ಮಹದಾಯಿ ಯೋಜನೆ ಡಿಪಿಆರ್‌ಗೆ ಕೇಂದ್ರದ ಸೂಚನೆ
Team Udayavani, Jul 28, 2020, 9:04 AM IST
ಧಾರವಾಡ: ಮಹದಾಯಿ, ಕಳಸಾ-ಬಂಡೂರಿ ನಾಲಾ ಜೋಡಣೆಗೆ ಡಿಪಿಆರ್ (ವಿಸ್ಕೃತ ಯೋಜನಾ ವರದಿ ) ಸಲ್ಲಿಸುವಂತೆ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಸೂಚನೆ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಕುರಿತಂತೆ ಈಗಾಗಲೇ ಗೆಜೆಟ್ ನೋಟಿಫಿಕೇಶನ್ ಆಗಿದೆ. ಇದರನ್ವಯ ಹೊಸ ಡಿಪಿಆರ್ ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ತಿಳಿಸಿದೆ. ಮಹದಾಯಿ ಅನುಷ್ಠಾನಕ್ಕೆ ಅರಣ್ಯ ಭಾಗದಲ್ಲಿ ಕೆಲಸ ಮಾಡಬೇಕಾದ ಕಾರಣ ಹೊಸ ಡಿಪಿಆರ್ ಸಲ್ಲಿಸುವ ಪ್ರಸ್ತಾವನೆ ಸರ್ಕಾರ ಮುಂದಿದೆ. ಈ ನಿಟ್ಟಿನಲ್ಲಿ ರಾಜ್ಯ ನೀರಾವರಿ ಇಲಾಖೆ ಕಾರ್ಯ ನಿರ್ವಹಣೆ ಬಹಳ ಅಗತ್ಯವಿದೆ ಎಂದರು.
ಮಹಾದಾಯಿ, ಎತ್ತಿನಹೊಳೆಯಂಥ ಸಮಸ್ಯೆಗಳನ್ನು ಬಗೆಹರಿಸಲು ಉತ್ಸುಕವಾಗಿದೆ. ಮಹಾದಾಯಿ ಸಂಬಂಧ ಅರಣ್ಯ ಭಾಗದಲ್ಲಿ ಕೆಲಸ ಮಾಡಬೇಕಿರುವುದರಿಂದ ಹೊಸ ಡಿಪಿಆರ್ ಪ್ರಸ್ತಾವನೆ ಸಿದ್ಧಪಡಿಸಬೇಕಿದೆ. ಈ ನಿಟ್ಟಿನಲ್ಲಿ ನೀರಾವರಿ ಇಲಾಖೆ ಕ್ರಮ ಕೈಗೊಳ್ಳಲಿದೆ. ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದೆ. ಬರಗಾಲ, ಪ್ರವಾಹ ಹಾಗೂ ಕೋವಿಡ್ ನಂಥ ಸಂದಿಗ್ಧ ಪರಿಸ್ಥಿತಿಯನ್ನು ಸಿಎಂ ಸಮರ್ಥವಾಗಿ ನಿಭಾಯಿಸಿದ್ದಾರೆ. ಮುಂಬರುವ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಲಿವೆ ಎಂದರು.
ಕೋವಿಡ್ ಚಿಕಿತ್ಸೆ, ಕಿಟ್ ಖರೀದಿ ವಿಷಯ ಮುಂದಿಟ್ಟು ಕಾಂಗ್ರೆಸ್ ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಆರೋಪ ಮಾಡುತ್ತಿದೆ. ಇದನ್ನು ಕೈ ಬಿಟ್ಟು ಜಿಲ್ಲಾಡಳಿತ-ಸರ್ಕಾರದ ಜತೆ ಕೈಜೋಡಿಸಿ, ರಚನಾತ್ಮಕ ಸಲಹೆ-ಸೂಚನೆ ನೀಡಬಹುದಿತ್ತು. ಆದರೆ, ಕೈ ನಾಯಕರು ಸಲಹೆ-ಸೂಚನೆ ಬದಲು ಟೀಕೆ-ಟಿಪ್ಪಣಿಗಳಿಂದ ಕಾಲಹರಣ ಮಾಡುವ ಮೂಲಕ ರಾಜ್ಯದ ಜನರ ದಿ ಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ಇದು ಒಂದು ಜವಾಬ್ದಾರಿಯುತ ಪಕ್ಷಕ್ಕೆ ಶೋಭೆ ತರುವ ಕೆಲಸ ಅಲ್ಲ ಎಂದರು.
ಕಿಟ್ ಖರೀದಿಯಲ್ಲಿ ಅವ್ಯಹಾರ ಆಗಿದ್ದರೆ ತನಿಖೆ ಮಾಡಿಸಲು ಸಿದ್ಧ. ಈ ಬಗ್ಗೆ ಧಾರವಾಡ ಜಿಲ್ಲಾಧಿಕಾರಿಗೂ ತನಿಖೆ ಮಾಡಲು ಸೂಚಿಸಲಾಗಿದೆ. ಕೈ ನಾಯಕರು ಆಧಾರ ರಹಿತ ಆರೋಪ ಮಾಡುತ್ತಿದೆ. ಆರಂಭದಲ್ಲಿ ಇಪಿಪಿ ಕಿಟ್, ಎನ್-95 ಮಾಸ್ಕ್ ನಮ್ಮ ಬಳಿ ಇರಲಿಲ್ಲ. ಅಂದು ದರ ಜಾಸ್ತಿ ಇತ್ತು. ಇಂದು ಉತ್ಪಾದನೆ ಹೆಚ್ಚಳದಿಂದ ದರವೂ ಕಡಿಮೆ ಆಗಿದೆ. ಇದನ್ನೇ ಕಾಂಗ್ರೆಸ್ ಪುನರುಚ್ಚರಿಸಿ ಅವ್ಯವಹಾರ ಎಂಬುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
ಶಾಸಕರಾದ ಅರವಿಂದ ಬೆಲ್ಲದ, ಶಂಕರ ಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಸಿ.ಎಂ.ನಿಂಬಣ್ಣವರ, ಮುಖ್ಯಮಂತ್ರಿ ರಾಜ್ಯಕೀಯ ಕಾರ್ಯದರ್ಶಿ ಮೋಹನ್ ಲಿಂಬಿಕಾಯಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.