ಕಾರ್ಮಿಕರನ್ನು ಕಡೆಗಣಿಸಿದ ಕೇಂದ್ರ

Team Udayavani, Oct 9, 2017, 12:30 PM IST

hhu6.jpg

ಹುಬ್ಬಳ್ಳಿ: ಆಲ್‌ ಇಂಡಿಯಾ ಆರ್‌ಎಂಎಸ್‌ ಆ್ಯಂಡ್‌ ಎಂಎಂಎಸ್‌ ಎಂಪ್ಲಾಯಿಸ್‌ ಯೂನಿಯನ್‌ನ 31ನೇ ರಾಜ್ಯ ಸಮಾವೇಶ ಇಲ್ಲಿನ ಮರಾಠ ಭನವದಲ್ಲಿ ರವಿವಾರ ನಡೆಯಿತು. ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಸಂಘಟನೆಗಳು ಕಾರ್ಮಿಕರ ಸಮಸ್ಯೆಗಳ ವಿರುದ್ಧ ಹೋರಾಟ ಮಾಡುವಂತಿರಬೇಕು.

2004ರ ನಂತರ ನೇಮಕವಾದ ಕೇಂದ್ರ ಸರಕಾರದ ನೌಕರರಿಗೆ ಪಿಂಚಣಿ ಸೌಲಭ್ಯವಿಲ್ಲ. ಈ ಬಗ್ಗೆ ಯಾವುದೇ ಸಂಘಟಗಳು ಗಂಭೀರವಾಗಿ ಹೋರಾಟಕ್ಕೆ ಮುಂದಾಗುತ್ತಿಲ್ಲ. ಹೊಸ ಪಿಂಚಣಿ ವ್ಯವಸ್ಥೆ ಜಾರಿಗೆ ತರುವ ಮೂಲಕ ಖಾಸಗಿ ಕಂಪನಿಗಳಿಗೆ ಲಾಭ ಮಾಡಿಕೊಡುತ್ತಿದ್ದಾರೆ. ಇದರ ವಿರುದ್ಧ ನೌಕರರು ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಹೇಳಿದರು. 

ಕಾರ್ಮಿಕರ ಬಗ್ಗೆ ಕಾಳಜಿಯಿಲ್ಲದ ಕೇಂದ್ರ ಸರಕಾರ ವ್ಯಾಪಾರಕ್ಕೆ ಸೀಮಿತವಾಗಿದೆ. ಸರಕಾರಗಳನ್ನು ಎಚ್ಚರಿಸುವ ನಿಟ್ಟಿನಲ್ಲಿ ಎಲ್ಲ ಕಾರ್ಮಿಕ ಸಂಘಟನೆಗಳು ಒಗ್ಗೂಡಬೇಕು. ಎಲ್ಲ ಇಲಾಖೆ ಕಾರ್ಮಿಕ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋರಾಟ ಮಾಡಬೇಕು. ಹಲವಾರು ಕೋರಿಯರ್‌ ಕಂಪನಿಗಳು ಕಾರ್ಯ ನಿರ್ವಹಿಸುತ್ತಿರುವುದರಿಂದ ಅಂಚೆ ಇಲಾಖೆಯ ಕಾರ್ಯಕ್ಕೆ ಧಕ್ಕೆ ಬಂದಿದೆ ಎಂದರು. 

ಕಾರ್ಮಿಕ ಹೋರಾಟಗಾರ ಡಾ| ಕೆ.ಎಸ್‌. ಶರ್ಮಾ ಮಾತನಾಡಿ, ಇಂದಿನ ಕೇಂದ್ರ ಸರಕಾರ ಕಾರ್ಪೋರೇಟ್‌ಗಳ ಕ್ಷೇತ್ರದ ಪರವಾಗಿರುವ ಸರಕಾರ. ಕಾರ್ಮಿಕ ವಲಯವನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಉದ್ಯೋಗಗಳನ್ನು ಕಡಿತಗೊಳಿಸಿ ಕಾರ್ಪೋರೇಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುವಂತೆ ಕೆಲಸಗಳು ಕೇಂದ್ರ ಸರಕಾರದಿಂದ ನಡೆಯುತ್ತಿದೆ.

ಈ ಬಗ್ಗೆ ಸಂಘಟನೆಗಳು ದೊಡ್ಡ ಹೋರಾಟಕ್ಕೆ ಮುಂದಾಗಬೇಕಾಗಿದೆ ಎಂದರು. ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಇಲಾಖೆ ಸಂಬಂಧಿಸಿದಂತೆ ಹೊಸ ಆಲೋಚನೆಗಳನ್ನು ನೇರವಾಗಿ ಕೇಂದ್ರ ಸರಕಾರಕ್ಕೆ ತಿಳಿಸಬಹುದಾಗಿದೆ. ದೇಶದಲ್ಲಿ ತಂತ್ರಜ್ಞಾನ ಸಾಕಷ್ಟು ಬದಲಾಗುತ್ತಿದ್ದು, ಅದಕ್ಕೆ ನೀವು ಮತ್ತು ನಿಮ್ಮ ಇಲಾಖೆ ಬದಲಾವಣೆಗೆ ಒಗ್ಗಿಕೊಳ್ಳುವುದು ಅನಿವಾರ್ಯ ಎಂದು ಹೇಳಿದರು.
 
ಯೂನಿಯನ್‌ ರಾಜ್ಯಾಧ್ಯಕ್ಷ ಬಿ.ಎಸ್‌. ಕೃಷ್ಣ ನಾಯಕ, ಟಿ.ಬಿ. ಹರೀಶ, ಅಧೀಕ್ಷಕ ಆರ್‌.ಜಿ. ಬ್ಯಾಟಪ್ಪನವರ, ಕಾರ್ಯದರ್ಶಿ ಕೃಷ್ಣನ, ಪ್ರಧಾನ ಕಾರ್ಯದರ್ಶಿ ಗಿರಿರಾಜ ಸಿಂಗ, ಪಿ.ಸುರೇಶ, ಪಿ.ವಿ. ರಾಜೇಂದ್ರನ, ಎ.ಶ್ರೀನಿವಾಸ, ಜಿ.ಉದಯಶಂಕರ ರಾವ, ಎಂ.ಚಿಕ್ಕಲಕ್ಷ್ಮಣ, ಎಸ್‌.ಕೆ. ಗುತ್ತಲ, ಕೆ.ಬಿ. ರೂಗಿಶೆಟ್ಟರ, ಎಸ್‌.ಬಿ. ವೈದ್ಯ, ನೂರಬಾಷಾ ಇದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.