![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Sep 28, 2023, 5:51 PM IST
ಹುಬ್ಬಳ್ಳಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಸೆ. 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉನ್ನತ ಮಟ್ಟದ ಸಭೆ ಕರೆದಿದ್ದಾರೆ ಎಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ತಿಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸುಪ್ರೀಂ ಕೋರ್ಟ್, ಹೈಕೋರ್ಟ್, ಪರಿಣಿತರ, ಕಾನೂನು ತಜ್ಞರ, ಅನುಭವಿಗಳಿಂದ ಮಾಹಿತಿ ಪಡೆಯಲಾಗಿದೆ. ರಾಜ್ಯ ಸಂಕಷ್ಟಕ್ಕೆ ಸಿಲುಕಿದೆ. ಒಂದೆಡೆ ಬರ, ಇನ್ನೊಂದೆಡೆ ಬೆಂಗಳೂರಿಗೆ ಕುಡಿಯಲು ನೀರಿಲ್ಲ. ಮುಂದೆ ಜಾಗರೂಕತೆಯಿಂದ ಹೆಜ್ಜೆ ಇರಿಸಬೇಕಾಗಿದೆ. ಸಭೆಯ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಕಾವೇರಿ ನೀರಿನ ವಿಷಯದಲ್ಲಿ ಇದೊಂದು ತೆರೆದಿಟ್ಟ ಪುಸ್ತಕ ಎಂದರು.
ನಮ್ಮ ಡ್ಯಾಮ್ ಗಳಲ್ಲಿ ನೀರಿಲ್ಲ. ಅದು ಎಲ್ಲರಿಗೂ ಕಾಣುತ್ತಿದೆ. ಸಂಕಷ್ಟ ಸೂತ್ರ ಕಂಡು ಹಿಡಿಯಬೇಕಾಗಿದೆ. ಕಾವೇರಿ ವಿಚಾರದಲ್ಲಿ ಬಿಜೆಪಿಯವರು ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಮುಂದೆ ಬರಬೇಕು. ಎರಡು ರಾಜ್ಯಗಳ ಮುಖ್ಯಮಂತ್ರಿಗಳನ್ನು ಕರೆದು ಸಭೆ ನಡೆಸಬೇಕು. ಇದರಿಂದ ಒಕ್ಕೂಟ ವ್ಯವಸ್ಥೆ ಬಲಗೊಳ್ಳುತ್ತದೆ. ಅದನ್ನು ಬಿಟ್ಟು ವಿನಾಕಾರಣ ಆರೋಪ ಸರಿಯಲ್ಲ ಎಂದರು.
ಈ ಹಿಂದೆ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಅವರು ಕೃಷ್ಣಾ ಬಚಾವತ್ ವಿಷಯದಲ್ಲಿ ಮಧ್ಯ ಪ್ರವೇಶ ಮಾಡಿದರು. 734 ಟಿಎಂಸಿಯಲ್ಲಿ 5 ಟಿಎಂಸಿ ನೀರು ಮದ್ರಾದ್ ಗೆ ಬಿಡಲು ಸೂಚಿಸಿದ್ದರು ಎಂದು ನೆನಪಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.