ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಚಾಲನೆ
ಮಕ್ಕಳ ರಕ್ಷಣಾ ಆಯೋಗದ ಅನುದಾನ! ಮೊದಲ ಹಂತದಲ್ಲಿ 10 ಜಿಲ್ಲೆಗಳಲ್ಲಿ ಅನುಷ್ಠಾನ
Team Udayavani, Feb 14, 2021, 3:29 PM IST
ಧಾರವಾಡ: ರಾಜ್ಯದಲ್ಲಿ ಪೋಕೊÕ ಕಾಯ್ದೆ ಸೇರಿದಂತೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಸರ್ವೋಚ್ಚ ನ್ಯಾಯಾಲಯ ನಿರ್ದೇಶನದಂತೆ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅನುದಾನದಲ್ಲಿ ನಗರದ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಸಿದ್ಧಗೊಳಿಸಿರುವ ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಶನಿವಾರ ಚಾಲನೆ ದೊರೆತಿದೆ.
ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅನುದಾನದಡಿ ಮೊದಲ ಹಂತವಾಗಿ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಪೂರೈಸಲಾಗುತ್ತಿದೆ. ಅದರಂತೆ ಧಾರವಾಡ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಸಿದ್ಧಗೊಂಡಿರುವ ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ಸಂತ್ರಸ್ತ ಮಗುವಿಗೆ ಪ್ರತ್ಯೇಕ ಕೊಠಡಿ, ಆರೋಪಿತನಿಗೆ ಬೇರೆ ಕೊಠಡಿ, ಮಕ್ಕಳ ಶೌಚಾಲಯ, ಅಡುಗೆ ಮನೆ, ಅಗತ್ಯವಿದ್ದಲ್ಲಿ ಮಗುವಿನ ಪಾಲಕರಿಗೆ ರಾತ್ರಿ ವೇಳೆ ಉಳಿಯಲು ಕೊಠಡಿ, ಕಟ್ಟಡ ಆವರಣದಲ್ಲಿ ಮಕ್ಕಳಿಗಾಗಿ ಆಟದ ಮೈದಾನ, ಮಕ್ಕಳ ಪಾಲಕರಿಗೆ ಪ್ರತ್ಯೇಕ ಕೊಠಡಿ, ವಿಡಿಯೋ ಕಾನ್ಪರೆನ್ಸ್ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಮಕ್ಕಳಿಗಾಗಿ ಗ್ರಂಥಾಲಯ, ವರ್ಣಮಾಲೆ ಅಕ್ಷರಗಳಿರುವ ಚಾಪೆ (ಮ್ಯಾಟ್)ಗಳ ವ್ಯವಸ್ಥೆ, ನ್ಯಾಯಾಧೀಶರ ಕೋರ್ಟ್ ಹಾಲ್ ಹಾಗೂ ನ್ಯಾಯಾ ಧೀಶರಿಗೆ ಪ್ರತ್ಯೇಕ ಕೊಠಡಿ, ನಿರ್ವಹಣೆಗೆ ಸಿಬ್ಬಂದಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
ಮಕ್ಕಳ ಸ್ನೇಹಿ ನ್ಯಾಯಾಲಯವನ್ನು ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಧಾರವಾಡ ಜಿಲ್ಲಾ ಆಡಳಿತಾತ್ಮಕ ನ್ಯಾಯಮೂರ್ತಿ ಶ್ರೀನಿವಾಸ ಹರೀಶ ಕುಮಾರ ಅವರು ಉದ್ಘಾಟಿಸಿದರು. ನಂತರ ಪ್ರತಿ ಸೌಲಭ್ಯಗಳನ್ನು ಖುದ್ದಾಗಿ ಪರಿಶೀಲಿಸಿದರು.
ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಉಮೇಶ ಅಡಿಗ, 2ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ಮತ್ತು ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಧೀಶ ಎಂ. ಪಂಚಾಕ್ಷರಿ, ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಎಸ್. ಚಿಣ್ಣನ್ನವರ, ಸಿಜೆಎಂ ನ್ಯಾ| ಸಂಜಯ ಗುಡಗುಡಿ, ಧಾರವಾಡ ವಕೀಲರ ಸಂಘದನ ಅಧ್ಯಕ್ಷ ಬಿ.ಎಸ್. ಘೋಡಸೆ, ರಾಜ್ಯ ವಕೀಲರ ಪರಿಷತ್ ಸದಸ್ಯರಾದ ವಿ.ಡಿ. ಕಾಮರಡ್ಡಿ,ಆನಂದ ಮಗದುಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿ.ಎ. ಪಾಟೀಲ, ಲೋಕೊಪಯೋಗಿ ಇಲಾಖೆ ಕಾರ್ಯಪಾಲಯಕ ಅಭಿಯಂತ ಎಸ್.ಬಿ. ಚೌಡನ್ನವರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ವಿ.ಎನ್. ಪಾಟೀಲ, ಸಹಾಯಕಅಭಿಯಂತ ವಿಜಯಮಹಾಂತೇಶ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.