪರಿವಾರರ ಸಹಯೋಗದೊಂದಿಗೆ ಶನಿವಾರ ಹಮ್ಮಿಕೊಂಡಿದ್ದ ಕ್ಯಾನ್ಸರ್‌ ರೋಗದ ತಿಳಿವಳಿಕೆ ಮತ್ತು ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಬಹುತೇಕ ಜನರು ತಮಗೆ ಕ್ಯಾನ್ಸರ್‌ ಬಂದಿದೆ ಎಂಬುದು ಗೊತ್ತಾದ ಕೂಡಲೇ ಭಯಪಟ್ಟು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಾರೆ. ಹೀಗಾಗಿ ಬಹುತೇಕರು ಸಾವು ಕಾಣುತ್ತಿದ್ದಾರೆ. ರೋಗಿಗಳಿಗೆ ಚಿಕಿತ್ಸೆಗಿಂತ ಮನೋಸ್ಥೈರ್ಯ ಮುಖ್ಯ. ಈ ಕುರಿತು ವೈದ್ಯರು ರೋಗ ತಡೆಗಟ್ಟುವಲ್ಲಿ ಕೈಗೊಳ್ಳಬೇಕಾದ ವಿಧಾನ ಹಾಗೂ ಕ್ರಮಗಳ ಬಗ್ಗೆ ರೋಗಿಗಳಿಗೆ ಅರಿವು ಮೂಡಿಸಬೇಕು. ಅವರು ಕೇಳುವ ಪ್ರಶ್ನೆಗಳಿಗೆ ಸಮಾಧಾನದಿಂದ ಉತ್ತರಿಸಿದರೆ ಅದುವೇ ಅವರಿಗೆ ಚೇತೋಹಾರಿ. ಅವರಿಗೆ ಜೀವದಾನ ನೀಡುವ ಕಾರ್ಯ ಮಾಡಬೇಕು ಎಂದರು.

ಶಿಕ್ಷಕರು ಶಿಕ್ಷಣ ನೀಡುವ ಕಾರ್ಯ ಮಾಡಿದರೆ ವೈದ್ಯರು ಸಂಕಷ್ಟದಲ್ಲಿರುವ ರೋಗಿಗಳಿಗೆ ಜೀವದಾನ ಮಾಡುವ ಕೆಲಸ ಮಾಡುತ್ತಾರೆ. ಆ ಮೂಲಕ ಶಿಕ್ಷಕರಿಗಿಂತ ಮಿಗಿಲಾದ ಕಾರ್ಯ ವೈದ್ಯರು ಮಾಡುತ್ತಿದ್ದಾರೆ. ಕ್ಯಾನ್ಸರ್‌ ಕುರಿತು ದೊಡ್ಡ ಪ್ರಮಾಣದಲ್ಲಿ ಅರಿವು ಹಾಗೂ ತಪಾಸಣಾ ಶಿಬಿರ ಆಯೋಜಿಸಿದರೆ ಅದಕ್ಕೆ ಅವ್ವ ಸೇವಾ ಟ್ರಸ್ಟ್‌ನಿಂದ ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಎನ್‌ಎಂಆರ್‌ ಕ್ಯಾನ್ಸರ್‌ ಸೆಂಟರ್‌ನ ನಿರ್ದೇಶಕ ಡಾ| ರವಿ ಕಲಘಟಗಿ ಮಾತನಾಡಿ, ಜನವರಿಯಲ್ಲಿ ಕೇಂದ್ರದಿಂದ ಗರ್ಭಕೋಶ ಮತ್ತು ಬಾಯಿ ಕ್ಯಾನ್ಸರ್‌ ಕುರಿತು ಶಿಬಿರ ನಡೆಸಲು ಯೋಜಿಸಲಾಗಿದೆ. ಜೊತೆಗೆ ತಿಂಗಳಿಗೊಮ್ಮೆ ಶಿಬಿರ ಹಮ್ಮಿಕೊಳ್ಳಲು ಆಲೋಚಿಸಲಾಗಿದೆ. ಶಾಲೆ-ಕಾಲೇಜುಗಳಲ್ಲಿ ತಿಂಗಳಿಗೆ ಒಂದು ತಾಸು ತಜ್ಞ ವೈದ್ಯರಿಂದ ವಿದ್ಯಾರ್ಥಿಗಳಿಗೆ ಆರೋಗ್ಯದ ಬಗ್ಗೆ ತಿಳಿವಳಿಕೆ ನೀಡುವ ಕಾರ್ಯ ಮಾಡಿದರೆ ಯುವ ಜನಾಂಗಕ್ಕೆ ಉಪಯುಕ್ತವಾಗುತ್ತದೆ ಎಂದರು.

ಡಾ| ಲೇಪಾಕ್ಷಿ ಕೆ. ಮಾತನಾಡಿ, ತಂತ್ರಜ್ಞಾನ ಎಷ್ಟೇ ಸುಧಾರಿಸಿದ್ದರೂ ಕ್ಯಾನ್ಸರ್‌ ರೋಗಿಗಳ ಸಾವು ಕಡಿಮೆ ಆಗುತ್ತಿಲ್ಲ. ರೋಗವು 4 ಇಲ್ಲವೇ 5ನೇ ಹಂತಕ್ಕೆ ಬಂದಾಗ ಆಸ್ಪತ್ರೆಗೆ ಹೋಗುತ್ತಾರೆ. ಇಂತಹ ಸಂದರ್ಭದಲ್ಲಿ ಅವರ ಜೀವ ಉಳಿಸುವುದು ಬಹಳ ಕಷ್ಟ. ಮೊದಲ ಹಂತದಲ್ಲೇ ರೋಗ ಪತ್ತೆ ಮಾಡಿದರೆ ಅದನ್ನು ಗುಣಪಡಿಸುವುದು ಬಹಳ ಸುಲಭ. ರೋಗ ತಡೆಗಟ್ಟುವ ಕುರಿತು ವೈದ್ಯರು ನೀಡುವ ಸಲಹೆಗಳನ್ನು ಚಾಚುತಪ್ಪದೆ ಪಾಲಿಸಿದರೆ ಶೇ. 70 ರೋಗ ತಡೆಗಟ್ಟಬಹುದು. ಭಾರತದಲ್ಲಿ ಕ್ಯಾನ್ಸರ್‌ ರೋಗಿಗಳ ಸಂಖ್ಯೆ ಕಡಿಮೆ ಇದ್ದರು ಸಾವಿನ ಪ್ರಮಾಣ ಹೆಚ್ಚಿದೆ. ಇದಕ್ಕೆ ಜನರಲ್ಲಿ ತಿಳಿವಳಿಕೆ ಇಲ್ಲದಿರುವುದೇ ಕಾರಣ. ಆದ್ದರಿಂದ ರೋಗದ ಕುರಿತು 3 ತಿಂಗಳಿಗೊಮ್ಮೆ ತಿಳಿವಳಿಕಾ ಶಿಬಿರ ಆಯೋಜಿಸಿದರೆ ಉತ್ತಮ ಎಂದರು.

ಲಯನ್ಸ್‌ ಕ್ಲಬ್‌ ಹುಬ್ಬಳ್ಳಿ ಪರಿವಾರದ ಅಧ್ಯಕ್ಷ ಶಶಿ ಸಾಲಿ ಅಧ್ಯಕ್ಷತೆ ವಹಿಸಿದ್ದರು. ಎನ್‌ಎಂಆರ್‌ ಸಂಸ್ಥೆಯ ಗ್ರಂಥಶಾಸ್ತ್ರದ ಸಲಹೆಗಾರ ಮುಖ್ಯಸ್ಥ ಡಾ| ಶರಣ ಶೆಟ್ಟಿ, ಡಾ| ಪ್ರಸಾದ ಗುಣಾರಿ, ಡಾ| ಜಯಕಿಶನ ಅಗಿವಾಲಾ ಮೊದಲಾದವರಿದ್ದರು. ಮಹೇಂದ್ರ ಸಿಂಘಿ ವಂದಿಸಿದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.