ಯೋಗೀಶ್ ಗೌಡ ಹತ್ಯೆ ಪ್ರಕರಣ: ಮಾಜಿ ಸಚಿವ ವಿನಯ್ ಕುಲಕರ್ಣಿ, ಸಹೋದರ ವಿಜಯ್ ಸಿಬಿಐ ವಶಕ್ಕೆ
Team Udayavani, Nov 5, 2020, 7:46 AM IST
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತು ಸಹೋದರ ವಿಜಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.
2016 ಜೂ.15 ರಂದು ತಮ್ಮದೇ ಮಾಲೀಕತ್ವದ ಉದಯ ಜಿಮ್ ನಲ್ಲಿ ಹತ್ಯೆಯಾಗಿದ್ದ ಹುಬ್ಬಳ್ಳಿ ಜಿ.ಪಂ. ಸದಸ್ಯರಾಗಿದ್ದ ಯೋಗೀಶಗೌಡ ಹತ್ಯೆ ಪ್ರಕರಣದ ತನಿಖೆ ಕೈಗೊಂಡಿರುವ ಸಿಬಿಐ ಅಧಿಕಾರಿಗಳು, ಗುರುವಾರ ಬೆಳಿಗ್ಗೆ ಮಾಜಿ ಸಚಿವರ ಮನೆಗೆ ಭೇಟಿ ನೀಡಿ ಸಹೋದರಿಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಮನೆಯಿಂದ ಉಪನಗರ ಠಾಣೆಗೆ ಕರೆ ತಂದು ವಿಚಾರಣೆ ನಡೆಸಲಾಗುತ್ತಿದ್ದು, ಇದು ಕಾಂಗ್ರೆಸ್ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ಯೋಗೀಶ್ ಗೌಡ ಈ ಹತ್ಯೆಯ ಮರುದಿನವೇ ಬಸವರಾಜ ಮುತ್ತಗಿ ಒಳಗೊಂಡ ತಂಡವನ್ನು ಪೊಲೀಸರು ಬಂಧಿಸಿದ್ದರು. ಆದರೆ ಯೋಗೀಶ್ ಗೌಡ ಕುಟುಂಬವು ಈ ಪ್ರಕರಣ ಸಿಬಿಐಗೆ ನೀಡಲು ಆಗ್ರಹಿಸಿತ್ತು.
ಇದನ್ನೂ ಓದಿ:ದೇಶದಲ್ಲೇ ಮೊದಲ ಬಾರಿಗೆ ಸರಕಾರದಿಂದ ಬೀಚ್ ದತ್ತು
ಕಳೆದ ಒಂದು ವರ್ಷದಿಂದ ಸಿಬಿಐ ಯೋಗೀಶ್ ಗೌಡ ಗೌಡರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿತ್ತು. ಈ ಸಂಬಂಧ ನಿಜವಾದ ಸುಪಾರಿ ಹಂತಕರನ್ನೂ ಸಿಬಿಐ ಅಧಿಕಾರಿಗಳು ಬಂಧಿಸಿ ಕರೆತರುವಲ್ಲಿ ಯಶಸ್ವಿಯಾಗಿದ್ದರು.
ಈ ಹಿಂದೆ ಸಿಬಿಐ ಅಧಿಕಾರಿಗಳು ವಿನಯ ಕುಲಕರ್ಣಿ ಅವರ ಸಹೋದರ ವಿಜಯ ಕುಲಕರ್ಣಿ ಅವರನ್ನೂ ವಿಚಾರಣೆ ನಡೆಸಿದ್ದರು. ಹಲವು ಅಧಿಕಾರಿಗಳು ಹಾಗೂ ಹಲವು ರಾಜಕೀಯ ಮುಖಂಡರನ್ನೂ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದರು.
ಕೊಲೆಗೆ ಸುಪಾರಿ ಕೊಟ್ಟವರ ಬಗ್ಗೆ ಸಿಬಿಐ ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸಿತ್ತು. ಇದೀಗ ಈ ಕೊಲೆ ಪ್ರಕರಣದ ಭಾಗಿಯಾಗಿದ್ದಾರೆ ಎಂದು ಸಿಬಿಐ ಅಧಿಕಾರಿಗಳು ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ಸಹೋದರ ವಿಜಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ಅವರನ್ನು ತಮ್ಮ ವಶಕ್ಕೆ ಪಡೆದು ಧಾರವಾಡದ ಉಪನಗರ ಠಾಣೆಗೆ ಹೆಚ್ಚಿನ ವಿಚಾರಣೆಗೆ ಕರೆತಂದಿದ್ದಾರೆ.
ಬೆಳ್ಳಂಬೆಳಿಗ್ಗೆ ಬಾರಾಕೊಟ್ರಿಯಲ್ಲಿರುವ ವಿನಯ್ ಅವರ ಮನೆಗೆ ತೆರಳಿದ ಸಿಬಿಐ ಅಧಿಕಾರಿಗಳು, ಅವರನ್ನು ಉಪನಗರ ಠಾಣೆಗೆ ಕರೆತಂದಿದ್ದಾರೆ. ವಿನಯ್ ಕುಲಕರ್ಣಿ ಅವರ ಹುಟ್ಟುಹಬ್ಬದ ಮುನ್ನಾ ದಿನವೇ ಅವರನ್ನು ಸಿಬಿಐ ವಶಕ್ಕೆ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.