ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಕಮ್ಮಟಕ್ಕೆ ಚಾಲನೆ

Team Udayavani, Feb 18, 2017, 3:15 PM IST

hub7.jpg

ಧಾರವಾಡ: ಕಲ್ಪನೆಗೆ ಆಲೋಚನಾ ಶಕ್ತಿ ಸೇರಿದರೆ ಅದ್ಭುತ ಕವಿತೆ ಹೊರಹೊಮ್ಮಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ| ಗುರುಲಿಂಗ ಕಾಪಸೆ ಹೇಳಿದರು. ನಗರದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮ ಸಭಾಂಗಣದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಹಮ್ಮಿಕೊಂಡ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಕಮ್ಮಟ ಉದ್ಘಾಟಿಸಿ ಮಾತನಾಡಿದರು.

ಸಾಹಿತ್ಯ ರಚನೆ ಒಂದು ತಪಸ್ಸು. ಅದನ್ನು ನಿರಂತರ ಅಧ್ಯಯನ, ಬರವಣಿಗೆ, ಹವ್ಯಾಸದ ರೂಢಿಯಿಂದಲೇ ಒಲಿಯುವುದು ಎಂದರು. ಮಕ್ಕಳಿಗಾಗಿ ಸಾಹಿತ್ಯ ರಚಿಸುವವರು ಅವರ ಮನಸ್ಸು ಅರಿಯಬೇಕು. ನಂತರ ಅವಳ ಮನಸ್ಸಿನ ಆಳಕ್ಕಿಳಿದು, ಭಾವನೆ, ಆಸೆ-ಆಕಾಂಕ್ಷೆ ಅರಿತು, ಮಕ್ಕಳಂತಾಗಿ ಸಾಹಿತ್ಯ ರಚಿಸಿದಾಗ ಮಕ್ಕಳಿಗೆ ರುಚಿಸುತ್ತದೆ.

ರಚಿಸುವ ಕವಿತೆ ವ್ಯಾಕರಣ, ಲಯಬದ್ಧವಾಗಿ ಇದ್ದಾಗ, ಭಾವ ತುಂಬಿ ಹಾಡಲು ಸಾಧ್ಯ ಎಂದರು. ಕವಿಸಂ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಮಾತನಾಡಿ, ಮಕ್ಕಳು ಕಣ್ಣಿಗೆ ಗೋಚರಿಸಿದ ಹಾಗೂ ಗೋಚರಿಸದ ಕಲ್ಪನಾತೀತ ಸಾಹಿತ್ಯ ರಚಿಸುತ್ತಾರೆ. ಈ ವೇಳೆ ಮುಕ್ತವಾಗಿ ಅವರ ವಿಚಾರಗಳನ್ನು ಆಲಿಸುವ, ಆಸ್ವಾದಿಸುವ ಗುಣ ಮಕ್ಕಳ ಸಾಹಿತಿಗಳಿಗೆ ಇರಬೇಕು.

ಮಕ್ಕಳಲ್ಲಿ ಅಡಗಿರುವ ಭಾವನೆಗಳನ್ನು ಹೇಗೆ ಹೊರ ತೆಗೆಯಬೇಕು. ಅವರನ್ನು ಸಾಹಿತ್ಯ ಕೃಷಿಯ ಚಟುವಟಿಕೆಗೆ ಅಣಿಗೊಳಿಸಬೇಕು. ಅದರಲ್ಲೂ ಸರ್ಕಾರಿ, ಹಿಂದುಳಿದ ವರ್ಗಗಳ, ವಸತಿ ಶಾಲೆಗಳ ಮಕ್ಕಳ ಪ್ರತಿಭೆ ಗುರುತಿಸುವ ಉದ್ದೇಶದಿಂದ ಆಯ್ದ 40 ಜನರನ್ನು ಕಮ್ಮಟಕ್ಕೆ ಆಯ್ಕೆ ಮಾಡಿದೆ ಎಂದರು. ರಂಗ ನಿರ್ದೇಶಕಿ ಎಸ್‌. ಮಾಲತಿ ಮಾತನಾಡಿ, ಟಿವಿ, ಮೊಬೈಲ್‌ಗ‌ಳ ಪ್ರಭಾವದಿಂದ ಮಕ್ಕಳ ಬದುಕು ಸೊರಗುತ್ತಿದೆ.

ಅವರಿಗೆ ಸಂಸ್ಕೃತಿ, ಭಾಷೆ, ಮೌಲ್ಯಗಳು ಸಿಗುತ್ತಿಲ್ಲ. ವೇಗದ ಬದುಕಿನಿಂದ ನಮ್ಮಲ್ಲಿ ಚಿಂತನೆ ಹಾಗೂ ನಾನೇನು ಎಂಬ ಆತ್ಮವಿಮರ್ಶೆ ಸಹ ಇಲ್ಲವಾಗಿದೆ. ಅಪ್ರಾಮಾಣಿಕತೆ, ಭ್ರಷ್ಟಾಚಾರ ತಾಂಡವಾಡುತ್ತಿರುವ ಇಂದಿನ ಸಮಾಜದಲ್ಲಿ ಮಕ್ಕಳು ಉತ್ತಮವಾಗಿ ಬದುಕಲು ಸಾಧ್ಯವಿಲ್ಲ. ಸಂಪೂರ್ಣ ಕತ್ತಲೆ ಆವರಿಸಿರುವ ಸಂದರ್ಭದಲ್ಲಿ ಕಮ್ಮಟ ಎನ್ನುವಂತಹ ಸಣ್ಣ ಹಣತೆ ಹಚ್ಚುವ ಮೂಲಕ ಬೆಳಕು ಮೂಡಿಸುವ ಕೆಲಸ ನಡೆಯುತ್ತಿರುವುದು ಶ್ಲಾಘನೀಯ ಎಂದರು. 

ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ಮಲ್ಲಿಕಾರ್ಜುನ ಮಾಲಿಗೇರ, ಸಾಹಿತಿಗಳಾದ ನಿಂಗಣ್ಣ ಕುಂಟಿ, ವಿವಿಧ ಜಿಲ್ಲೆಗಳ ಮಕ್ಕಳ ಸಾಹಿತಿಗಳು, ಇತರರು ಇದ್ದರು. ಕಮ್ಮಟ ನಿರ್ದೇಶಕ ಡಾ|ನಿಂಗು ಸೊಲಗಿ ಸ್ವಾಗತಿಸಿ, ನಿರೂಪಿಸಿದರು.   

ಟಾಪ್ ನ್ಯೂಸ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.