ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಅನಿಲ ಕಟ್ಟಿ
Team Udayavani, Jun 13, 2018, 5:24 PM IST
ಬಾಗಲಕೋಟೆ: ಮಕ್ಕಳ ಹಕ್ಕುಗಳ ರಕ್ಷಣೆಗೆ ಜಾಗೃತಿ ಅಗತ್ಯವಾಗಿದ್ದು, ಅದರ ಜೊತೆಗೆ ಮನ ಪರಿವರ್ತನೆ ಮಾಡುವ ಕೆಲಸವಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅನಿಲ ಕಟ್ಟಿ ಹೇಳಿದರು. ಜಿಪಂ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಮಕ್ಕಳ ಹಕ್ಕುಗಳ ರಕ್ಷಣೆಗೆ ಹಲವಾರು ಕಾಯ್ದೆ, ಕಾನೂನುಗಳನ್ನು ಜಾರಿಗೆ ತಂದಿದ್ದರೂ ಬಾಲಕರನ್ನು ದುಡಿಸಿಕೊಳ್ಳುವ ಪ್ರವೃತ್ತಿ ಕಂಡು ಬರುತ್ತಿರುವುದು ವಿಷಾದನೀಯ ಎಂದರು.
ಉಳ್ಳವರಿಗೆ ತಮ್ಮ ಮಕ್ಕಳನ್ನು ದುಡಿಯಲು ಕಳುಹಿಸುವ ಪ್ರವೃತ್ತಿ ಹೊಂದಿರುವುದಿಲ್ಲ. ಬಾಲ ಕಾರ್ಮಿಕರಾಗಲು ಬಡತನ,ಅಸ್ಪಶ್ಯತೆ, ಅನಿಷ್ಟಪದ್ದತಿಗಳೇ ಇದಕ್ಕೆ ಶಾಪವಾಗಿ ಪರಿಣಮಿಸಿದ್ದು, ಇದನ್ನು ನಿರ್ಮೂಲನೆ ಮಾಡಲು ಎಲ್ಲರಿಗೂ ಶಿಕ್ಷಣ ಅಗತ್ಯವಾಗಿದೆ. ಎಲ್ಲಿ ಬಾಲಕಾರ್ಮಿಕ ದುಡಿಸಿಕೊಳ್ಳುವ ಪ್ರವೃತ್ತಿ ಇದೆ ಅಲ್ಲಿ ಮನಪರಿವರ್ತನೆ ಮಾಡುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ, ಮಕ್ಕಳ ರಕ್ಷಣಾ ಸಮಿತಿ, ನ್ಯಾಯಾಲಯ ಜೊತೆಗೂಡಿ ಜಾಗೃತಿ ಮೂಡಿಸುವ ಮೂಲಕ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಮುಂದಾಗಬೇಕು ಎಂದು ಹೇಳಿದರು.
ಕುಟುಂಬದ ಆದಾಯ ಹೆಚ್ಚಿಸುವ ಮನೋಭಾವದಿಂದ ಪಾಲಕರು ಬಾಲ್ಯದಲ್ಲಿಯೇ ಮಕ್ಕಳನ್ನು ಕೆಲಸಕ್ಕೆ ಕಳುಹಿಸಲು ಮುಂದಾಗುತ್ತಾರೆ. ಅಂತಹ ಪಾಲಕರಿಗೆ ತಿಳಿವಳಿಕೆ ನೀಡುವ ಮೂಲಕ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ವೃತ್ತಿಯಲ್ಲಿ ತೊಡಗಿಸಿದರು ಮಕ್ಕಳ ಹಕ್ಕುಗಳ ರಕ್ಷಣೆ ಮೇಲೆ ಉಲ್ಲಂಘಿಸಿದಂತಾಗುತ್ತದೆ ಎಂದರು.
ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿದ್ದು, ಎಲ್ಲ ಮಕ್ಕಳ ಶಿಕ್ಷಣ ಪಡೆದುಕೊಳ್ಳಬೇಕು. ಇದರಿಂದ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಜಾತಾ ಪಾಟೀಲ ಮಾತನಾಡಿ, ಬಾಲಕಾರ್ಮಿಕ ಪದ್ದತಿಯಿಂದ ಮಕ್ಕಳ ಸುಂದರ ಜೀವನ ಹಾಳಾಗುತ್ತಿದ್ದು, ಈ ಪದ್ದತಿ ಸಂಪೂರ್ಣ ನಿರ್ಮೂಲನೆಯಾಗಬೇಕೆಂದರು. ಮಕ್ಕಳ ಭವಿಷ್ಯವನ್ನು ರೂಪಿಸುವುದು ಪಾಲಕರ ಕರ್ತವ್ಯವಾಗಿದ್ದು, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದರು.
ವಕೀಲ ಪಿ.ಎಸ್.ಭೈರಮಟ್ಟಿ ಮಾತನಾಡಿ, ಬಾಲ್ಯಾವಸ್ಥೆಯಲಿರುವ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಸತ್ಪ್ರಜೆಯನ್ನಾಗಿರುಸ ಕೆಲಸ ಪ್ರಜ್ಞಾವಂತ ನಾಗರಿಕ ಕೆಲಸವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವ ಮೂಲಕ ಆರ್ಥಿಕವಾಗಿ ಸದೃಢರಾಗಲು ಕಾರಣವಾಗಬೇಕು ಎಂದರು. ಅಧ್ಯಕ್ಷತೆ ವಹಿಸಿದ್ದ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಡಾ| ಔದ್ರಾಮ ಪ್ರತಿಜ್ಞಾವಿಧಿ ಬೋಧಿಸಿದರು.
ಇದೇ ಸಂದರ್ಭದಲ್ಲಿ ಬಾದಾಮಿ ತಾಲೂಕಿನ ಕೆರೂರಿನ ಗುರು ಪುಟ್ಟರಾಜ ಜ್ಞಾನ ಜ್ಯೋತಿ ಕಲಾ ತಂಡದಿಂದ ಬಾಲ ಕಾರ್ಮಿಕ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು. ವಕೀಲರ ಸಂಘದ ಅಧ್ಯಕ್ಷ ಸಿ.ಬಿ. ಪಾಟೀಲ, ಕಾರ್ಯದರ್ಶಿ ಎಸ್.ಎ. ಹಾವರಗಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಗುಲಾಬ
ನದಾಫ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಮುಂತಾದವರು ಉಪಸ್ಥಿತರಿದ್ದರು. ಜಿಲ್ಲಾ ಕಾರ್ಮಿಕ ಅಧಿ ಕಾರಿ ಅಶೋಕ ಬಾಳಗಟ್ಟಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
ಹೊಸ ವರ್ಷದ ಕೊಡುಗೆ: ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್
Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.