ನಿಯಮ ಉಲ್ಲಂಘಿಸಿದರೆ ಮೊಕದ್ದಮೆ
Team Udayavani, Jul 17, 2020, 1:19 PM IST
ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೋವಿಡ್-19 ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಆಸ್ಪತ್ರೆಗಳು, ಕೋವಿಡ್ ಕೇರ್‌ಸೆಂಟರ್, ಐಸಿಯು ಮತ್ತು ವೆಂಟಿಲೇಟರ್‌ಗಳನ್ನು ಗುರುತಿಸಿ ಸಮರ್ಪಕ ಚಿಕಿತ್ಸೆ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಸೂಚಿಸಿದರು.
ಜಿಲ್ಲಾಧಿಕಾರಿ, ಪೊಲೀಸ್ ಆಯುಕ್ತ ಹಾಗೂ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸಭೆ ನಡೆಸಿದ ಸಚಿವರು, ಕೋವಿಡ್ ನಿಯಂತ್ರಣಕ್ಕೆ ಜಾರಿಗೊಳಿಸಿರುವ ಲಾಕ್‌ಡೌನ್ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ನಿಯಮ ಉಲ್ಲಂಘನೆಗೆ ಅವಕಾಶ ನೀಡಬಾರದು. ಸಾರ್ವಜನಿಕರು ಅನಗತ್ಯ ಸಂಚರಿಸಬಾರದು. ಲಾಕ್‌ಡೌನ್ ಸಂದರ್ಭದಲ್ಲಿ ವಿನಾಯಿತಿ ನೀಡಲಾದ ಕೈಗಾರಿಕೆ, ಕಟ್ಟಡ ನಿರ್ಮಾಣ, ವಾಣಿಜ್ಯ ಮೊದಲಾದ ಚಟುವಟಿಕೆಗಳನ್ನು ಹೊರತುಪಡಿಸಿ ಇತರೆ ವ್ಯಾಪಾರ-ವಹಿವಾಟುಗಳಿಗೆ ಅವಕಾಶ ನೀಡಬಾರದು. ನಿಯಮ ಉಲ್ಲಂ ಸಿದ ಪ್ರಕರಣಗಳು ಕಂಡು ಬಂದರೆ ಅಂಥವರ ವಿರುದ್ಧ ಮೊಕದ್ದಮೆ ದಾಖಲಿಸುವಂತೆ ಸೂಚಿಸಿದರು.
ಹೊರ ಜಿಲ್ಲೆಗಳಿಂದ ಅನಧಿಕೃತವಾಗಿ ಯಾರಿಗೂ ಪ್ರವೇಶ ನೀಡಬಾರದು. ಹೆಚ್ಚುತ್ತಿರುವ ಸೋಂಕಿನ ಪ್ರಮಾಣಕ್ಕೆ ಅನುಗುಣವಾಗಿ ಆಸ್ಪತ್ರೆ, ಕೋವಿಡ್ ಕೇರ್‌ಸೆಂಟರ್, ಐಸಿಯು ಮತ್ತು ವೆಂಟಿಲೇಟರ್‌ಗಳನ್ನು ಗುರುತಿಸಬೇಕು.ಖಾಸಗಿ ಆಸ್ಪತ್ರೆಗಳು ಸಹಕಾರ ನೀಡದಿದ್ದರೆ ಸಾಂಕ್ರಾಮಿಕ ರೋಗಗಳು ತಡೆ ಕಾಯ್ದೆ 1897 ಅಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಜಿಲ್ಲಾಧಿಕಾರಿ ನಿತೇಶ ಪಾಟೀಲ, ಹು-ಧಾ ಪೊಲೀಸ್ ಆಯುಕ್ತ ಆರ್. ದಿಲೀಪ, ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು
Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.