ಮಕ್ಕಳಂತೆ ಸಸಿ ಪಾಲನೆ ಮಾಡಿ: ಕುಲಕರ್ಣಿ
Team Udayavani, Jun 6, 2018, 5:22 PM IST
ಕುಳಗೇರಿ ಕ್ರಾಸ್: ಗಿಡ ಮರಗಳಿಂದ ಕೂಡಿದ ಪರಿಸರವು ಆರೋಗ್ಯಕ್ಕೆ ಪೂರಕವಾಗಿದ್ದು, ಪ್ರತಿಯೊಬ್ಬರು ತಮ್ಮ ಮನೆಯಂಗಳದಲ್ಲಿ ಸಸಿ ನೆಟ್ಟು ಅವುಗಳನ್ನು ಮಕ್ಕಳಂತೆ ಪಾಲನೆ ಮಾಡಿ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಮುಖ್ಯಾಧ್ಯಾಪಕ ಆರ್.ಆರ್. ಕುಲಕರ್ಣಿ ಹೇಳಿದರು. ಸ್ಥಳೀಯ ಜಿ.ಜಿ. ಹಕ್ಕಾ ಪಕ್ಕಿ ಪ್ರೌಢಶಾಲೆ ಹಾಗೂ ಅರಣ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆಗೆ ಸಸಿ ನೆಟ್ಟು ನೀರು ಹಾಕುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಅರಣ್ಯ ಅಧಿಕಾರಿ ಆರ್.ಬಿ. ಗಂಗಾಪುರ ಮಾತನಾಡಿ, ಪರಿಸರ ನಾಶದಿಂದ ಭೂಮಿಯ ತಾಪಮಾನ ಹೆಚ್ಚುತಿದ್ದು, ಅದರ ಪರಿಣಾಮದಿಂದ ಅತಿಯಾದ ಬಿಸಿಲು, ಮಳೆ, ಚಳಿ ನೆರೆ ಹಾವಳಿ ಸಾಂಕ್ರಾಮಿಕ ರೋಗಗಳು ಸಾಮಾನ್ಯವಾಗಿದೆ. ಪ್ರತಿಯೊಬ್ಬರು ಗಿಡ ಮರ ಬೆಳೆಸಬೇಕು ಎಂದರು.
ವಿದ್ಯಾರ್ಥಿಗಳು, ಶಿಕ್ಷಕರು, ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಜಾಥಾ ಮೂಲಕ ಜನಸಾಮಾನ್ಯರಲ್ಲಿ ಅರಿವು ಮೂಡಿಸಿದರು. ಅರಣ್ಯ ಇಲಾಖೆ ಹವಾಲ್ದಾರ್ ಎಚ್.ಎಂ. ಗುಂಡಳ್ಳಿ, ಶಿಕ್ಷಕರಾದ ಎಂ.ಕೆ. ಸುಸಂಗಿ, ಪಿ.ವಿ. ಜಲ್ಲಿ, ಎಸ್.ಎಂ. ಅಂಗಡಿ, ಕೆ.ಎಲ್. ಪಾಟೀಲ, ಟಿ.ಪಿ. ಲಮಾಣಿ, ಎಸ್.ಎಚ್. ಪಾಟೀಲ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
BJP ಡಬಲ್ ಗೇಮ್; ವಕ್ಫ್ ಆಸ್ತಿ ರಕ್ಷಣೆ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖ: ಸಿದ್ದು
Hubli: ಅಪ್ರಾಪ್ತೆಯೊಂದಿಗೆ ಅನುಚಿತ ವರ್ತನೆ: ಮುಖ್ಯ ಪೇದೆ ವಿರುದ್ದ ಪೋಕ್ಸೋ ಕೇಸ್
Hubli: ಹಣಕಾಸು ಆಯೋಗದ ಅನ್ಯಾಯದ ಬಗ್ಗೆ ಬಿಜೆಪಿಯರಿಂದ ಮೌನ: ಸಿದ್ದರಾಮಯ್ಯ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.