ಬಾದಾಮಿ, ಇಳಕಲ್‌ನಲ್ಲಿ 24 ಲಕ್ಷ ವಶ
Team Udayavani, May 12, 2018, 4:57 PM IST
ಬಾಗಲಕೋಟೆ: ಜಿಲ್ಲೆಯ ಇಳಕಲ್ ನಗರ ಹಾಗೂ ಬಾದಾಮಿ ಪಟ್ಟಣದಲ್ಲಿ ಚುನಾವಣಾಧಿಕಾರಿಗಳು ಪ್ರತ್ಯೇಕ ದಾಳಿ ನಡೆಸಿದ್ದು 23.62 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಹಾಗೂ ಹುನಗುಂದ ಚುನಾವಣಾಧಿಕಾರಿಗಳು ಇಳಕಲ್ ನಗರದ ಸಂದೀಪ ಮಜಿ ಎಂಬುವವರ ಮನೆ ಮೇಲೆ ದಾಳಿ ನಡೆಸಿದ್ದು, ಅವರ ಮನೆಯಲ್ಲಿ ಉದ್ಯಮಿ ಕಮಲ್‌ಲಾಲ್ ವರ್ಮಾ ಎಂಬುವವರಿಗೆ ಸೇರಿದ್ದು ಎನ್ನಲಾದ 20 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಇಳಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾದಾಮಿಯಲ್ಲಿ 3.62 ಲಕ್ಷ ವಶ: ಬಾದಾಮಿ ನಗರ ಹಾಗೂ ಹೊಸೂರ ಗ್ರಾಮದಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿದ್ದು ಎನ್ನಲಾದ 3.62 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಮಹಿಳೆಯೊಬ್ಬರ ದೂರಿನ ಮೇರೆಗೆ ಎಸ್ಪಿ ಸಿ. ವಂಶಿಕೃಷ್ಣ ಅವರು ಬಾದಾಮಿ ಪಟ್ಟಣದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮೇಲೆ ದಾಳಿ ನಡೆಸಿ 1,62,830 ರೂ. ನಗದು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಬಾದಾಮಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಚುನಾವಣಾಧಿಕಾರಿಗಳು ದಾಳಿ ನಡೆಸಿ ಸುಮಾರು 2.96 ಲಕ್ಷ ನಗದು ವಶಕ್ಕೆ ಪಡೆದಿದ್ದಾರೆ. ಈ ಎರಡೂ ಪ್ರಕರಣಗಳು ಬಾದಾಮಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
2.25 ಲಕ್ಷ ರೂ. ವಶ
ಬನಹಟ್ಟಿ: ಮತದಾರರಿಗೆ ಹಂಚಲು ಸ್ಕೂಟಿಯಲ್ಲಿ ಸಾಗಿಸುತ್ತಿದ್ದ 2.25 ಲಕ್ಷ ರೂ. ನಗರದ ಬಸ್ ನಿಲ್ದಾಣದ ಬಳಿ ಗುರುವಾರ ರಾತ್ರಿ ವಶಪಡಿಸಿಕೊಳ್ಳಲಾಗಿದೆ. ತಡರಾತ್ರಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ಸ್ಕೂಟಿಯೊಂದರಲ್ಲಿ 2.25 ಲಕ್ಷ ರೂ. ಮತದಾರರಿಗೆ ಅಕ್ರಮವಾಗಿ ಹಂಚಿಕೆ ಮಾಡಲಾಗುತ್ತಿದೆ ಎಂಬ ಸಂಶಯದಿಂದ ವಶಕ್ಕೆ ಪಡೆದ ಪೊಲೀಸರು ಹಾಗೂ ಎಫ್ ಎಸ್‌ಟಿ ತಂಡದಿಂದ ಸೂಕ್ತ ದಾಖಲೆಯಿಲ್ಲದ ಕಾರಣ ಬೈಕ್ ಸವಾರ ಸುರೇಶ ಮೋಪಗಾರ(31) ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿಕೊಂಡ ಠಾಣಾಧಿಕಾರಿ ಎಸ್.ಎಂ. ಅವಜಿ ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
Pro Kabaddi: ಹರಿಯಾಣ- ಪಾಟ್ನಾ ಫೈನಲ್ ಹಣಾಹಣಿ
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.