ಚನ್ನಮ್ಮನ ಸ್ಮಾರಕ ರಾಷ್ಟ್ರೀಯ ಸ್ಮಾರಕವಾಗಲಿ
Team Udayavani, Jun 11, 2018, 5:16 PM IST
ಚನ್ನಮ್ಮ ಕಿತ್ತೂರು: ಪ್ರಥಮ ಸ್ವಾತಂತ್ರ್ಯ ಹೋರಾಟಕ್ಕೆ ಕಿಚ್ಚು ಹಚ್ಚಿದ ರಾಣಿ ಚನ್ನಮ್ಮಾಜಿಯ ಐತಿಹಾಸಿಕ ಸ್ಮಾರಕವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಬೇಕು ಹಾಗೂ ಕಿತ್ತೂರು ಕೋಟೆಯನ್ನು ಮರುನಿರ್ಮಾಣ ಮಾಡಬೇಕೆಂದು ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
ಪಟ್ಟಣದ ಎಪಿಎಂಸಿ ಆವರಣದಲ್ಲಿ ರವಿವಾರ ಆಯೋಜಿಸಿದ್ದ ‘ನಮ್ಮ ನಡಿಗೆ ಚನ್ನಮ್ಮನ ನಾಡಿಗೆ’ ಸದ್ಭಾವನಾ ಪಾದಯಾತ್ರೆಯ ಸಮಾರೋಪ ಸಮಾರಂಭ ಹಾಗೂ ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಅವರು, ಚನ್ನಮ್ಮಾಜಿಯ ಕೋಟೆಯ ಕಟ್ಟಡವೂ ಹಾಳಾಗಿದ್ದು ಈಗ ಅದು ಪ್ರಾಚ್ಯವಸ್ತು ಇಲಾಖೆಯ ಅಧೀನದಲ್ಲಿದೆ. ಈ ಇಲಾಖೆ ಕಾನೂನಿನ ಅನುಸಾರ ಈಗಿರುವ ಕೋಟೆಯನ್ನು ಕಟ್ಟಲು ಅನುಮತಿ ಇಲ್ಲದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಿತ್ತೂರಿನಲ್ಲಿರುವ ಸರ್ಕಾರಿ ಜಾಗೆಯಲ್ಲಿ ಕೋಟೆಯ ಕಟ್ಟಡದಂತೆ ಇನ್ನೊಂದು ಕಟ್ಟಡವನ್ನು ಕಟ್ಟುವ ಮುಖಾಂತರ ಚನ್ನಮ್ಮಾಜಿಗೆ ಗೌರವ ಸಲ್ಲಿಸಬೇಕು ಹಾಗೂ ಕಿತ್ತೂರನ್ನು ಪ್ರವಾಸಿ ತಾಣವನ್ನಾಗಿಸಬೇಕು ಎಂದರು.
ಝಾನ್ಸಿ ರಾಣಿ ಲಕ್ಷ್ಮೀಬಾಯಿಯ ಮುಂಚೆಯೇ 1824ರಲ್ಲಿ ರಾಣಿ ಚನ್ನಮ್ಮಾಜಿಯು ಬ್ರಿಟಿಷರ ವಿರುದ್ಧ ಹೊರಾಟ ನಡೆಸಿ ಅವರಿಗೆ ಸೋಲಿನ ರುಚಿ ಉಣಿಸಿದ್ದರು. ಆದರೆ, ಇತಿಹಾಸದಲ್ಲಿ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿಯನ್ನಾಗಿ ರಾಣಿ ಲಕ್ಷ್ಮೀಬಾಯಿಯನ್ನು ನಮೂದಿಸಲಾಗಿದೆ. ಈ ಕೂಡಲೇ ಸರ್ಕಾರದ ಮಟ್ಟದಲ್ಲಿ ಹಾಗೂ ಇತಿಹಾಸದಲ್ಲಿ ಚನ್ನಮ್ಮಾಜಿಯನ್ನು ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿಯನ್ನಾಗಿ ದಾಖಲಿಸಬೇಕು ಎಂದರು.
ವೀರಶೈವ ಹಾಗೂ ಲಿಂಗಾಯತ ನಮ್ಮೆಲ್ಲರಿಗೂ ತಂದೆ ತಾಯಿಗಳಿದ್ದಂತೆ, ನಾವೆಲ್ಲರೂ ಕೂಡ ಬಸವಣ್ಣನವರ ಎಲ್ಲ ಆಚಾರ ವಿಚಾರಗಳನ್ನು ಪ್ರೀತಿಸುವ ಜೊತೆಗೆ ಜೀವನದಲ್ಲಿ ಅಳವಡಿಸಿಕೊಂಡಿದ್ದೇವೆ ಎಂದರು.
ಶಾಸಕ ಬಸವರಾಜ ಬೊಮ್ಮಾಯಿ ಮಾತನಾಡಿ, ನಮ್ಮ ಸ್ವಾಭಿಮಾನ ಹಾಗೂ ಅಸ್ತಿತ್ವವನ್ನು ಉಳಿಸುವ ಶಕ್ತಿ ಈ ನೆಲದಲ್ಲಿದೆ. ಈ ನಿಟ್ಟಿನಲ್ಲಿ ಚನ್ನಮ್ಮಾಜಿಯ ಸ್ಮಾರಕವನ್ನು ರಾಷ್ಟ್ರೀಯ ಸ್ಮಾರಕವನ್ನಾಗಿಸಬೇಕು ಹಾಗೂ ಚನ್ನಮ್ಮಾಜಿಯ ವಿಜಯೋತ್ಸವವನ್ನು ರಾಷ್ಟ್ರೀಯ ಮಟ್ಟದ ಉತ್ಸವವನ್ನಾಗಿಸಲು ಎಲ್ಲರೂ ಶ್ರಮಿಸುವ ಅಗತ್ಯವಿದೆ ಎಂದರು.
ಶಾಸಕ ಮಹಾಂತೇಶ ದೊಡಗೌಡರ ಮಾತನಾಡಿ, ವಚನಾನಂದ ಶ್ರೀಗಳು ಎಲ್ಲರಿಗೂ ಒಳ್ಳೆಯ ಮಾರ್ಗದರ್ಶನ ನೀಡುತ್ತಿದ್ದು, ಎಲ್ಲರೂ ಇವರ ಸೂಚನೆಯಂತೆ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು. ಕಿತ್ತೂರು ಉತ್ಸವವನ್ನು ವಿಶೇಷವಾಗಿ ಹಾಗೂ ಜನೋತ್ಸವವಾಗಿ ಆಚರಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು. ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿಯ ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ಹಗರಿಬೊಮ್ಮನಹಳ್ಳಿ ಶಾಖಾಮಠದ ಮಹಾಂತ ಸ್ವಾಮೀಜಿ, ಸಂಗನಬಸವ ಸ್ವಾಮೀಜಿ, ಶಾಂತಮೂರ್ತಿ ಲಕ್ಷ್ಮಣ ಮುತ್ಯಾ ಸ್ವಾಮೀಜಿ, ಅಭಿನವ ಸಂಗನಬಸವ ಸ್ವಾಮೀಜಿ, ಮಲ್ಲಿಕಾರ್ಜುನ ಸ್ವಾಮೀಜಿ, ಯೋಗೇಶ್ವರ ತಾಯಿಗಳು ಸಾನ್ನಿಧ್ಯ ವಹಿಸಿದ್ದರು. ಶಾಸಕರಾದ ವಿರುಪಾಕ್ಷಪ್ಪ ಬಳ್ಳಾರಿ, ಸಿ.ಸಿ.ಪಾಟೀಲ, ಸಿದ್ದು ಸವದಿ, ಸಿ.ಎಂ. ನಿಂಬಣ್ಣವರ, ಮಾಜಿ ಸಂಸದ ಮಂಜುನಾಥ ಕುಣ್ಣೂರ, ಮಾಜಿ ಶಾಸಕ ಎಸ್.ವೈ. ಚಿಕ್ಕನಗೌಡ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಇದ್ದರು.
ವೀರಶೈವ ಹಾಗೂ ಲಿಂಗಾಯತ ನಮ್ಮೆಲ್ಲರಿಗೂ ತಂದೆ ತಾಯಿಗಳಿದ್ದಂತೆ, ನಾವೆಲ್ಲರೂ ಕೂಡ ಬಸವಣ್ಣನವರ ಎಲ್ಲ ಆಚಾರ ವಿಚಾರಗಳನ್ನು ಪ್ರೀತಿಸುವ ಜೊತೆಗೆ ಜೀವನದಲ್ಲಿ ಅಳವಡಿಸಿಕೊಂಡಿದ್ದೇವೆ. ಸರ್ವ ಸಂಘ ಹಾಗೂ ಸಮಾಜದ ಜನರನ್ನು ಪ್ರೀತಿ ವಿಶ್ವಾಸದಿಂದ ಕಾಣುವುದರ ಜೊತೆಗೆ ಒಳ್ಳೆಯ ಸಮಾಜ ನಿರ್ಮಾಣ ಮಾಡಬೇಕಾಗಿದೆ. ಪಂಚಮಸಾಲಿ ಸಮಾಜ ಎಂದಿಗೂ ಜಗತ್ತಿಗೆ ಅನ್ನವನ್ನು ನೀಡುವ ಕಾರ್ಯದಲ್ಲಿ ತೊಡಗಿಕೊಂಡಿದೆ.
ವಚನಾನಂದ ಸ್ವಾಮೀಜಿ, ಹರಿಹರ
ಪಂಚಮಸಾಲಿ ಪೀಠದ ಜಗದ್ಗುರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.